ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಕಾಂಗ್ರೆಸ್ ಸದಸ್ಯ ನಿರಂಜನಯ್ಯ ಹಿರೇಮಠ ಅವರ ಪುತ್ರಿ ನೇಹಾ ಹತ್ಯೆ ಪ್ರಕರಣ ಸಂಬಂಧ ಆರೋಪಿ ಫಯಾಜ್ ಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಹುಬ್ಬಳ್ಳಿ (ಏ.19): ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಕಾಂಗ್ರೆಸ್ ಸದಸ್ಯ ನಿರಂಜನಯ್ಯ ಹಿರೇಮಠ ಅವರ ಪುತ್ರಿ ನೇಹಾ ಹತ್ಯೆ ಪ್ರಕರಣ ಸಂಬಂಧ ಆರೋಪಿ ಫಯಾಜ್ ಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಪ್ರೀತಿಸಲು ನಿರಾಕರಿಸಿದ ನೇಹಾಳನ್ನು ಕೆಎಲ್‌ಇ ಬಿವಿಬಿ ಕಾಲೇಜು ಆವರಣದಲ್ಲೇ ಹಾಡಹಗಲೇ ಫಯಾಜ್ 9 ಬಾರಿ ಚಾಕುವಿನಿಂದ ಚುಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ. ಕೊಲೆ ಮಾಡಿ ಪರಾರಿಯಾಗಿದ್ದ ವಿದ್ಯಾರ್ಥ ವಿದ್ಯಾರ್ಥಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಲಾಗಿತ್ತು.
ಕಾರ್ಪೋರೇಟರ್ ಪುತ್ರಿ ನೇಹಾ ಹಿರೇಮಠ (24) ಕೆಎಲ್‌ಇ ಬಿವಿಬಿ ಕಾಲೇಜಿನಲ್ಲಿ ಎಂಸಿಎ ಮೊದಲ ವರ್ಷದ ವಿದ್ಯಾರ್ಥಿಯಾಗಿದ್ದಳು. ಆರೋಫಿ ಫಯಾಜ್ ಅದೇ ಕಾಲೇಜಿನ ಹಳೇ ವಿದ್ಯಾರ್ಥಿ ಇಬ್ಬರು ಬಿಸಿಎ ಓದುವಾಗ ಸಹಪಾಠಿಗಳಾಗಿದ್ದರಂತೆ. ಈತ ಬಿಸಿಎನಲ್ಲಿ ಅನುತ್ತೀರ್ಣನಾಗಿದ್ದನಂತೆ. ಆದರೆ ನೇಹಾ ಉತ್ತೀರ್ಣಳಾಗಿ ಎಂಸಿಎ ಮಾಡುತ್ತಿದ್ದಳು. ಆರೋಪಿ ಬೆಳಗಾವಿ ಜಿಲ್ಲೆಯ ಸವದತ್ತಿಯ ಮೂಲದವನಾಗಿದ್ದಾನೆ.
ಹುಬ್ಬಳ್ಳಿಯಲ್ಲಿ ಕಾರ್ಪೋರೇಟರ್ ಮಗಳು ಲವ್ ಜಿಹಾದ್‌ಗೆ ಬಲಿ? 9 ಬಾರಿ ಚಾಕು ಇರಿದ ಆರೋಪಿ ಫಯಾಜ್!
ಕೊಲೆ ಮಾಡಿದ್ದು ಹೇಗೆ?
ಗುರುವಾರ ಸಂಜೆ ತರಗತಿ ಮುಗಿಸಿಕೊಂಡು ನೇಹಾ ಮನೆಗೆ ಹಿಂತಿರುಗಿತ್ತಿದ್ದಾಗ ಕಾಲೇಜು ಕ್ಯಾಂಪಸ್ ಗೆ ಫಯಾಜ್ ಮಾಸ್ಕ್ ಹಾಕಿಕೊಂಡು ಬಂದು ಕುತ್ತಿಗೆ, ಹೊಟ್ಟೆ ಹಾಗೂ ಬೆನ್ನಿಗೆ ಬರೋಬ್ಬರಿ 9 ಬಾರಿ ಇರಿದು ಚಾಕು ಅಲ್ಲೇ ಎಸೆದು ಪರಾರಿಯಾಗಿದ್ದಾನೆ. ತಕ್ಷಣ ಪೊಲೀಸರು ಅಲರ್ಟ್ ಆಗಿದ್ದು, ಕಿಮ್ಸ್ ಹಿಂಬದಿಯಲ್ಲಿ ಅವಿತುಕೊಂಡಿದ್ದ ಫಯಾಜ್‌ನನ್ನು ಬಂಧಿಸಿ ಇಂದು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
ಇನ್ನು ಘಟನೆ ಖಂಡಿಸಿ ಸಾವಿರಾರು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು, ಎಬಿವಿಪಿ, ಹಿಂದೂ ಸಂಘಟನೆಗಳು ಆರೋಪಿಗೆ ಗಲ್ಲು ಶಿಕ್ಷೆ ನೀಡಬೇಕೆಂದು ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಯುತ್ತಿದೆ. ಹುಬ್ಬಳ್ಳಿಯ ಮುಖ್ಯರಸ್ತೆ ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಲಾಗುತ್ತಿದೆ. ಇನ್ನು ಹಂತಕನ ಹುಟ್ಟೂರು ಬೆಳಗಾವಿಯಲ್ಲಿ ಕೂಡ ಹಿಂದೂ, ಮುಸ್ಲಿಂ ಸಮುದಾಯ ಕೂಡ ಹತ್ಯೆ ಖಂಡಿಸಿ ಪ್ರತಿಭಟನೆ ನಡೆಸುತ್ತಿದೆ. ಸಂಕೇಶ್ವರ-ಸವದತ್ತಿ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಗುತ್ತಿದ್ದು, ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ, ಜೆಡಿಎಸ್ ನಾಯಕ ಸೌರಬ್ ಛೋಪ್ರಾ, ವಿರೂಪಾಕ್ಷ ಮಾಮನಿ ಸೇರಿ ನೂರಾರು ಕಾರ್ಯಕರ್ತರು ಭಾಗಿಯಾಗಿದ್ದಾರೆ.
Gadag: ನಗರಸಭೆ ಮಾಜಿ ಉಪಾಧ್ಯಕ್ಷೆ ಮನೆಯಲ್ಲಿ ಮರ್ಡರ್: ಚಾಕುವಿನಿಂದ ಇರಿದು ಮಲಗಿದ್ದ ನಾಲ್ವರ ಹತ್ಯೆ!
ನೇಹಾ ಹತ್ಯೆ ಖಂಡಿಸಿದ ಮುಸ್ಲಿಂ ಸಮುದಾಯದ ಮುಖಂಡರು. ಆರೋಪಿಗೆ ಕಠಿಣ ಶಿಕ್ಷೆ ನೀಡುವಂತೆ ಪೊಲೀಸ್ ಕಮಿಷನರ್ ಗೆ ಒತ್ತಾಯಿಸಿದ್ದಾರೆ. ಅಳ್ನಾವರ, ಕುಂದಗೋಳ, ಕಲಘಟಗಿ, ಹುಬ್ಬಳ್ಳಿ ಹಾಗೂ ಧಾರವಾಡ ಅಂಜುಮನ್ ಸಂಸ್ಥೆಯ ಅಧ್ಯಕ್ಷರು ಕಮಿಷನರ್ ಗೆ ಒತ್ತಾಯಿಸಿದ್ದಾರೆ. ಹುಬ್ಬಳ್ಳಿಯ ನವನಗರದ ಪೊಲೀಸ್ ಆಯುಕ್ತರ ಕಚೇರಿಗೆ ಭೇಟಿ ನೀಡಿ ಮನವಿ ಮಾಡಲು ಮುಂದಾನಲದ ಅಂಜುಮನ್ ಸಂಸ್ಥೆ ಮುಂದಾಗಿದೆ.
ಇನ್ನು ಆರೋಪಿ ಫಯಾಜ್ ಹುಟ್ಟೂರು ಸಂಪುರ್ಣ ಸ್ತಬ್ಧವಾಗಿದೆ. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮುನವಳ್ಳಿ ಪಟ್ಟಣದ ಎಲ್ಲಾ ಅಂಗಡಿ ಮುಂಗಟ್ಟುಗಳು ಸ್ವಯಂಪ್ರೇರಿತ ಬಂದ್ ಮಾಡಿ ನೇಹಾ ಹತ್ಯೆ ಖಂಡಿಸಿ ಬೆಂಬಲ ಸೂಚಿಸಲಾಗಿದೆ. ಮೂರು ಕೆಎಸ್ಆರ್‌ಪಿ, ಒಂದು ಡಿಆರ್ ತುಕಡಿ ಸೇರಿ ನೂರಕ್ಕೂ ಅಧಿಕ ಪೊಲೀಸರನ್ನು ಭದ್ರತೆಗೆ ನಿಯೋಜನೆ ಮಾಡಲಾಗಿದೆ.
ದಿಂಗಾಲೇಶ್ವರ ಸ್ವಾಮೀಜಿ ಭಾವುಕ: ಇನ್ನು ನಿನ್ನೆ ಕೊಲೆಯಾದ ನೇಹಾ ಅಂತಿಮ ದರ್ಶನಕ್ಕೆ ದಿಂಗಾಲೇಶ್ವರ ಸ್ವಾಮೀಜಿ ಆಗಮಿಸಿದರು. ಈ ವೇಳೆ ಭಾವುಕರಾದ್ರು. ನೇಹಾ ಕುಟುಂಬಸ್ಥರು ದಿಂಗಾಲೇಶ್ವರ ಸ್ವಾಮೀಜಿ ಭಕ್ತರಾಗಿದ್ದು, ನೇಹಾಳ ತಂದೆ ನಿರಂಜನಗೆ ಸಾಂತ್ವನ ಹೇಳುತ್ತಲೇ ದಿಂಗಾಲೇಶ್ವರ ಸ್ವಾಮೀಜಿ ಭಾವುಕರಾದ್ರು.