
ಸಿಂಧನೂರು(ನ.19): ಪತಿಯೊಬ್ಬ ಪತ್ನಿಗೆ ನೇಣು ಬಿಗಿದು ಕೊಲೆ ಮಾಡಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ನಗರದ ನಟರಾಜ ಕಾಲೊನಿಯ ಭುವನೇಶ್ವರಿ (31) ಮೃತ ಮಹಿಳೆ.
ತಾಲೂಕಿನ ಹೊಸಳ್ಳಿ ಇ.ಜೆ ಗ್ರಾಮದ ನಾಗರಾಜ ಹಾಗೂ ಭುವನೇಶ್ವರಿ ಇಬ್ಬರು ಪರಸ್ಪರ ಪ್ರೀತಿಸಿ ಮದುವೆ ಆಗಿ 14 ವರ್ಷಗಳಾಗಿದ್ದು, ಇವರಿಗೆ ಇಬ್ಬರು ಪುತ್ರಿಯರು ಇದ್ದಾರೆ. ಪ್ರತಿನಿತ್ಯ ಮದ್ಯ ಸೇವಿಸಿ ಹಿಂಸೆ ನೀಡುತ್ತಿದ್ದನು ಎಂದು ಹೇಳಲಾಗಿದೆ.
ಅವಳಿಗಾಗಿ ಬಂದವನು 4 ಹೆಣಗಳನ್ನ ಉರುಳಿಸಿದ್ದ..! ಎಸ್ಕೇಪ್ ಆಗಿದ್ದವನು ತಗ್ಲಾಕಿಕೊಂಡಿದ್ದೇಗೆ..?
ಹೊಸಳ್ಳಿ ಇ.ಜೆ ಗ್ರಾಮ ಬಿಟ್ಟು ಸಿಂಧನೂರು ನಗರದ ಪಟೇಲವಾಡಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಇಲ್ಲಿಯೂ ಪ್ರತಿನಿತ್ಯ ದುಡಿಯದೆ, ಮದ್ಯ ಸೇವಿಸಿ ಬಂದು ಜಗಳ ಆಡುತ್ತಿದ್ದನು. ಶುಕ್ರವಾರ ರಾತ್ರಿ ಪತ್ನಿ ಭುವನೇಶ್ವರಿಗೆ ಹೊಡೆದಿದ್ದು, ಪ್ರಜ್ಞೆ ತಪ್ಪಿ ಬಿದ್ದಾಗ ಕೊರಳಿಗೆ ನೇಣು ಬಿಗಿದು ಕೊಲೆ ಮಾಡಿದ್ದಾನೆ ಎಂದು ಭುವನೇಶ್ವರಿ ತಾಯಿ ಲಲಿತಮ್ಮ ಶಹರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ಪತಿ ನಾಗರಾಜನನ್ನು ಬಂಧಿಸಲಾಗಿದ್ದು, ಪೊಲೀಸ್ ಇನ್ಸ್‌ಪೆಕ್ಟರ್ ದುರುಗಪ್ಪ ಡೊಳ್ಳಿನ್ ತನಿಖೆ ಕೈಗೊಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ