
ಕೋಲಾರ (ಮಾ.9): ಗಂಡನ ಮನೆಯವರಿಂದ ವರದಕ್ಷಿಣೆ ವಿಚಾರವಾಗಿ ದೈಹಿಕ ಮಾನಸಿಕ ಕಿರುಕುಳಕ್ಕೆ ಬೇಸತ್ತು ಗೃಹಿಣಿ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಮಾದನಹಟ್ಟಿ ಗ್ರಾಮದ ಬಳಿ ನಡೆದಿದೆ.
ನಿಧಿಶ್ರೀ(27) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಪತಿ ಶ್ರೀರಾಮ, ಮಾವ ನಾರಾಯಣಸ್ವಾಮಿ, ಬಾಮೈದ ಅರುಣ್ ಹಾಗೂ ನಾದಿನಿ ಯಶೋಧಾ ವಿರುದ್ಧ ದೂರು ದಾಖಲಾಗಿದೆ. ದೂರು ದಾಖಲಾಗ್ತಿದ್ದಂತೆ ತಲೆಮರೆಸಿಕೊಂಡಿರುವ ಆರೋಪಿಗಳು. ಆರೋಪಿಗಳ ಪತ್ತೆಗೆ ಹುಡುಕಾಟ ನಡೆಸಿರುವ ಪೊಲೀಸರು. ಇತ್ತ ಮೃತಳ ಕುಟುಂಬಸ್ಥರು ಗಂಡನ ಮನೆಮುಂದೆ ಶವವಿಟ್ಟು ಪ್ರತಿಭಟನೆ ನಡೆಸಿದ್ದಾರೆ. ಆರೋಪಿಗಳನ್ನ ನಮಗೆ ಒಪ್ಪಿಸಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು ಮಹಿಳೆಯರಿಗೆ ಸೇಫ್ ಅಲ್ಲ; ಪ್ರತಿವರ್ಷ 148 ಮಹಿಳೆಯರ ಮೇಲೆ ಅತ್ಯಾಚಾರ, 2,630 ಮಂದಿಗೆ ಕಿರುಕುಳ
ಮೃತಳ ಕುಟುಂಬಸ್ಥರು ಆರೋಪಿಗಳನ್ನು ನಮಗೆ ಒಪ್ಪಿಸುವಂತೆ ಪಟ್ಟು ಹಿಡಿದಿರುವ ಕುಟುಂಬಸ್ಥರು. ಮೃತ ಶರೀರ ತೆಗೆದುಕೊಂಡು ಹೋಗುವಂತೆ ಪೊಲೀಸರು ಕುಟುಂಬಸ್ಥರ ಮನವೊಲಿಸಲು ಹರಸಾಹಸ ನಡೆಸಿದ್ದಾರೆ. ಆದರೆ ಆರೋಪಿಗಳನ್ನು ಬಂಧಿಸಿ ನಮಗೆ ಒಪ್ಪಿಸುವವರಿಗೆ ಇಲ್ಲಿಂದ ಕದಲುವುದಿಲ್ಲ ಎಂದ ಕುಟುಂಬಸ್ಥರು.
ಶಿವಮೊಗ್ಗ ವರದಕ್ಷಿಣೆ ಕಿರುಕುಳ: ಗಂಡನ ಮನೆಯವರಿಂದ ತಾಯಿ-ಮಗುವಿಗೆ ವಿಷ ಪ್ರಾಶನ
ಸದ್ಯ ಘಟನೆ ಸಂಬಂಧ ಮಾಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ