
ಹುಬ್ಬಳ್ಳಿ ಅ.10): ಹಿಂದೂ ಧರ್ಮದ ಬಾಲಕಿಯನ್ನ ಪುಸಲಾಯಿಸಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಮುಸ್ಲಿಂ ಯುವಕನೋರ್ವ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ಘಟನೆ ಹುಬ್ಬಳ್ಳಿಯ ಗೋಕುಲ್ ರೋಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಘಟನೆ ಸಂಬಂಧ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ.
ಸೈಯದ್ ರಹನಾ ಬೆಟಗೇರಿ, ಬಂಧಿತ ಆರೋಪಿ. 17 ವರ್ಷದ ಹಿಂದೂ ಬಾಲಕಿಯನ್ನು ಪುಸಲಾಯಿಸಿ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ವೇಳೆ ಆರೋಪಿಯನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಬಾಲಕಿಗೆ ರಮೇಶ್ ಎಂದು ವಂಚನೆ:
ಬಾಲಕಿಗೆ ಮೊದಲು ತನ್ನ ಹೆಸರು ರಮೇಶ ಎಂದು ತಿಳಿಸಿ ಪರಿಚಯಿಸಿ ವಂಚಿಸಿದ್ದಾನೆ. ಆತನ ವರ್ತನೆಯ ಬಗ್ಗೆ ಸಂಶಯಗೊಂಡ ಸ್ಥಳೀಯರು ಪ್ರಶ್ನಿಸಿದ್ದಾರೆ. ಆರೋಪಿಯ ಬಳಿಯಿಂದ ಮೊಬೈಲ್ ಪರಿಶೀಲಿಸಿಲಿಸಿದಾಗ ಸ್ಥಳೀಯರು ಶಾಕ್ ಆಗಿದ್ದಾರೆ. ಮೊಬೈಲ್‌ನಲ್ಲಿ ಯುವತಿಯೊಂದಿಗಿನ ಅಶ್ಲೀಲ ವೀಡಿಯೋ ಮತ್ತು ಫೋಟೋಗಳು ಹಾಗೂ ಇತರ ಯುವತಿಯರ ಜೊತೆಗಿನ ಚಿತ್ರಗಳು ಪತ್ತೆಯಾಗಿವೆ. ಇದರಿಂದ ಕುಪಿತಗೊಂಡ ಸಾರ್ವಜನಿಕರು ಆತನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
'ನನ್ನಿಂದ ತಪ್ಪಾಗಿದೆ.. ಎಂದ ಆರೋಪಿ:
ನಾನು ಬಾಲಕಿಯನ್ನು ಹೊಲಕ್ಕೆ ಕರೆದೊಯ್ದಿದ್ದೆ, ನನ್ನಿಂದ ತಪ್ಪಾಗಿದೆ, ಮುಂದೆ ಈ ರೀತಿ ಮಾಡುವುದಿಲ್ಲ ಎಂದು ಸಾರ್ವಜನಿಕರ ಎದುರು ತಪ್ಪೊಪ್ಪಿಕೊಂಡಿದ್ದಾನೆ. ಬಳಿಕ ಸ್ಥಳೀಯರು ಅವನನ್ನು ಗೋಕುಲ್ ರೋಡ್ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ.
ಲವ್ ಜಿಹಾದ್ ಆರೋಪ:
ಈ ಘಟನೆಯನ್ನು ಲವ್ ಜಿಹಾದ್‌ಗೆ ಸಂಬಂಧಿಸಿದ ಕೃತ್ಯ ಎಂದು ಆರೋಪಿಸಲಾಗಿದ್ದು, ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಈ ಬಗ್ಗೆ ದೂರು ದಾಖಲಿಸಿದ್ದಾರೆ. ಪೊಲೀಸರು ಆರೋಪಿಯ ವಿರುದ್ಧ ಕೇಸು ದಾಖಲಿಸಿಕೊಂಡಿದ್ದು, ತನಿಖೆ ಮುಂದುವರೆಸಿದ್ದಾರೆ. ಬಾಲಕಿಯನ್ನು ಹಿಂದೂಪರ ಸಂಘಟನೆಗಳು ಆಕೆಯ ಪೋಷಕರಿಗೆ ಒಪ್ಪಿಸಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ