* ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಬೀಡಿ ಗ್ರಾಮದಲ್ಲಿ ನಡೆದ ಘಟನೆ
* ಆಸ್ತಿ ಹಂಚಿಕೆ ವಿಚಾರವಾಗಿ ಆರಂಭವಾದ ಗಲಾಟೆ ಕೊಲೆಯಲ್ಲಿ ಅಂತ್ಯ
* ಮೃತಳ ಪತಿ ರಹಮಾನ್ ಸೇರಿ 6 ಜನರ ವಿರುದ್ಧ ಪ್ರಕರಣ ದಾಖಲು
ಬೆಳಗಾವಿ(ಆ.12): ಸಹೋದರರ ಜೊತೆಗೂಡಿ ಪತ್ನಿಯನ್ನೇ ಪತಿ ಹತ್ಯೆಗೈದ ಘಟನೆ ಜಿಲ್ಲೆಯ ಖಾನಾಪುರ ತಾಲೂಕಿನ ಬೀಡಿ ಗ್ರಾಮದಲ್ಲಿ ಇಂದು(ಗುರುವಾರ) ನಡೆದಿದೆ. ರೇಷ್ಮಾ ರಹಮಾನ್ ತಾಸೆವಾಲೆ ಕೊಲೆಯಾದ ಮಹಿಳೆಯಾಗಿದ್ದಾಳೆ.
ಆಸ್ತಿ ಹಂಚಿಕೆ ವಿಚಾರವಾಗಿ ಆರಂಭವಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. ರಹಮಾನ್ ರಾಡ್‌ನಿಂದ ಹೊಡೆದು ರೇಷ್ಮಾಳನ್ನ ಬರ್ಬರವಾಗಿ ಹತ್ಯೆಗೈದಿದ್ದಾನೆ ಎಂದು ತಿಳಿದು ಬಂದಿದೆ.
ವಿದೇಶದಲ್ಲಿ ಗಂಡ, ಕಾಮದಾಹದಿಂದ ದಾರಿ ತಪ್ಪಿದ ಪತ್ನಿ: ಬಳಿಕ ನಡೆದಿದ್ದು ಘನಘೋರ
ಈ ಸಂಬಂಧ ಮೃತಳ ಪತಿ ರಹಮಾನ್ ಸೇರಿ 6 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಬಗ್ಗೆ ನಂದಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.