ಗೋರಖ್‌ಪುರ್: ರೈಲು ನಿಲ್ದಾಣದಿಂದ ನಿರಾಶ್ರಿತ ಮಹಿಳೆ ಅಪಹರಿಸಿ ಗ್ಯಾಂಗ್‌ ರೇಪ್

By Suvarna NewsFirst Published Sep 9, 2022, 3:35 PM IST
Highlights

Crime News: 25 ವರ್ಷದ ನಿರಾಶ್ರಿತ ಮಹಿಳೆಯನ್ನು ಮೂವರು ವ್ಯಕ್ತಿಗಳು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಉತ್ತರಪ್ರದೇಶದ ಗೋರಖ್‌ಪುರದಲ್ಲಿ ನಡೆದಿದೆ

ಗೋರಖ್‌ಪುರ್ (ಉತ್ತರಪ್ರದೇಶ ಸೆ. 09): ಉತ್ತರ ಪ್ರದೇಶದ ಗೋರಖ್‌ಪುರ ರೈಲು ನಿಲ್ದಾಣದ ಬಳಿ 25 ವರ್ಷದ ನಿರಾಶ್ರಿತ ಮಹಿಳೆಯನ್ನು ಮೂವರು ವ್ಯಕ್ತಿಗಳು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಬುಧವಾರ ರಾತ್ರಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತ ಮಹಿಳೆ ಮಹಾರಾಜ್‌ಗಂಜ್ ಜಿಲ್ಲೆಯ ನಿವಾಸಿಯಾಗಿದ್ದು, ರೈಲ್ವೇ ನಿಲ್ದಾಣದ ಪ್ಲಾಟ್‌ಫಾರ್ಮ್ ಸಂಖ್ಯೆ 1 ರ ಹೊರಗೆ ಧರ್ಮಶಾಲಾ ಬಜಾರ್ ಸೇತುವೆಯ ಬಳಿ ವಾಸಿಸುತ್ತಿದ್ದರು ಎಂದು ವರದಿಗಳು ತಿಳಿಸಿವೆ. ಮಹಿಳೆ ಅದೇ ರಾತ್ರಿ ರೈಲ್ವೆ ಪೊಲೀಸ್ (ಜಿಆರ್‌ಪಿ) ಠಾಣೆಯಲ್ಲಿ ಈ ಸಂಬಂಧ ದೂರು ನೀಡಿದ್ದಾಳೆ. ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಚಿಕಿತ್ಸೆಗಾಗಿ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. 

ಧರ್ಮಶಾಲಾ ಬಜಾರ್ ಮಂಡಿ ರೈಲು ಮಾರ್ಗದ ಬಳಿ ಮೂವರು ಯುವಕರು  ತನ್ನನ್ನು ಅಪಹರಿಸಿ  ಅತ್ಯಾಚಾರವೆಸಗಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ ಎಂದು ಎಸ್ಪಿ (ರೈಲ್ವೆ) ಅವಧೇಶ್ ಸಿಂಗ್ ಹೇಳಿದ್ದಾರೆ.  ಮಹಿಳೆ ಸಹಾಯಕ್ಕಾಗಿ ಕಿರುಚಿದಾಗ ಆರೋಪಿಗಳು ಆಕೆಯನ್ನು ಥಳಿಸಿ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಸಿಂಗ್ ಹೇಳಿದ್ದಾರೆ. 

"ಜಿಆರ್‌ಪಿ ಪೊಲೀಸ್ ಠಾಣೆಯಲ್ಲಿ ಸಾಮೂಹಿಕ ಅತ್ಯಾಚಾರದ ಪ್ರಕರಣವನ್ನು ದಾಖಲಿಸಲಾಗಿದೆ. ಆಕೆಯ ಹೇಳಿಕೆಗಳನ್ನು ದಾಖಲಿಸಲಾಗಿದೆ ಮತ್ತು ಆಕೆಯನ್ನು ಬಿಆರ್‌ಡಿ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ" ಎಂದು ಎಸ್‌ಪಿ ತಿಳಿಸಿದ್ದಾರೆ. 

ಮಹಿಳೆ ಮೇಲೆ ಇಬ್ಬರು ಸ್ನೇಹಿತರಿಂದ ಸಾಮೂಹಿಕ ಅತ್ಯಾಚಾರ: ಕಾಮುಕರ ಬಂಧನ

ಆರೋಪಿಗಳ ಬಗ್ಗೆ ಸಂತ್ರಸ್ತ ಮಹಿಳೆಯ ವಿವರಣೆಯ ಆಧಾರದ ಮೇಲೆ ಮತ್ತು ಅಪರಾಧ ಸ್ಥಳದ ಬಳಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಬಳಸಿಕೊಂಡು ಆರೋಪಿಗಳನ್ನು ಬಂಧಿಸಲು ಪೊಲೀಸರು ಹುಡುಕಾಟ ನಡೆಸಿದ್ದಾರೆ ಎಂದು ಸಿಂಗ್ ಹೇಳಿದ್ದಾರೆ.

ಮಂಗಳೂರು:‌ ಮಗಳ ಅತ್ಯಾಚಾರ: ತಂದೆಗೆ 15 ವರ್ಷ ಕಠಿಣ ಸಜೆ: ಅಪ್ರಾಪ್ತ ಮಗಳನ್ನು ಅತ್ಯಾಚಾರವೆಸಗಿದ ಪ್ರಕರಣ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ (ಶೀಘ್ರಪಥ -2) ನ್ಯಾಯಾಲಯದಲ್ಲಿ ಸಾಬೀತಾಗಿದ್ದು, ಅಪರಾಧಿ ತಂದೆಗೆ 15 ವರ್ಷಗಳ ಕಠಿಣ ಸಜೆ ಮತ್ತು 25 ಸಾವಿರ ರು. ದಂಡ ವಿಧಿಸಿದೆ.

2018ರ ಜನವರಿಯಲ್ಲಿ ಬಂಟ್ವಾಳ ತಾಲೂಕು ಮೆಲ್ಕಾರ್‌ ಮತ್ತು ಇರಾ ಗ್ರಾಮದಲ್ಲಿ ತಂದೆಯಿಂದಲೇ ಅಪ್ರಾಪ್ತೆ ಮಗಳನ್ನು ಅತ್ಯಾಚಾರವೆಸಗಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಅಂದಿನ ಪೊಲೀಸ್‌ ವೃತ್ತ ನಿರೀಕ್ಷಕ ಶರಣಗೌಡ ಹಾಗೂ ಟಿ. ಡಿ. ನಾಗರಾಜ, ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು.

ಅಪ್ರಾಪ್ತ ಮಗಳ ಮೇಲೆ ತಂದೆಯಿಂದ ಅತ್ಯಾಚಾರಕ್ಕೆ ಯತ್ನ: ಬಂಧನ, ಪೊಲೀಸರಿಂದ ಮುಂದೆ ತಪ್ಪೊಪ್ಪಿಗೆ

ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಧೀಶ ಕೆ. ಎಮ್‌ ರಾಧಾಕೃಷ್ಣ ಅವರು ಸಮಗ್ರ ವಿಚಾರಣೆ ನಡೆಸಿ ಅಪರಾಧ ಸಾಬೀತುಪಡಿಸಿ, ಅಪರಾಧಿಗೆ 15 ವರ್ಷಗಳ ಕಠಿಣ ಸೆರೆವಾಸ ಹಾಗೂ 25 ಸಾವಿರ ರು. ದಂಡ ವಿಧಿಸಿ ತೀರ್ಪು ನೀಡಿದರು. ಸರ್ಕಾರಿ ಅಭಿಯೋಜಕ ವೆಂಕಟರಮಣ ಸ್ವಾಮಿ ವಾದ ಮಂಡಿಸಿದ್ದರು.

click me!