ಹೆಂಡತಿಯನ್ನು ಕೊಲೆ ಮಾಡಿ ಆತ್ಮಹತ್ಯೆ ಮಾಡಿಕೊಂಡ ಪತಿ

Published : Aug 02, 2023, 10:53 AM IST
ಹೆಂಡತಿಯನ್ನು ಕೊಲೆ ಮಾಡಿ ಆತ್ಮಹತ್ಯೆ ಮಾಡಿಕೊಂಡ ಪತಿ

ಸಾರಾಂಶ

ಪತ್ನಿಯನ್ನ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿ, ನಂತೆ ಪತಿಯು ಆತ್ಮಹತ್ಯೆ ಮಾಡಿಕೊಂಡ ಘಟನೆ ಸರ್ಜಾಪುರ ಸಮೀಪದ ಬಿಕ್ಕನಹಳ್ಳಿಯ ಜನತಾಕಾಲೋನಿಯಲ್ಲಿ ನಡೆದಿದೆ. 

ಆನೇಕಲ್ (ಆ.02): ಪತ್ನಿಯನ್ನ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿ, ನಂತೆ ಪತಿಯು ಆತ್ಮಹತ್ಯೆ ಮಾಡಿಕೊಂಡ ಘಟನೆ ಸರ್ಜಾಪುರ ಸಮೀಪದ ಬಿಕ್ಕನಹಳ್ಳಿಯ ಜನತಾಕಾಲೋನಿಯಲ್ಲಿ ನಡೆದಿದೆ. ಲಕ್ಷ್ಮಮ್ಮ(47) ಪತಿಯಿಂದಲೇ ದಾರುಣವಾಗಿ ಕೊಲೆಯಾದ ಮಹಿಳೆ. ವೆಂಕಟಸ್ವಾಮಿ(53) ಪತ್ನಿಯನ್ನ ಕೊಲೆ ಮಾಡಿ, ಆತ್ಮಹತ್ಯೆ ಮಾಡಿಕೊಂಡ ಪತಿ. ಇಬ್ಬರು ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದ ದಂಪತಿಗೆ ಇಬ್ಬರು ಹೆಣ್ಣು ಮಕ್ಕಳಿದ್ದು, ಅವರಿಗೆ ಮದುವೆಯಾಗಿತ್ತು.

ದಂಪತಿಗಳ ನಡುವೆ ರಾತ್ರಿ ಕ್ಷುಲ್ಲಕ ಕಾರಣಕ್ಕಾಗಿ ಗಲಾಟೆಯಾಗಿದ್ದು, ಮನೆಯಲ್ಲಿದ್ದ ಮಚ್ಚಿನಿಂದ ಪತ್ನಿಯನ್ನ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿ ಬಳಿಕ ವಿಷ ಸೇವಿಸಿ ಪತಿಯು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಬೆಳಗ್ಗೆ ಅಕ್ಕಪಕ್ಕದ ಮನೆಯ ನಿವಾಸಿಗಳು ನೋಡಿ ಪೋಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಸರ್ಜಾಪುರ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ತಾವರೆಕರೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಸಿಸಿ ಕ್ಯಾಮೆರಾದಲ್ಲಿ ಸೆರೆ

ತಾಯಿ ಜತೆ ಸುಲಿಗೆ ಬೆಳೆಸಿದ್ದ ಬಾಣಸಿಗನ ಹತ್ಯೆ: ತಾಯಿ ಜತೆಗೆ ಸಲುಗೆಯಿಂದ ಇದ್ದ ಎಂಬ ಕಾರಣಕ್ಕೆ ಕೋಪಗೊಂಡು ಪೇಯಿಂಗ್‌ ಗೆಸ್ಟ್‌(ಪಿಜಿ)ನ ಬಾಣಸಿಗನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ಮಾಗಡಿ ರಸ್ತೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಗೋಪಾಲಪುರ ನಿವಾಸಿ ರಾಹುಲ್‌(24) ಬಂಧಿತ. ಆರೋಪಿಯು ಕಳೆದ ಶುಕ್ರವಾರ ರವಿ ಭಂಡಾರಿ(44)ಯನ್ನು ಕೊಲೆ ಮಾಡಿದ್ದ. ಕಾರ್ಯಾಚರಣೆ ನಡೆಸಿ ಕಲಬುರಗಿಯಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿ ನಗರಕ್ಕೆ ತಂದು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪತ್ನಿ ಹಾಗೂ ಪೋಷಕರ ಕಿರುಕುಳಕ್ಕೆ ಬೇಸತ್ತು ನವವಿವಾಹಿತ ಆತ್ಮಹತ್ಯೆಗೆ ಶರಣು!

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಮೂಲದ ರವಿ ಭಂಡಾರಿ, ಪತ್ನಿ ಮತ್ತು ಇಬ್ಬರು ಮಕ್ಕಳ ಜತೆಗೆ ನೆಲೆಸಿದ್ದರು. ರಾಜಾಜಿನಗರದಲ್ಲಿ ಪೇಯಿಂಗ್‌ ಗೆಸ್ಟ್‌ ನಡೆಸುತ್ತಿದ್ದ ಸುರೇಶ್‌ ಭಂಡಾರಿ, ರವಿ ಭಂಡಾರಿಯನ್ನು ಒಂದೂವರೆ ತಿಂಗಳ ಹಿಂದೆ ಬೆಂಗಳೂರಿಗೆ ಕರೆತಂದು ಪಿಜಿಯಲ್ಲಿ ಅಡುಗೆ ಕೆಲಸಕ್ಕೆ ನಿಯೋಜಿಸಿದ್ದರು. ಕಲುಬುರಗಿ ಮೂಲದ ಪದ್ಮಾವತಿ, ಸುರೇಶ್‌ ಭಂಡಾರಿ ನಡುವೆ ಆತ್ಮೀಯತೆ ಇತ್ತು. ಇದನ್ನು ರಾಹುಲ್‌ ಸಹಿಸುತ್ತಿರಲಿಲ್ಲ. ಇದೇ ವಿಚಾರಕ್ಕೆ ರವಿ ಭಂಡಾರಿ ವಿರುದ್ಧ ಕೋಪಗೊಂಡಿದ್ದ ರಾಹುಲ್‌, ಶುಕ್ರವಾರ ಮಧ್ಯಾಹ್ನ 3.30ರಲ್ಲಿ ರವಿ ಭಂಡಾರಿಗೆ ಕರೆ ಮಾಡಿ ತನ್ನ ಮನೆಗೆ ಕರೆಸಿ ಜಗಳ ತೆಗೆದು ಹತ್ಯೆ ಮಾಡಿದ್ದ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಡ್ರಗ್ಸ್‌ ಸಪ್ಲೈಗೆ ಸ್ತ್ರೀಯರ ಬಳಕೆ ಅಧಿಕ! ಆಫ್ರಿಕಾ ಖಂಡದ ಸ್ತ್ರೀಯರೇ ಅಧಿಕ
ಗುಜರಾತ್‌ನಲ್ಲೊಂದು ನಿರ್ಭಯಾ ಪ್ರಕರಣ