ಕೌಟುಂಬಿಕ ಕಲಹಕ್ಕೆ ಬೇಸತ್ತು ವಿಚ್ಛೇದನಕ್ಕೆ ಮುಂದಾಗಿದ್ದ ಪತ್ನಿಯನ್ನು ಪತಿಯೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ದೊಡ್ಡಮುದುವಾಡಿ ಗೇಟ್ ಬಳಿ ನಡೆದಿದೆ.
ಕನಕಪುರ (ಮೇ.12): ಕೌಟುಂಬಿಕ ಕಲಹಕ್ಕೆ ಬೇಸತ್ತು ವಿಚ್ಛೇದನಕ್ಕೆ ಮುಂದಾಗಿದ್ದ ಪತ್ನಿಯನ್ನು ಪತಿಯೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ದೊಡ್ಡಮುದುವಾಡಿ ಗೇಟ್ ಬಳಿ ನಡೆದಿದೆ.
ಪಿಚ್ಚನಕೆರೆ ಗ್ರಾಮದ ಮಂಜುಳಾ, ಕೊಲೆಯಾದ ಮಹಿಳೆ. ರಾಜೇಶ್ ಎಂಬಾತನೊಂದಿಗೆ ಮದುವೆ ಮಾಡಿಕೊಟ್ಟಿದ್ದ ಪೋಷಕರು. ಮದುವೆಯಾದ ಮೊದಲು ಚೆನ್ನಾಗಿಯೇ ಇದ್ದ ಕುಟುಂಬ ಬಳಿಕ ಪತಿ ರಾಜೇಶ್ ಪದೇಪದೆ ಜಗಳ ಮಾಡಲಾರಂಭಿಸಿದ್ದ ಎನ್ನಲಾಗಿದೆ. ದಿನನಿತ್ಯ ನಡೆಯುತ್ತಿದ್ದ ಕೌಟುಂಬಿಕ ಕಲಹಕ್ಕೆ ಬೇಸತ್ತಿದ್ದ ದಂಪತಿ ಇದರಿಂದ ಇಬ್ಬರೂ ವಿಚ್ಛೇದನ ಪಡೆದುಕೊಳ್ಳಲು ನಿರ್ಧರಿಸಿದ್ದರು. ವಿಚ್ಛೇದನ ಪಡೆಯಲು ಅರ್ಜಿ ಕೂಡ ಸಲ್ಲಿಸಲಾಗಿತ್ತು. ಆದರೆ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಬಳಿಕವೂ ಪತಿ ರಾಜೇಶ್ ಪತ್ನಿ ಮೇಲೆ ಕಿರುಕುಳ ಮುಂದುವರಿಸಿದ್ದರು. ಇಂದು ದೊಡ್ಡಮುದುವಾಡಿ ಗೇಟ್ ಬಸ್ ನಿಲ್ದಾಣದ ಬಳಿ ನಿಂತಿದ್ದಾಗ ರಾಡ್‌ನಿಂದ ತಲೆಗೆ ಹೊಡೆದು ಎಸ್ಕೇಪ್ ಆಗಿರುವ ಪತಿ. ತಲೆಗೆ ಬಿದ್ದ ಬಲವಾದ ಹೊಡೆತದಿಂದ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಪ್ರಾಣಬಿಟ್ಟಿರುವ ಮಂಜುಳಾ.
ಪ್ರಜ್ವಲ್ ಫೋಟೊ ಹಾಕಿಕೊಂಡು ಶಿಕ್ಷಕರ ಕ್ಷೇತ್ರದಲ್ಲಿ ಮೈತ್ರಿ ಪಕ್ಷ ಮತ ಕೇಳಲಿ: ಮಾಜಿ ಎಂಎಲ್‌ಸಿ ರಮೇಶ್ ಬಾಬು ಲೇವಡಿ
ಏಕಾಏಕಿ ನಡೆದ ಅಮಾನುಷ ದಾಳಿಗೆ ರಕ್ತಸಿಕ್ತವಾಗಿ ಮಹಿಳೆಯ ದೃಶ್ಯ ಕಂಡು ಬೆಚ್ಚಿಬಿದ್ದ ಜನರು. ಘಟನೆ ಬಳಿಕ ಸ್ಥಳಕ್ಕೆ ಕನಕಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮೃತದೇಹ ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಕೊಲೆ ಆರೋಪಿಗೆ ಶೋಧಕಾರ್ಯ ಮುಂದುವರಿಸಿದ್ದಾರೆ.