ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಅಕ್ಕತಂಗೇರಹಾಳ ಗ್ರಾಮದಲ್ಲಿ ನಡೆದ ಘಟನೆ, ಆರೋಪಿಯನ್ನು ಬಂಧಿಸಿದ ಪೊಲೀಸರು.
ಬೆಳಗಾವಿ(ಜು.05): ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಮಾರಾಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ಗೋಕಾಕ ತಾಲೂಕಿನ ಅಕ್ಕತಂಗೇರಹಾಳ ಗ್ರಾಮದಲ್ಲಿ ನಿನ್ನೆ(ಮಂಗಳವಾರ) ಸಂಭವಿಸಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಅಕ್ಕತಂಗೇರಹಾಳ ಗ್ರಾಮದ ನಿವಾಸಿ ಯಲ್ಲಪ್ಪ ಲಕ್ಕಪ್ಪ ಮಾಳಗಿ (45) ಕೊಲೆಗೈದ ಆರೋಪಿ. ತನ್ನ ಹೆಂಡತಿ ಇನ್ನೋರ್ವನ ಜೊತೆಗೆ ಅನೈತಿಕ ಸಂಬಂಧ ಇದೆ ಎಂದು ಶಂಕಿಸಿ ಹೆಂಡತಿ ರೇಣುಕಾ ಯಲ್ಲಪ್ಪ ಮಾಳಗಿ (40) ಹಾಗೂ ಮಲ್ಲಿಕಾರ್ಜುನ ಜಗದಾರ (40) ಎಂಬುವರನ್ನು ಮಾರಕಾಸ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದು, ಮಲ್ಲಿಕಾರ್ಜುನ ಸ್ಥಳದಲ್ಲೇ ಸಾವನ್ನಪ್ಪಿದ್ದು, ರೇಣುಕಾಳನ್ನು ಆಸ್ಪತ್ರೆಗೆ ಸಾಗಿಸುವ ಸಂದರ್ಭದಲ್ಲಿ ಸಾವನ್ನಪ್ಪಿದ್ದಾಳೆ.
ಅಂಕಲಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಅಂಕಲಗಿ ಠಾಣೆಯ ಪಿಎಸ್‌ಐ ಎಚ್ ಡಿ ಯರಜರವಿ ತಿಳಿಸಿದ್ದಾರೆ.