ತಮ್ಮ ಮನೆ ಹುಡುಗಿಯನ್ನ ಪ್ರೀತಿಸಿದ್ದಕ್ಕೆ ಯುವಕನಿಗೆ ಚಾಕು ಇರಿದ ಹುಡುಗಿಯ ಚಿಕ್ಕಪ್ಪ!

Published : Jul 30, 2025, 02:38 PM ISTUpdated : Jul 30, 2025, 03:04 PM IST
Hubballi crime news today

ಸಾರಾಂಶ

ಹುಬ್ಬಳ್ಳಿಯಲ್ಲಿ ಪ್ರೀತಿ ವಿಚಾರಕ್ಕೆ ಸಂಬಂಧಿಸಿದ ಗಲಾಟೆಯಲ್ಲಿ ಯುವಕನಿಗೆ ಚಾಕು ಇರಿತ. ಯುವತಿಯ ಚಿಕ್ಕಪ್ಪನೇ ದಾಳಿ ಮಾಡಿದ್ದಾನೆ ಎಂಬ ಆರೋಪ. ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು ತನಿಖೆ ಆರಂಭ.

ಹುಬ್ಬಳ್ಳಿ (ಜುಲೈ.30): ಹುಬ್ಬಳ್ಳಿಯ ಸದರಸೋಪಾ ಓಣಿಯಲ್ಲಿ ಪ್ರೀತಿ ವಿಚಾರಕ್ಕೆ ಸಂಬಂಧಿಸಿದ ಗಲಾಟೆಯೊಂದರಲ್ಲಿ ಯುವಕನೋರ್ವನಿಗೆ ಚಾಕು ಇರಿತವಾದ ಘಟನೆ ನಡೆದಿದೆ. ಗೌಸ್ ಮೊಯಿನುದ್ದೀನ್ ಎಂಬ ಯುವಕನಿಗೆ ಚಾಕುವಿನಿಂದ ಇರಿದು ಗಂಭೀರ ಗಾಯಗೊಳಿಸಲಾಗಿದ್ದು, ಆತನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗೌಸ್ ಮೊಯಿನುದ್ದೀನ್ ಸ್ಥಳೀಯ ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದು, ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ. ಈ ವಿಷಯಕ್ಕೆ ಸಂಬಂಧಿಸಿ ಯುವತಿಯ ಚಿಕ್ಕಪ್ಪನಾದ ವಸೀಂ ಕುಪಿತಗೊಂಡು ನಮ್ಮ ಮನೆ ಹುಡುಗಿಯನ್ನ ಪ್ರೀತಿಸುತ್ತೀಯಾ ಎಂದು ಗೌಸ್‌ನ ಮೇಲೆ ಚಾಕುವಿನಿಂದ ದಾಳಿ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.

ಯುವತಿಯೇ ಗೌಸ್‌ಗೆ ಫೋನ್ ಮಾಡಿ ಸದರಸೋಪಾ ಓಣಿಗೆ ಕರೆಸಿದ್ದಳು ಎನ್ನಲಾಗಿದ್ದು, ಆಕೆಯ ಮಾತನ್ನು ನಂಬಿ ಬಂದ ಗೌಸ್‌ನ ಮೇಲೆ ಈ ದಾಳಿ ನಡೆದಿದೆ. ಗಾಯಗೊಂಡ ಗೌಸ್‌ನನ್ನು ತಕ್ಷಣವೇ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆತ ಚೇತರಿಸಿಕೊಳ್ಳುತ್ತಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಲ್ಲಿ ಖಾಸಗಿ ಕಂಪನಿಯ ಸರ್ವರ್ ಹ್ಯಾಕ್ ಮಾಡಿ ₹378 ಕೋಟಿ ಕದ್ದ ಖದೀಮರು! ಕರ್ನಾಟಕ ಇತಿಹಾಸದಲ್ಲೇ ಅತಿದೊಡ್ಡ ಸೈಬರ್ ವಂಚನೆ!

ಘಟನೆಯ ಹಿನ್ನೆಲೆಯಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಅವರು ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ, ಗಾಯಾಳುವಿನ ಆರೋಗ್ಯ ವಿಚಾರಿಸಿದ್ದಾರೆ. ಆರೋಪಿಗಳಾದ ವಸೀಂ ಹಾಗೂ ಯುವತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಚಾಕು ಇರಿತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ತನಿಖೆ ನಡೆಸಲಾಗುತ್ತಿದೆ. ಈ ಸಂಬಂಧ ಕಸಬಾಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಮಾತನಾಡಿ, 'ಪ್ರಕರಣದ ಬಗ್ಗೆ ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸುತ್ತೇವೆ. ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಘಟನೆಯ ಹಿನ್ನೆಲೆಯಲ್ಲಿ ಸಾರ್ವಜನಿಕರು ಶಾಂತಿ ಕಾಪಾಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮಿರ್ಜಾ ಇಸ್ಮಾಯಿಲ್ ಮೊಮ್ಮಗಳ ಹಂತಕನಿಗೆ ಜೈಲೇ ಗತಿ, ಏನಿದು ಪ್ರಕರಣ?
ಬೆಂಗಳೂರಿನ ಬಾಡಿಗೆ ಮನೆಯಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ