
ಗೋಣಿಕೊಪ್ಪ(ಜು.07): ಕಾನೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬೆಕ್ಕೆಸೊಡ್ಲೂರು ಗ್ರಾಮದಲ್ಲಿ ಒಂಟಿ ಮನೆಯಲ್ಲಿ ಕಳ್ಳತನ ನಡೆದಿದೆ. ಸುಳ್ಳಿಮಾಡ ಪುಷ್ಯ ಮುದ್ದಪ್ಪ ಎಂಬುವರ ಮನೆಯ ಬೀಗ ಮುರಿದು ಕಳ್ಳತನ ಮಾಡಲಾಗಿದೆ. ಮನೆ ಮಾಲೀಕರು ಶನಿವಾರ ಕೆಲಸದ ನಿಮಿತ್ತ ಮೈಸೂರಿಗೆ ತೆರಳಿದ್ದರು. ಬುಧವಾರ ಸಂಜೆ 4.30ರ ಸಮಯದಲ್ಲಿ ಮನೆಗೆ ಮರಳಿದಾಗ ಕಳ್ಳತನ ಕೃತ್ಯ ಬೆಳಕಿಗೆ ಬಂದಿದೆ.
ಮಂಗಳವಾರ ರಾತ್ರಿ ಮನೆಯ ಮುಂಬಾಗಿಲಿನ ಬೀಗ ಮುರಿದು ಒಳ ನುಗ್ಗಿರುವ ಕಳ್ಳರು, ಮನೆಯಲ್ಲಿದ್ದ ಬೀರುವಿನಲ್ಲೂ ಚಿನ್ನಾಭರಣ, ನಗದು ಮತ್ತು ಅಮೂಲ್ಯ ವಸ್ತುಗಳಿಗಾಗಿ ಶೋಧ ನಡೆಸಿದ್ದಾರೆ. ಬೀರುವಿನಲ್ಲಿದ್ದ ಬಟ್ಟೆಗಳನ್ನು ಚೆಲ್ಲಾಪಿಲ್ಲಿಯಾಗಿಸಿದ್ದಾರೆ. ಈ ವೇಳೆ ಯಾವುದೇ ಅಮೂಲ್ಯ ವಸ್ತುಗಳು ಸಿಗದ ಕಾರಣ 1 ರೇಡಿಯೋ, ಕಂಬಳಿ, ಒಂದು ಸಿಲ್ವರ್ ಪಾತ್ರೆಯನ್ನು ಕದ್ದು ಪರಾರಿಯಾಗಿದ್ದಾರೆ.
ಚಿಕ್ಕಮಗಳೂರಲ್ಲಿ ಹೆಚ್ಚುತ್ತಿರುವ ಬೈಕ್ ಹೆಲ್ಮೆಟ್ ಕಳ್ಳತನ: ಬೈಕ್ ಸವಾರರ ಪೀಕಲಾಟ..!
ಮನೆಯ ಅಡುಗೆ ಕೋಣೆಗೆ ತೆರಳಿ ಅಲ್ಲಿಯೇ ಅನ್ನ ಬೇಯಿಸಿ, 7 ಮೊಟ್ಟೆಗಳ ಸಾಂಬಾರ್ ಮಾಡಿ ಹೊಟ್ಟೆ ತುಂಬಾ ಊಟ ಮಾಡಿದ್ದಾರೆ. ಇಷ್ಟು ಸಾಲದ್ದು ಎಂಬಂತೆ ಮನೆಯಲ್ಲಿಯೇ ಸುಖವಾಗಿ ನಿದ್ದೆ ಮಾಡಿ ಬೆಳಗಿನ ಜಾವ ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಈ ಘಟನೆ ಕುರಿತು ಪೊನ್ನಂಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ