ಮನೆಯಲ್ಲಿ ಒಂಟಿಯಾಗಿ ನೆಲೆಸಿದ್ದ ವೃದ್ಧೆಯ ಕೈ-ಕಾಲು ಕಟ್ಟಿ ಉಸಿರುಗಟ್ಟಿಸಿ ಕೊಲೆ ಮಾಡಿ ವೃದ್ದೆಯ ಮನೆಯಲ್ಲಿದ್ದ ಚಿನ್ನಾಭರಣ ಮತ್ತು ಬೆಳೆಬಾಳುವ ವಸ್ತುಗಳನ್ನು ದೋಚಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರು (ಮೇ.28): ಮನೆಯಲ್ಲಿ ಒಂಟಿಯಾಗಿ ನೆಲೆಸಿದ್ದ ವೃದ್ಧೆಯ ಕೈ-ಕಾಲು ಕಟ್ಟಿ ಉಸಿರುಗಟ್ಟಿಸಿ ಕೊಲೆ ಮಾಡಿ ವೃದ್ದೆಯ ಕೊರಳಿನಲ್ಲಿದ್ದ ಚಿನ್ನದ ಸರ, ಮನೆಯಲ್ಲಿದ್ದ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಹಾಲಕ್ಷ್ಮಿ ಲೇಔಟ್ ನಿವಾಸಿ ಕಮಲಾ (82) ಕೊಲೆಯಾದ ದುರ್ದೈವಿ. ಶನಿವಾರ ಸಂಜೆ 4ರಿಂದ 7 ಗಂಟೆಯೊಳಗೆ ಈ ಕೃತ್ಯ ನಡೆದಿದೆ.
ಕೊಲೆಯಾದ ಕಮಲ ಅವರ ಪತಿ ಆರು ತಿಂಗಳ ಹಿಂದೆ ಮೃತಪಟ್ಟಿದ್ದರು. ಇವರ ಮೂವರು ಮಕ್ಕಳು ನಗರದ ಬೇರೆಡೆ ಪ್ರತ್ಯೇಕವಾಗಿ ನೆಲೆಸಿದ್ದಾರೆ. ಹೀಗಾಗಿ ಮನೆಯಲ್ಲಿ ಕಮಲಾ ಒಂಟಿಯಾಗಿದ್ದರು. ಸಂಜೆ 7 ಗಂಟೆ ಸುಮಾರಿಗೆ ನೆರೆ ಮನೆಯವರು ಕಮಲಾ ಅವರನ್ನು ಮಾತನಾಡಿಸಲು ಮನೆ ಬಳಿ ಬಂದಾಗ ಬಾಗಿಲು ತೆರೆದಿರುವುದು ಕಂಡು ಬಂದಿದೆ. ಈ ವೇಳೆ ಒಳ ಹೋಗಿ ನೋಡಿದಾಗ ಕೈ-ಕಾಲು ಕಟ್ಟಿಬಾಯಿಗೆ ಪ್ಲಾಸ್ಟರ್ ಹಾಕಿದ್ದ ಪ್ರಜ್ಞಾಹೀನ ಸ್ಥಿತಿಯಲ್ಲಿ ಕಮಲಾ ಪತ್ತೆಯಾಗಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ಮಾಡಿದಾಗ ಕಮಲಾ ಅವರು ಮೃತಪಟ್ಟಿರುವುದು ಖಚಿತವಾಗಿದೆ.
undefined
ದುಷ್ಕರ್ಮಿಗಳು ಹಾಡಹಗಲೇ ಮನೆಗೆ ಬಂದು ಕಮಲಾ ಅವರ ಕೈ-ಕಾಲು ಕಟ್ಟಿ, ಬಾಯಿಗೆ ಪ್ಲಾಸ್ಟರ್ ಸುತ್ತಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ. ಬಳಿಕ ಕಮಲಾ ಮೈ ಮೇಲಿದ್ದ ಒಡವೆಗಳು ಸೇರಿದಂತೆ ಮನೆಯಲ್ಲಿದ್ದ ಒಡವೆಗಳನ್ನು ದೋಚಿದ್ದಾರೆ. ಮನೆಯಲ್ಲಿ ಏನೆಲ್ಲಾ ಕಳುವಾಗಿದೆ ಎಂಬುದರ ಬಗ್ಗೆ ಸದ್ಯಕ್ಕೆ ಮಾಹಿತಿ ಇಲ್ಲ. ಈ ಕೃತ್ಯದ ಹಿಂದೆ ವೃದ್ಧೆಯ ಪರಿಚಿತರ ಕೈವಾಡವಿರುವ ಬಗ್ಗೆ ಪೊಲೀಸರು ಶಂಕಿಸಿದ್ದಾರೆ.
ಗಂಡನ ಬಿಟ್ಟು ಸೋಷಿಯಲ್ ಮೀಡಿಯಾ ಫ್ರೆಂಡ್ ಹಿಂದೆ ಹೋದ ಸುಂದರಿ, ಹೆಣವಾಗಿ ಸಿಕ್ಕಳು!
ಘಟನೆ ಸಂಬಂಧ ಕೊಲೆಯಾದ ಕಮಲಾ ಅವರ ಮನೆಯ ಸುತ್ತಮುತ್ತಲ ನಿವಾಸಿಗಳಿಂದ ಪೊಲೀಸರು ಮಾಹಿತಿ ಸಂಗ್ರಹಿಸಿದ್ದಾರೆ. ಘಟನಾ ಸ್ಥಳದ ಸುತ್ತಮುತ್ತಲ ಸಿಸಿಟಿವಿ ಕ್ಯಾಮರಾ ದೃಶ್ಯಾವಳಿ ಪರಿಶೀಲಿಸಿದ್ದು, ದುಷ್ಕರ್ಮಿಗಳ ಪತ್ತೆಗೆ ತನಿಖೆ ತೀವ್ರಗೊಳಿಸಿದ್ದಾರೆ. ಈ ಸಂಬಂಧ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Bengaluru: ಬಾಡಿಗೆ ಮನೆ ಮಾಲೀಕರೇ ಹುಷಾರ್, ತಲೆ ಒಡೆಯುವ ಗ್ಯಾಂಗ್ ಬಂದಿದೆ
ಆರೋಪಿಗಳ ಪತ್ತೆಗೆ ಮುಂದಾಗಿರೋ ಪೊಲೀಸರು. ಏರಿಯಾದ ಸುತ್ತಮುತ್ತಲಿನ ಸಿಸಿಟಿವಿ ಪರಿಶೀಲನೆ ಮಾಡುತ್ತಿದ್ದಾರೆ. ಅಕ್ಕ ಪಕ್ಕದ ಮನೆಯವರು, ಸಂಬಂಧಿಕರ ವಿಚಾರಣೆ ನಡೆಸುತ್ತಿದ್ದಾರೆ. ಕಳೆದ ಒಂದು ವಾರದ ಹಿಂದೆ ಮನೆ ಬಳಿ ಪದೇ ಪದೇ ಓಡಾಡಿದೋರ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ. ಜೊತೆಗೆ ವೃದ್ದೆಯ ಮೊಬೈಲ್ ಪರಿಶೀಲನೆ ಕೂಡ ಮಾಡಿದ್ದು, ಕಾಲ್ ಡೀಟೆಲ್ಸ್, ಕೊನೆ ಕರೆಯ ಬಗ್ಗೆ ತನಿಖೆ ಆರಂಭಿಸಿದ್ದಾರೆ. ಏರಿಯಾದ ಹಳೇ ಎಮ್ ಓಬಿ, ಅಫರಾಧ ಹಿನ್ನೆಲೆ ಹೊಂದಿರೋ ಆರೋಪಿಗಳ ಡೀಟೆಲ್ಸ್ ಕೂಡ ಪೊಲೀಸರು ಕಲೆ ಹಾಕುತ್ತಿದ್ದಾರೆ. ವಿಶೇಷ ತಂಡದಿಂದ ವೃದ್ದೆಯ ಮರ್ಡರ್ ಕೇಸ್ ತನಿಖೆ ನಡೆಯುತ್ತಿದೆ.