
ಬೆಂಗಳೂರು (ಜು.2): ಬೆಂಗಳೂರಿನ ಹೊರವಲಯದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. 56 ವರ್ಷದ ಎಚ್‌ಐವಿ ಸೋಂಕಿತ ವ್ಯಕ್ತಿಯೊಬ್ಬ ತನ್ನದೇ ಸ್ನೇಹಿತನನ್ನು ಅತ್ಯಾಚಾರಗೈದು ಆತನ ಮನೆಯನ್ನು ದರೋಡೆ ಮಾಡಿರುವ ವಿಚಿತ್ರ ಘಟನೆ ನಡೆದಿದ್ದು, ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ ಎಂದು ಸೋಮವಾರ ವರದಿಯಾಗಿದೆ. ಬೆಂಗಳೂರು ಉತ್ತರ ತಾಲೂಕಿನ ನೆಲಮಂಗಲ ಸಮೀಪದ ಹಳ್ಳಿಯಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.
ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಳೆಯ ನೆರೆ, ಮುಖ್ಯದ್ವಾರವನ್ನೇ ಬಂದ್ ಮಾಡಿದ ಗ್ರಾಮಸ್ಥರು!
ಪೊಲೀಸರ ಮಾಹಿತಿಯಂತೆ, ಎನ್‌ಜಿಒವೊಂದರಲ್ಲಿ ಕೆಲಸ ಮಾಡುತ್ತಿದ್ದ ಸಂತ್ರಸ್ತನೊಂದಿಗೆ ಒಂದು ವರ್ಷದ ಹಿಂದೆ ಆರೋಪಿ ಶ್ಯಾಮ್ ಪಾಟೀಲ್ ಸ್ನೇಹ ಬೆಳೆಸಿದ್ದ. ತಾನು ಕ್ಷಯರೋಗದಿಂದ ಬಳಲುತ್ತಿದ್ದೇನೆ ಎಂದು ಪಾಟೀಲ್ ಹೇಳಿಕೊಂಡು ಸಂತ್ರಸ್ತನ ವಿಶ್ವಾಸ ಗಳಿಸಿದ್ದ. ಇತ್ತೀಚೆಗಷ್ಟೇ ಸಂತ್ರಸ್ತನ ಪತ್ನಿ ಮತ್ತು ಮಕ್ಕಳು ಸ್ವಗ್ರಾಮಕ್ಕೆ ತೆರಳಿದ್ದು, ಆರೋಪಿ ಪಾಟೀಲ ಈ ಸಮಯವನ್ನು ತನ್ನ ಲಾಭಕ್ಕೆ ಪಡೆದುಕೊಂಡನು.
ಸಂತ್ರಸ್ತ ಒಂಟಿಯಾಗಿ ಮನೆಯಲ್ಲಿದ್ದಾನೆ ಎಂಬ ವಿಚಾರ ತಿಳಿದುಕೊಂಡು ಪಾಟೀಲ್ ಸ್ನೇಹಿತನ ಮನೆಗೆ ಭೇಟಿ ನೀಡಿ, ಅಲ್ಲಿ ಮಾತನಾಡುತ್ತಾ ಜ್ಯೂಸ್ ನಲ್ಲಿ ನಿದ್ದೆ ಮಾತ್ರೆ ಬೆರೆಸಿ ಕೊಟ್ಟಿದ್ದಾನೆ. ಸಂತ್ರಸ್ತ ವ್ಯಕ್ತಿ ಜ್ಯೂಸ್ ಕುಡಿದ ತಕ್ಷಣ ಪ್ರಜ್ಞಾಹೀನ ಸ್ಥಿತಿಗೆ ತಲುಪುತ್ತಿದ್ದಂತೆ, ಪಾಟೀಲ್ ಆತನ ಮುಖಕ್ಕೆ ಸ್ಪ್ರೇ ಸಿಂಪಡಿಸಿ ಸಂಪೂರ್ಣ ಪ್ರಜ್ಞಾಹೀನ ಸ್ಥಿತಿಗೆ ತಲುಪಿ ಅಸಹಾಯಕರನ್ನಾಗಿ ಮಾಡಿದ್ದಾನೆ. ಬಳಿಕ ಹೆಚ್‌ಐವಿ ಸೋಂಕಿತ ಆರೋಪಿ ಸ್ನೇಹಿತನ ಮೇಲೆ ಅತ್ಯಾಚಾರ ಎಸಗಿ ಮನೆಯ ಕಬೋಡ್ ನಲ್ಲಿಟ್ಟಿದ್ದ 88 ಗ್ರಾಂ ಚಿನ್ನಾಭರಣ, 20 ಸಾವಿರ ನಗದು ಜೊತೆಗೆ ಮೊಬೈಲ್ ಹ್ಯಾಂಡ್ ಸೆಟ್ ದೋಚಿದ್ದಾನೆ.
ಮಾಜಿ ಸಂಸದೆ ಸುಮಲತಾ ವಿರೋಧಿಸಿದ್ದ ಕೆಆರ್‌ಎಸ್ ಬಳಿ ಟ್ರಯಲ್ ಬ್ಲಾಸ್ಟ್‌ಗೆ ಜಿಲ್ಲಾಡಳಿತ ಸಿದ್ಧತೆ!
ಮರುದಿನ ಬೆಳಗ್ಗೆ ಸಂತ್ರಸ್ತನಿಗೆ ಎಚ್ಚರವಾಗಿದ್ದು, ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿರುವುದು ಮತ್ತು ದರೋಡೆ ಮಾಡಿರುವುದು ಗಮನಕ್ಕೆ ಬಂದಿದೆ. ತಕ್ಷಣ ಮಾದನಾಯಕನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಆರೋಪಿ ಶ್ಯಾಮ್ ಪಾಟೀಲ್ ಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ