
ಹೊಸಕೋಟೆ (ಜೂ.19): ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರು ದೇವನಹಳ್ಳಿ ತಾಲ್ಲೂಕಿನ ತೆಲ್ಲಹಳ್ಳಿ ಗ್ರಾಮದ ನಿವಾಸಿಗಳಾಗಿದ್ದು, ಅಪ್ಪ, ಅಮ್ಮ ಹಾಗೂ ಮಗಳು ಎಂದು ತಿಳಿದುಬಂದಿದೆ.
ಸೂಲಿಬೆಲೆಯಿಂದ ದೇವನಹಳ್ಳಿ ಕಡೆಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ, ಸೂಲಿಬೆಲೆ-ಹೊಸಕೋಟೆ ಮಾರ್ಗದಲ್ಲಿ ಸಂಚರಿಸುತ್ತಿದ್ದ ಬಿಎಂಟಿಸಿ ಬಸ್ ಬೈಕ್‌ಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಬಸ್ ರಾಂಗ್ ರೂಟ್‌ನಲ್ಲಿ ಬಂದಿರುವ ಶಂಕೆ ವ್ಯಕ್ತವಾಗಿದ್ದು, ಡಿಕ್ಕಿಯ ರಭಸಕ್ಕೆ ಬೈಕ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಸೂಲಿಬೆಲೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಘಟನೆಯ ಪರಿಣಾಮ ರಸ್ತೆ ಸಂಚಾರದಲ್ಲಿ ಭಾರೀ ಅಸ್ತವ್ಯಸ್ತತೆ ಉಂಟಾಗಿ, ಕೆಲಕಾಲ ಟ್ರಾಫಿಕ್ ಜಾಮ್ ನಿರ್ಮಾಣವಾಗಿತ್ತು. ಸೂಲಿಬೆಲೆ ವ್ಯಾಪ್ತಿಯಲ್ಲಿ ನಡೆದ ಈ ದುರ್ಘಟನೆ ಸ್ಥಳೀಯರಲ್ಲಿ ಆಕ್ರೋಶ ಮತ್ತು ಆತಂಕಕ್ಕೆ ಕಾರಣವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ