
ಮೂಡಲಗಿ(ಜೂ.02): ಜಗಳದ ಮಧ್ಯೆ ಪತಿ ಪತ್ನಿಗೆ ಹೊಡೆದಿದ್ದಾನೆ. ಈ ವೇಳೆ ಪತ್ನಿ ಪ್ರಜ್ಞೆ ತಪ್ಪಿ ಕೆಳಗೆ ಬಿದ್ದಿದ್ದಾಳೆ. ತಾನು ಹೊಡೆದ ಹೊಡೆತಕ್ಕೆ ಪತ್ನಿ ಮೃತಪಟ್ಟಿದ್ದಾಳೆ ಎಂದು ಭಾವಿಸಿ ಪತಿಯೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ನಾಗನೂರ ಪಟ್ಟಣದಲ್ಲಿ ಬುಧವಾರ ನಡೆದಿದೆ.
ನಾಗನೂರು ಪಟ್ಟಣದ ಅರಣ್ಯಸಿದ್ದೇಶ್ವರ ತೋಟದ ನಿವಾಸಿ ಮಹಾಂತೇಶ ಸಿದ್ದಪ್ಪ ಗೂಡೆನ್ನವರ ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ ಕಳೆದ ಎಂಟು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ. ಬುಧವಾರ ದಂಪತಿ ನಡುವೆ ಜಗಳವಾಗಿದೆ. ಇದರಿಂದ ಹೆಂಡತಿಗೆ ಮಹಾಂತೇಶ ಹೊಡೆದಿದ್ದಾನೆ. ಆಗ ಪತ್ನಿ ಪ್ರಜ್ಞೆ ತಪ್ಪಿ ಕೆಳಗೆ ಬಿದ್ದಿದ್ದಾಳೆ. ಹೆಂಡತಿ ಕೆಳಗೆ ಬಿದ್ದಿದ್ದನ್ನು ನೋಡಿ ಅವಳು ಸಾವನ್ನಪ್ಪಿದ್ದಾಳೆ ಎಂಬ ಭಯದಲ್ಲಿ ಮನೆಯಲ್ಲಿರುವ ಗೋಡೆಯ ಗೂಟಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಕುರಿತು ಮೂಡಲಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಮೂಡಲಗಿ ಪೊಲೀಸ್ ಠಾಣೆಯ ಪಿಎಸ್‌ಐ ಎಚ್ ವೈ ಬಾಲದಂಡಿ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಚಿಕ್ಕೋಡಿ: ಎಂಟು ವರ್ಷದ ಮಗಳ ಜತೆ ತಾಯಿ ಆತ್ಮಹತ್ಯೆ
ಬಂಕ್‌ನಿಂದ 400 ಲೀ. ಡೀಸೆಲ್ ಕಳ್ಳತನ
ಮೂಡಲಗಿ: ಗುರ್ಲಾಪೂರ ಸಮೀಪದ ಹಾರೂಗೇರಿ-ಕ್ರಾಸ್ ಬಳಿರುವ ಪೆಟ್ರೋಲ್ ಬಂಕ್‌ದಲ್ಲಿ ಮೇ 17 ರಾತ್ರಿ 400 ಲೀಟರ್ ಡೀಸೆಲ್ ಕಳ್ಳತನವಾಗಿದೆ ಎಂದು ಮೂಡಲಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 400 ಲೀಟರ್ ಡೀಸೆಲ್ ಕಳ್ಳತನವಾಗಿದೆ ಎಂದು ಪೆಟ್ರೋಲ್ ಬಂಕ್ ಮಾಲೀಕ ಮಂಜುನಾಥ ಶಾಬು ಜಗದಾಳ ಎಂಬುವವರು ಬುಧವಾರ ಮೂಡಲಗಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ