
ವರದಿ: ಆಲ್ದೂರು ಕಿರಣ್, ಏಷ್ಯಾನೆಟ್ ಸುವರ್ಣ ನ್ಯೂಸ್, ಚಿಕ್ಕಮಗಳೂರು
ಚಿಕ್ಕಮಗಳೂರು(ಸೆ.05): ಒಂದು ವಾರಗಳ ಕಾಲ ಪತ್ನಿ ಜೊತೆ ಗೋವಾ ರೌಂಡ್ಸ್ ಮಾಡಿಕೊಂಡು ಬಂದ ಪತಿ ಮನೆಗೆ ಬಂದ ಮರುದಿನವೇ ಪತ್ನಿಯನ್ನ ಕೊಲೆ ಮಾಡಿರುವ ಘಟನೆ ಚಿಕ್ಕಮಗಳೂರು ನಗರದ ಕ್ರಿಶ್ಚಿಯನ್ ಕಾಲೋನಿಯಲ್ಲಿ ಇಂದು(ಮಂಗಳವಾರ) ನಡೆದಿದೆ. ಮೃತಳನ್ನ ಶಮಾಭಾನು(34) ಎಂದು ಗುರುತಿಸಲಾಗಿದೆ.
ಪತ್ನಿಯನ್ನ ಕೊಲೆಗೈದ ಪತಿ ಶಬ್ಬರ್ ಅಹಮದ್ ಸೀದಾ ನಗರ ಪೊಲೀಸ್ ಠಾಣೆಗೆ ಹೋಗಿ ಶರಣಾಗಿದ್ದಾನೆ. ಆರೋಪಿ ಶಬ್ಬೀರ್ ಅಹಮದ್ ತನ್ನ ಪತ್ನಿ ಶಮಾಭಾನು ಜೊತೆ ಗೋವಾ ಪ್ರವಾಸ ಹೋಗಿದ್ದನು. ಒಂದು ವಾರಗಳ ಕಾಲ ಗೋವಾದಲ್ಲಿ ಪ್ರವಾಸ ಮುಗಿಸಿ ಬಂದ ಮರುದಿನವೇ ಪತ್ನಿಯನ್ನ ಸುತ್ತಿಗೆಯಿಂದ ಹೊಡೆದು ಕೊಲೆಗೈದಿದ್ದಾನೆ.
ಆಂಟಿಗೆ ಮೆಸೇಜ್ ಮಾಡಿದವನು ಹೆಣವಾದ..! ಸಂಜೆ ರಾಜಿ ಪಂಚಾಯ್ತಿ.. ರಾತ್ರಿ ಮರ್ಡರ್..!
ಮನೆಯ ರೂಮಿನ ಗೋಡೆಗಳೆಲ್ಲಾ ರಕ್ತಮಯವಾಗಿದೆ. ಆರೋಪಿ ಶಬ್ಬೀರ್ ಮೊದಲ ಪತ್ನಿ ಕೊರೋನಾದಿಂದ ಸಾವನ್ನಪ್ಪಿದ್ದರು. ಹಿರಿಯ ಪತ್ನಿ ಸಾವಿನ ನಂತರ ಕಳೆದೊಂದು ವರ್ಷದ ಹಿಂದೆ ಶಮಾಭಾನುರನ್ನ ಮದುವೆಯಾಗಿದ್ದನು. ಇದೀಗ, ಆಕೆಯನ್ನ ಸುತ್ತಿಗೆಯಿಂದ ಹೊಡೆದು ಕೊಲೆಗೈದು ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ.
ಪೊಲೀಸರಿಗೆ ಶರಣಾಗಿರುವ ಆರೋಪಿ ಇಬ್ಬರಿಗೂ ಜಗಳವಾಯ್ತು, ಆಕೆ ನನ್ನನ್ನ ತಲೆದಿಂಬಿನಿಂದ ಮುಖಕ್ಕೆ ಮುಚ್ಚಿ ಸಾಯಿಸಲು ಯತ್ನಿಸಿದ್ದಳು. ಅದಕ್ಕೆ ಹೊಡೆದಿದ್ದೇನೆ ಎಂದು ಮಾಹಿತಿ ನೀಡಿದ್ದಾನೆ. ಸ್ಥಳಕ್ಕೆ ನಗರ ಪೊಲೀಸರು ಹಾಗೂ ಎಸ್ಪಿ ವಿಕ್ರಮ್ ಅಮಟೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ