ಹೊಸಕೋಟೆಯ ಎಂವಿಜೆ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ದರ್ಶಿನಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಕಾಲೇಜಿನ ಹಿರಿಯ ವೈದ್ಯ ಮಹೇಶ್ ನನ್ನು ಬಂಧಿಸಲಾಗಿದೆ.
ಹೊಸಕೋಟೆ (ಜೂ.12): ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆಯ ಎಂವಿಜೆ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ದರ್ಶಿನಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಕೋಲಾರ ಗ್ರಾಮಾಂತರ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಎಂವಿಜೆ ಮೆಡಿಕಲ್ ಕಾಲೇಜಿನ ಹಿರಿಯ ವೈದ್ಯ ಮಹೇಶ್‌ರನ್ನು ಕೋಲಾರ ಗ್ರಾಮಾಂತರ ಠಾಣೆ ಪೊಲೀಸರು ಶುಕ್ರವಾರ ವಶಕ್ಕೆ ಪಡೆದಿದ್ದಾರೆ, ವಿದ್ಯಾರ್ಥಿನಿಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ 4-5 ಮಂದಿಯನ್ನು ಬಂಧಿಸುವ ಸಾಧ್ಯತೆ ಇದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
undefined
ಕೊಪ್ಪಳದಲ್ಲಿ ಎಂಬಿಬಿಎಸ್ ಮುಗಿಸಿ 7 ತಿಂಗಳ ಹಿಂದೆ ಹೊಸಕೋಟೆಯ ಎಂವಿಜೆ ಮೆಡಿಕಲ್ ಕಾಲೇಜಿನಲ್ಲಿ ಎಂಡಿ ವಿದ್ಯಾಭ್ಯಾಸಕ್ಕೆ ಬಂದಿದ್ದ ದರ್ಶಿನಿ, ತಾನು ಉಚಿತ ಪ್ರವೇಶ ಪಡೆದಿದ್ದಕ್ಕಾಗಿ ಕಾಲೇಜು ಆಡಳಿತ ಮಂಡಳಿಯು ಕಿರುಕುಳ ನೀಡುತ್ತಿರುವ ಬಗ್ಗೆ ಸ್ನೇಹಿತನಿಗೆ ಕರೆ ಮಾಡಿ ತಿಳಿಸಿದ್ದಳು. ದಿನದ 24 ಗಂಟೆ ವಿಶ್ರಾಂತಿ ಇಲ್ಲದೆ ಕೆಲಸ ಮಾಡಿಸುವ ಜತೆಗೆ ಹಿರಿಯ ವೈದ್ಯರೊಬ್ಬರ ಕಿರುಕುಳ ಹೆಚ್ಚಾಗಿದ್ದ ಬಗ್ಗೆಯೂ ಹೇಳಿಕೊಂಡಿದ್ದಳು.
ಮದುವೆಯಾಗಿ ವಿದೇಶಕ್ಕೆ ಹನಿಮೂನ್ ಹೋದ ಚೆನ್ನೈ ವೈದ್ಯ ದಂಪತಿ ಫೋಟೋಶೂಟ್ ವೇಳೆ ನೀರಲ್ಲಿ ಮುಳುಗಿ ಸಾವು
ಅದಾದ ಬಳಿಕ ಫೋನ್ ಕಟ್ ಮಾಡಿ, ಕಳೆದ ಭಾನುವಾರ ಕೋಲಾರ ತಾಲೂಕಿನ ಕೆಂದಟ್ಟಿಬಳಿಯ ಕ್ವಾರಿಯಲ್ಲಿದ್ದ ನೀರಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಳು. ಈ ಸಂಬಂಧ ಆಕೆಯ ಪೋಷಕರು ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.
ಹಾಗಾಗಿ ಎಂವಿಜೆ ಮೆಡಿಕಲ್ ಕಾಲೇಜಿನ ಹಿರಿಯ ವೈದ್ಯ ಮಹೇಶ್‌ರನ್ನು ಕೋಲಾರ ಗ್ರಾಮಾಂತರ ಠಾಣೆ ಪೊಲೀಸರು ಶುಕ್ರವಾರ ಆಂಧ್ರಪ್ರದೇಶದ ಅಚ್ಚಪಲ್ಲಿ ಎಂಬಲ್ಲಿ ವಶಕ್ಕೆ ಪಡೆದು ವಿಚಾರಣೆ ಮುಂದುವರೆಸಿದ್ದು, ಉಳಿದ ಆರೋಪಿಗಳಿಗಾಗಿ ಶೋಧ ಮುಂದುವರೆಸಿದ್ದಾರೆ.
Shivamogga: ಶಿಕ್ಷಣ ಸಂಸ್ಥೆ ಮುಖ್ಯಸ್ಥನಿಂದ ಲೈಂಗಿಕ ಕಿರುಕುಳ, ಆಸ್ಪತ್ರೆಗೆ ಸಾಗಿಸುವಾಗ
ತನಿಖೆ ದಿಕ್ಕು ತಪ್ಪದಿರಲಿ: ಮೆರಿಟ್ ಆಧಾರದಲ್ಲಿ ಸರ್ಕಾರಿ ಕೋಟಾದಡಿ ಉಚಿತ ಮೆಡಿಕಲ್ ಸೀಟ್ ಪಡೆದಿದ್ದ ಪ್ರತಿಭಾವಂತ ವಿದ್ಯಾರ್ಥಿನಿ ಡಾ.ದರ್ಶಿನಿ ಸಾವಿಗೆ ಕಾರಣರಾದ ಎಂವಿಜೆ ಮೆಡಿಕಲ್ ಕಾಲೇಜಿನ ಆಡಳಿತ ಮಂಡಳಿ ಹಾಗೂ ಸಂಬಂಧಿಸಿದವರ ವಿರುದ್ಧ ಕೈಗೊಂಡಿರುವ ತನಿಖೆ ದಿಕ್ಕು ತಪ್ಪದಂತೆ ಸರ್ಕಾರ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಜಿ.ಸುರೇಶ್‌ಬಾಬು ಆಗ್ರಹಿಸಿದ್ದಾರೆ.
ಶಾಲಾ ಶಿಕ್ಷಕಿಯೊಬ್ಬರ ಪುತ್ರಿಯಾದ ದರ್ಶಿನಿ ಸಾವಿಗೆ ಕಾರಣರಾದ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಈ ಪ್ರಕರಣದ ಸಂಬಂಧ ಕೋಲಾರ ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ಎಸ್ಪಿಯವರು ಕೈಗೊಂಡಿರುವ ಕ್ರಮ ಸ್ವಾಗತಾರ್ಹ. ಇಂತಹ ಪ್ರಕರಣಗಳು ಮರುಕಳಿಸದಂತೆ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು, ಪ್ರತಿಭಾವಂತ ಮಕ್ಕಳ ಜೀವ ರಕ್ಷಣೆಗೆ ಕಾನೂನು ತರಬೇಕು ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ.
ಬಳ್ಳಾರಿ ಜಿಲ್ಲೆಯ ಬಸಮ್ಮ ಪ್ರೌಢಶಾಲೆಯಲ್ಲಿ ಶಿಕ್ಷಕಿಯಾಗಿರುವ ಜಿ.ರಾಜೇಶ್ವರಿ ದಂಪತಿ ಪುತ್ರಿಯಾದ ದರ್ಶಿನಿ ವೈದ್ಯೆಯಾಗುವ ಕನಸು ಕಂಡಿದ್ದ ಪ್ರತಿಭೆ. ತಂದೆಯ ಸಾವಿನ ನಡುವೆಯೂ ತಾಯಿಯ ಆರೈಕೆಯಲ್ಲಿ ಬೆಳೆದು ಮೆರಿಟ್ ಆಧಾರದ ಮೇಲೆ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಸೀಟ್ ಪಡೆದು ವ್ಯಾಸಂಗ ಮುಗಿಸಿ, ಎಂವಿಜೆ ಕಾಲೇಜಿನಲ್ಲಿ ಎಂಎಸ್ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿದ್ದರು ಎಂದು ತಿಳಿಸಿದ್ದಾರೆ.
ಎಂವಿಜೆ ಕಾಲೇಜಿನ ಆಡಳಿತ ಮಂಡಳಿ ಕಿರುಕುಳಕ್ಕೆ ನೊಂದ ಈ ವಿದ್ಯಾರ್ಥಿನಿ ಕೋಲಾರ ತಾಲೂಕಿನ ಕೆಂದಟ್ಟಿಸಮೀಪದ ಕ್ವಾರಿಯಲ್ಲಿ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಇದಕ್ಕೆ ಕಾಲೇಜು ಆಡಳಿತ ಮಂಡಳಿ ನಿರ್ಲಕ್ಷ್ಯವೇ ಕಾರಣ. ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲಾರದ ಪೊಲೀಸರು ಸಕಾಲಿಕ ಕ್ರಮ ಕೈಗೊಂಡಿದ್ದು, ಈಗಾಗಲೇ ಹಿರಿಯ ವೈದ್ಯ ಮಹೇಶ್ ಎಂಬುವರನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿರುವುದು ಸ್ವಾಗತಾರ್ಹ. ಇದೇ ರೀತಿ ಉಳಿದ ಆರೋಪಿಗಳನ್ನೂ ಶೀಘ್ರ ಬಂಧಿಸಲು ಮನವಿ ಮಾಡಿದ್ದಾರೆ.