
ಹಾಸನ(ನ.20): ವರದಕ್ಷಿಣೆ ತರುವಂತೆ ಪತ್ನಿಗೆ ಕಿರುಕುಳ ನೀಡುತ್ತಿದ್ದ ಪತಿ ಜಗಳ ತಾರಕಕ್ಕೇರಿ ಗಂಭೀರವಾಗಿ ಹಲ್ಲೆ ನಡೆಸಿದ್ದರಿಂದ ಗರ್ಭಿಣಿ ಪತ್ನಿ ಸಾವನ್ನಪ್ಪಿದ ಘಟನೆ ಚನ್ನರಾಯಪಟ್ಟಣ ತಾಲೂಕಿನ ನೊರನಕ್ಕಿ ಗ್ರಾಮದಲ್ಲಿ ನಡೆದಿದೆ. ನಯನ (24) ಪತಿಯಿಂದ ಕೊಲೆಯಾದ ಪತ್ನಿ.
ಪತ್ನಿ ಸಾವನ್ನಪುತ್ತಲೇ ಪತಿ ಅಯ್ಯಪ್ಪ (31) ಕೂಡ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಚಾಮರಾಜನಗರ ಪೊಲೀಸರ ನಿದ್ದೆಗೆಡಿಸಿದ್ದ ಕಳ್ಳರ ಗ್ಯಾಂಗ್ ಅಂಧರ್: ನಾಲ್ವರು ಖತರ್ನಾಕ್ ಖದೀಮರು ಅರೆಸ್ಟ್
3 ವರ್ಷಗಳ ಹಿಂದೆ ಅಯ್ಯಪ್ಪ ಅವರು ದೊಡ್ಡರಿ ಕಾವಲು ಗ್ರಾಮದ ನಯನಳನ್ನು ಮದುವೆಯಾಗಿದ್ದರು. ದಂಪತಿಗೆ ಒಂದು ಗಂಡು ಮಗು ಕೂಡ ಇತ್ತು. ನಯನ ನಾಲ್ಕು ತಿಂಗಳ ಗರ್ಭಿಣಿಯಾಗಿದ್ದಳು. ಪದೇ ಪದೆ ವರದಕ್ಷಿಣೆ ತರುವಂತೆ ಕಿರುಕುಳ ನೀಡುತ್ತಿದ್ದ ಅಯ್ಯಪ್ಪನ ವಿರುದ್ಧ ನಯನ ಎರಡು ಬಾರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಳು. ಅಯ್ಯಪ್ಪನನ್ನು ಠಾಣೆಗೆ ಕರೆಸಿದ ಪೊಲೀಸರು ಬುದ್ದಿ ಹೇಳಿ ಕಳುಹಿಸಿದ್ದರು. ಆದರೂ ಬುದ್ದಿ ಕಲಿತಿರಲಿಲ್ಲ ಎನ್ನಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ