ಕೊಳ್ಳೇಗಾಲ, ಟಿ.ನರಸೀಪುರ ಮುಖ್ಯರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಕಾರ್ ನಲ್ಲಿದ್ದ ಮೃತರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ಮೃತರೆಲ್ಲರೂ ಬಳ್ಳಾರಿ ಮೂಲದವೆಂದು ತಿಳಿದು ಬಂದಿದೆ.
ಮೈಸೂರು (ಮೇ.29): ಮೈಸೂರಿನ ಕೊಳ್ಳೇಗಾಲ-ಟಿ.ನರಸೀಪುರ ಮುಖ್ಯರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಮೃತರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ಗಂಭೀರವಾಗಿ ಗಾಯಗೊಂಡವರನ್ನು ಮೈಸೂರು (Mysuru) ಆಸ್ಪತ್ರೆಗೆ ದಾಖಲಿಸಲಾಗಿದೆ. ಜನಾರ್ಧನ್, ಶಶಿಕುಮಾರ್, ಮಗು ಪುನೀತ್ ಗಂಭೀರ ಗಾಯಗೊಂಡರಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ. ಖಾಸಗಿ ಬಸ್ ಮತ್ತು ಇನೋವಾ ಕಾರು ನಡುವೆ ಈ ಅಪಘಾತ (Accident) ಸಂಭವಿಸಿದ್ದು, ಇನೋವಾ ಕಾರು ಸಂಪೂರ್ಣ ನಜ್ಜುಗುಜ್ಜು ಆಗಿದೆ. ಟಿ.ನರಸೀಪುರ ಪೋಲೀಸ್ ಠಾಣೆ ವ್ಯಾಪ್ತಿಯ ಕುರುಬೂರು ಗ್ರಾಮದ ಪಿಂಜರ ಪೋಲ್ ಪೋಲ್ ಬಳಿ ನಡೆದ ಘಟನೆ ನಡೆದಿದೆ. ಗಾಯಗೊಂಡವರನ್ನು ಸ್ಥಳೀಯರು ಆಸ್ಪತ್ರೆಗೆ ಸೇರಿಸಿದ್ದಾರೆ. ಮೃತರು ಬಳ್ಳಾರಿಯಿಂದ ಪ್ರವಾಸಕ್ಕೆಂದು ಮೈಸೂರಿಗೆ ಬಂದಿದ್ದರು.
ಬಳ್ಳಾರಿಯ ಸಂಗನಕಲ್ ಗ್ರಾಮದಿಂದ ಒಟ್ಟು 13 ಜನರು ಮೇ 27 ರಂದು ಮೈಸೂರು ಪ್ರವಾಸಕ್ಕೆ ಬಂದಿದ್ದರು. ಬಳ್ಳಾರಿ ಮೂಲದ 10 ಮಂದಿ ಮೃತಪಟ್ಟಿದ್ದಾರೆ. ಚಾಮರಾಜನಗರ ಜಿಲ್ಲೆಯ ಮಲೆ ಚಾಮುಂಡಿ ಬೆಟ್ಟ, ಮಲೆ ಮಹದೇಶ್ವರ ಬೆಟ್ಟ ಹಾಗೂ ಬಿಳಿಗಿರಿರಂಗನ ಬೆಟ್ಟಕ್ಕೆ ಹೋಗಿ ವಾಪಸ್ ಮೈಸೂರಿಗೆ ಬರುವಾಗ ಅಫಘಾತ ಸಂಭವಿಸಿದೆ. ಪ್ರವಾಸ ಮುಗಿಸಿ ವಾಪಸ್ ರೈಲ್ವೆ ನಿಲ್ದಾಣಕ್ಕೆ ಪ್ರವಾಸಿಗರು ತೆರಳುತ್ತಿದ್ದರು. ಅಫಘಾತದ ರಭಸಕ್ಕೆ ಟ್ರಾವೆಲ್ಸ್ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ರಸ್ತೆ ತಿರುವಿನಲ್ಲಿ ಯಾವುದೇ ನಾಮಫಲಕ ಇಲ್ಲದಿರುವುದೇ ಅಫಘಾತಕ್ಕೆ ಕಾರಣ. ಈ ಬಗ್ಗೆ ತನಿಖೆ ಮಾಡುತ್ತೇವೆ. ಏಷ್ಯಾನೆಟ್ ಸುವರ್ಣ ನ್ಯೂಸ್ ಗೆ ಎಸ್ಪಿ ಸಿಮಾ ಲಾಟ್ಕರ್ ಹೇಳಿಕೆ ನೀಡಿದ್ದಾರೆ.
ಪ್ರವಾಸಕ್ಕೆ ತೆರಳಿದ್ದವರ ಮಾಹಿತಿ ಇಂತಿದೆ:
ಬಿಳ್ಯಾಳ ಮಂಜುನಾಥ್(35) ಪತ್ನಿ ಪೂರ್ಣಿಮಾ(30) ಮಗ ಪವನ(10), ಕಾರ್ತಿಕ(08)
ಸಂದೀಪ( 24), ತಾಯಿ ಸುಜಾತ( 40), ತಂದೆ ಕೊಟ್ರೇಶ್( 45),
ಜನಾರ್ದನ (40), ಪತ್ನಿ ಗಾಯತ್ರಿ(35), ಮಗ ಪುನೀತ್(04) , ಮಗಳು ಸ್ಯ್ರಾವ್ಯ( 03)
ಶಶಿಕುಮಾರ್(24 )
ಇನ್ನು ಕಾರಿನಲ್ಲಿ ಇದ್ದ ಮೂವರು ಗಾಯಾಳುಗಳನ್ನು ಮೈಸೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ಸಿನಲ್ಲಿದ್ದ 20 ಜನರನ್ನು ಟಿ.ನರಸೀಪುರ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಲಾಗಿದೆ. ಇಬ್ಬರನ್ನೂ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರು ಕೆ ಆರ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಕೊಪ್ಪಳದಲ್ಲೂ ಅಪಘಾತ 6 ಸಾವು: ಮೇ.28 ರಂದು ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಕಲಕೇರಿಯಲ್ಲಿ ನಡೆದ ಭೀಕರ ಅಪಘಾತದಲ್ಲಿ ರಸ್ತೆಯಲ್ಲಿ ಹೋಗುವಾಗ ಕಾರಿನ ಟೈರ್ ಸ್ಪೋಟಗೊಂಡು ಲಾರಿಗೆ ಡಿಕ್ಕಿ ಹೊಡೆದು ಕಾರಿನಲ್ಲಿದ್ದ ಇಬ್ಬರು ಮಕ್ಕಳು ಸೇರಿದಂತೆ ಒಟ್ಟು 6 ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿತ್ತು.
ಕಳೆದೊಂದು ವಾರದಿಂದ ರಾಜ್ಯಾದ್ಯಂತ ಭೀಕರ ಅಪಘಾತಗಳು ಸಂಭವಿಸುತ್ತಿವೆ. ಅದರಲ್ಲಿ ಬಸ್, ಕಾರು, ಲಾರಿ, ಬೈಕ್‌ಗಳು ಸೇರಿ ಬಹುತೇಕ ವಾಹನಗಳು ನಜ್ಜುಗುಜ್ಜಾಗಿ ಪ್ರಾಣಹಾನಿ ಸಂಭವಿಸುವ ಪ್ರಕರಣಗಳೇ ಹೆಚ್ಚಾಗುತ್ತಿವೆ.
ಶಿವಮೊಗ್ಗದಲ್ಲಿ ಭೀಕರ ರಸ್ತೆ ಅಪಘಾತ, ತಲೆಯ ಮೇಲೆ ಟಿಪ್ಪರ್ ಹರಿದು 15 ವರ್ಷದ ವಿದ್ಯಾರ್ಥಿನಿ
ಕೊಪ್ಪಳದಲ್ಲಿ ನಡೆದ ಅಪಘಾತದಲ್ಲಿ ಮೃತಪಟ್ಟವರನ್ನು ರಾಜಪ್ಪ ಬನಗೋಡಿ, ರಾಘವೇಂದ್ರ, ಅಕ್ಷಯ, ಶಿವಶರಣ, ಜಯಶ್ರೀ, ರಾಖಿ, ರಶ್ಮಿಕಾ ಎಂದು ಗುರುತಿಸಲಾಗಿದೆ. ವಿಜಯಪುರಿಂದ ಬೆಂಗಳೂರಿಗೆ ಇಂಡಿಕಾ ಕಾರಿನಲ್ಲಿ ಹೋಗುವಾಗ ಕುಷ್ಟಗಿ ಹೆದ್ದಾರಿಯಲ್ಲಿ ಕಾರಿನ ಟೈರ್ ಸ್ಪೋಟಗೊಂಡಿದೆ. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರು ಮುಂದೆ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಎಲ್ಲರೂ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಇನ್ನು ದೇಹಗಳು ಕೂಡ ನಜ್ಜುಗುಜ್ಜಾಗಿ ಮೈಯಲ್ಲಿನ ಮೂಳೆಗಳೆಲ್ಲ ಪುಡಿ- ಪುಡಿಯಾಗಿವೆ.
ತುಮಕೂರಿನಲ್ಲಿ 70 ವರ್ಷದ ವೃದ್ಧೆಯ ಸಾಮೂಹಿಕ ಅತ್ಯಾಚಾರ, ವೃದ್ಧೆಯ ಅಳಿಯನ