
ವರದಿ: ಆಲ್ದೂರು ಕಿರಣ್, ಏಷ್ಯಾನೆಟ್ ಸುವರ್ಣ ನ್ಯೂಸ್, ಚಿಕ್ಕಮಗಳೂರು
ಚಿಕ್ಕಮಗಳೂರು (ಅ.14): ಕುಡಿದ ಮತ್ತಿನಲ್ಲಿ ಪತ್ನಿಯ ಅನೈತಿಕ ಸಂಬಂಧದ ಬಗ್ಗೆ ಶಂಕಿಸಿ ಪತಿಯೇ ಪತ್ನಿಯನ್ನ ಕೊಲೆಗೈದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಿರಗುಂದ ಗ್ರಾಮದಲ್ಲಿ ನಡೆದಿದೆ. ಮೃತಳನ್ನ 40 ವರ್ಷದ ಪದ್ಮಾಕ್ಷಿ ಎಂದು ಗುರುತಿಸಲಾಗಿದೆ. ಕಿರಗುಂದ ಗ್ರಾಮದ ಕಾಫಿತೋಟದಲ್ಲಿ ಕೆಲಸ ಮಾಡುತ್ತಿದ್ದ ಚಂದ್ರ-ಪದ್ಮಾಕ್ಷಿ ದಂಪತಿ ಮಧ್ಯೆ ಕುಡಿತ ಹಾಗೂ ಪದ್ಮಾಕ್ಷಿಯ ಅನೈತಿಕ ಸಂಬಂಧದ ಬಗ್ಗೆ ಗಲಾಟೆ ನಡೆಯುತ್ತಲೇ ಇತ್ತು.
ಕಳೆದ ರಾತ್ರಿ ಕಂಠ ಪೂರ್ತಿ ಕುಡಿದು ಬಂದ ಪತಿ ಚಂದ್ರ ಪತ್ನಿ ಜೊತೆ ಜಗಳವಾಡಿದ್ದಾನೆ. ಕುಡಿದ ಮತ್ತಿನಲ್ಲಿ ಅನೈತಿಕ ಸಂಬಂಧವನ್ನ ಶಂಕಿಸಿ ಜಗಳವಾಡಿ ಪತ್ನಿಗೆ ಹೊಡೆದು, ಮನೆಯಲ್ಲಿದ್ದ ಕೊಡಲಿಯಿಂದ ಪತ್ನಿ ಮೇಲೆ ಹಲ್ಲೆ ಮಾಡಿದ್ದಾನೆ. ಕೊಡಲಿಯಿಂದ ಹಲ್ಲೆಗೈದ ಪತಿ ಆಕೆಯನ್ನ ಮನೆಯಿಂದ ಹೊರತಳ್ಳಿ ಬಾಗಿಲು ಹಾಕಿಕೊಂಡು ಮಲಗಿದ್ದಾನೆ.
ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಶೀಘ್ರ ಆರಂಭ: ಸಚಿವ ಮಧು ಬಂಗಾರಪ್ಪ
ಪತ್ನಿಯ ಶವದ ಮುಂದೆ ಕೂತು ಕಣ್ಣೀರು: ಕೊಡಲಿಯಿಂದ ಹಲ್ಲೆಗೈದ ಹಿನ್ನೆಲೆ ತೀವ್ರ ರಕ್ತಸ್ರಾವ ಹಾಗೂ ಇಡೀ ರಾತ್ರಿ ಹೊರಗೆ ಬಿದ್ದಿದ್ದ ಮಹಿಳೆ ಪದ್ಮಾಕ್ಷಿ ಅತಿಯಾದ ಶೀತದಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಪತ್ನಿಗೆ ಹೊಡೆದು ಹೊರತಳ್ಳಿ ಮಲಗಿದ್ದ ಪತಿ ಚಂದ್ರ ಬೆಳಗ್ಗೆ ಎದ್ದು ನೋಡಿದಾಗ ಪತ್ನಿ ಸಾವನ್ನಪ್ಪಿದ್ದಳು. ಪತ್ನಿಯ ಶವದ ಮುಂದೆ ಕೂತು ಕಣ್ಣೀರಿಟ್ಟಿದ್ದಾನೆ. ಮೃತಳಿಗೆ 18 ಹಾಗೂ 15 ವರ್ಷದ ಇಬ್ಬರು ಹೆಣ್ಣು ಮಕ್ಕಳಿದ್ದು ಇವರ ಜಗಳದ ವೇಳೆ ಅವರು ಮನೆಯಲ್ಲಿ ಇರಲಿಲ್ಲ. ಬೆಳಗ್ಗೆ ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಆರೋಪಿ ಚಂದ್ರನನ್ನ ಬಂಧಿಸಿದ್ದಾರೆ. ಗೋಣಿಬೀಡು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ