Hiriyur Road Accident: ಚಿತ್ರದುರ್ಗ ಬಳಿ ಕಾರು ಪಲ್ಟಿ, ಯಾದಗಿರಿ ಮೂಲದ ಮಗು ಸೇರಿ ಮೂವರು ದಾರುಣ ಸಾವು!

Published : Oct 03, 2025, 08:49 PM IST
Hiriyur road accident three deaths in chitradurga

ಸಾರಾಂಶ

Hiriyur road accident: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಬಳಿ ಕಾರು ಪಲ್ಟಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮಗು ಸೇರಿದಂತೆ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಯಾದಗಿರಿ ಮೂಲದವರೆಂದು ಗುರುತಿಸಲಾದ ಮೃತರ ದುರ್ಘಟನೆಗೆ ಚಾಲಕನ ನಿಯಂತ್ರಣ ತಪ್ಪಿದ್ದೇ ಕಾರಣ ಎಂದು ಹೇಳಲಾಗಿದೆ.  ಕಳವಳ ಮೂಡಿಸಿದೆ.

ಚಿತ್ರದುರ್ಗ, (ಅ.3): ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಮೇಟಿಕುರ್ಕೆ ಗ್ರಾಮದ ಬಳಿ ಶುಕ್ರವಾರ ಭೀಕರ ಕಾರು ಅಪಘಾತ ಸಂಭವಿಸಿದ್ದು, ಈ ದುರ್ಘಟನೆಯಲ್ಲಿ ಮಗು ಸೇರಿದಂತೆ ಮೂವರು ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ.

ಮಲ್ಲಮ್ಮ (26), ಸರೋಜಮ್ಮ (25) ಹಾಗೂ ಒಂದು ಪುಟ್ಟ ಮಗು ಮೃತ ದುರ್ದೈವಿಗಳು. ಮೃತರೆಲ್ಲರೂ ಯಾದಗಿರಿ ಮೂಲದವರಾಗಿದ್ದಾರೆ ಎಂದು ತಿಳಿದುಬಂದಿದೆ. ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಈ ದುರಂತ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಘಟನೆಯ ಸ್ಥಳಕ್ಕೆ ಡಿವೈಎಸ್ಪಿ ಶಿವಕುಮಾರ್ ಮತ್ತು ಸಿಪಿಐ ಗುಡ್ಡಪ್ಪ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಹಿರಿಯೂರು ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ವಿದ್ಯಾರ್ಥಿ ಯಲ್ಲಾಲಿಂಗ ಕೊಲೆ ಪ್ರಕರಣದಲ್ಲಿ ಆರೋಪಿಗಳು ಖುಲಾಸೆ, ತೀರ್ಪಿನ ವಿಷಯ ತಿಳಿದು ತಾಯಿ ಕಣ್ಣೀರು!

ರಸ್ತೆ ಅಪಘಾತ ಹೆಚ್ಚಳ ಆತಂಕ:

ರಾಜ್ಯದಲ್ಲಿ ರಸ್ತೆ ಅಪಘಾತಗಳು ದಿನೇದಿನೆ ಕಡಿಮೆ ಆಗುವ ಬದಲು ಹೆಚ್ಚಳವಾಗುತ್ತಿರುವುದು ಗಂಭೀರ ಕಳವಳಕ್ಕೆ ಕಾರಣವಾಗಿದೆ. ವೇಗದ ಚಾಲನೆ, ರಸ್ತೆಗಳ ಕಳಪೆ ಗುಣಮಟ್ಟ, ಸುರಕ್ಷತಾ ಕ್ರಮಗಳ ಕೊರತೆಯೇ ಇಂತಹ ದುರಂತಗಳಿಗೆ ಪ್ರಮುಖ ಕಾರಣವಾಗಿವೆ. 

ಇದನ್ನೂ ಓದಿ: ಯಾದಗಿರಿ: ಇ-ಖಾತಾ ಮಾಡಿಕೊಡಲು ₹8000 ಲಂಚ, ಲೋಕಾ ಬಲೆಗೆ ಬಿದ್ದ ಬಿಲ್ ಕಲೆಕ್ಟರ್

ಸದ್ಯ ಪ್ರಕರಣ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಾರ್ವಜನಿಕರು ರಸ್ತೆ ಸುರಕ್ಷತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿದರೆ ಅಪಘಾತಗಳನ್ನ ತಪ್ಪಿಸಬಹುದಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಂಗಳೂರು ಅಪಾರ್ಟ್‌ಮೆಂಟ್‌ನ 16 ಕುಟುಂಬಗಳಿಗೆ ರೌಡಿಸಂ ದರ್ಶನ; ಮಾಟ-ಮಂತ್ರ ಮಾಡಿಸಿ ಕಿರುಕುಳ!
ಕೆಲಸ ಇಲ್ಲದ ಗಂಡನಿಗೆ ಪತ್ನಿ ಶೀಲದ ಮೇಲೆ ಶಂಕೆ: ನಿದ್ರೆಯಲ್ಲಿದ್ದ ಮಗಳ ಕತ್ತು ಸೀಳಿದ ಪತಿ