
ಹುಬ್ಬಳ್ಳಿ (ಜು.4): ಹುಬ್ಬಳ್ಳಿಯ ವಿದ್ಯಾನಗರ ಪೊಲೀಸ ಠಾಣಾ ವ್ಯಾಪ್ತಿಯ ಪಾರಿಜಾತ ರೆಸಿಡೆನ್ಸಿಯಲ್ಲಿ ನಡೆಯುತ್ತಿದ್ದ ಬೃಹತ್ ವೇಶ್ಯಾವಾಟಿಕೆ ಜಾಲವನ್ನು ಸಿಸಿಬಿ ಪೊಲೀಸರು, ಮೈಸೂರಿನ ಒಡನಾಡಿ ಸಂಸ್ಥೆಯ ಸಹಯೋಗದೊಂದಿಗೆ ಭೇದಿಸಿದ್ದಾರೆ. ಈ ದಾಳಿಯಲ್ಲಿ 10ಕ್ಕೂ ಹೆಚ್ಚು ಮಹಿಳೆಯರನ್ನು ರಕ್ಷಿಸಲಾಗಿದ್ದು, 7 ವಿಟ ಪುರುಷರನ್ನು ಬಂಧಿಸಲಾಗಿದೆ. ಲಾಡ್ಜ್ ಮಾಲೀಕ ಪರಾರಿಯಾಗಿದ್ದು, ಮ್ಯಾನೇಜರ್ ಮತ್ತು ಸಿಬ್ಬಂದಿಯನ್ನ ಬಂಧಿಸಿದ್ದಾರೆ.
ಕಾಲೇಜು ಪಕ್ಕದಲ್ಲೇ ದಂಧೆ!
ಈ ಕಾನೂನುಬಾಹಿರ ದಂಧೆಯು ಕಾಲೇಜುಗಳ ಸಮೀಪದಲ್ಲೇ ರಹಸ್ಯವಾಗಿ ನಡೆಯುತ್ತಿತ್ತು ಎಂಬುದು ತಿಳಿದು ಸ್ಥಳೀಯರೇ ಶಾಕ್ ಆಗಿದ್ದಾರೆ. ದಾಳಿಯ ಸಂದರ್ಭದಲ್ಲಿ, ಮಹಿಳೆಯರನ್ನು ಲಾಡ್ಜ್‌ನ ಬಾತ್‌ರೂಮ್‌ನಿಂದ ರಹಸ್ಯ ಕೋಣೆಗೆ ಕೊಂಡೊಯ್ಯಲಾಗಿತ್ತು. ಆದರೆ, ಸಿಸಿಬಿ ಪೊಲೀಸರು ರಹಸ್ಯ ಕೋಣೆಯ ಪ್ರವೇಶ ದ್ವಾರವನ್ನು ತೆರೆದು ಮಹಿಳೆಯರನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ. ಈ ಜಾಲವು ಸಂಘಟಿತ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಇದರ ಹಿಂದೆ ದೊಡ್ಡ ಮಾಫಿಯಾ ಇರಬಹುದೆಂದು ಪೊಲೀಸರು ಶಂಕಿಸಿದ್ದಾರೆ.
ಈ ಜಾಲದ ಹಿಂದೆ ಯಾರಿದ್ದಾರೆ?
ಪ್ರಕರಣ ಸಂಬಂಧ ತನಿಖೆಯನ್ನು ತೀವ್ರಗೊಳಿಸಿರುವ ಪೊಲೀಸರು, ಈ ಜಾಲದ ಹಿಂದಿನ ಮಾಸ್ಟರ್‌ಮೈಂಡ್‌ಗಳನ್ನು ಪತ್ತೆಹಚ್ಚಲು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಸ್ಥಳೀಯರಲ್ಲಿ ಈ ಘಟನೆಯಿಂದ ಆತಂಕ ಮೂಡಿದ್ದು, ಶಿಕ್ಷಣ ಸಂಸ್ಥೆಗಳ ಸಮೀಪ ಇಂತಹ ದಂಧೆಗಳು ನಡೆಯುತ್ತಿರುವುದು ಗಂಭೀರ ಸಮಸ್ಯೆಯಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ