ಆಕೆಗೆ ಬೆಂಕಿ ಇಟ್ಟಾಗ ಜೀವ ಇತ್ತು: ರಾಕ್ಷಸನ ಹೇಳಿಕೆಗೆ ಮನಸ್ಸು ಕದಲಿತ್ತು!

By Suvarna News  |  First Published Dec 5, 2019, 2:51 PM IST

ವೈದ್ಯೆ ಮೇಲಿನ ರೇಪ್, ಕೊಲೆ ಪ್ರಕರಣ| ಬೆಂಕಿ ಇಟ್ಟಾಗ ಆಕೆ ಜೀವಂತವಾಗಿದ್ಲು| ಆಕೆ ಕೂಗಾಡುವುದನ್ನು ಕೇಳಿ ನಾವಲ್ಲೇ ನಿಂತಿದ್ವಿ| ಪ್ರಮುಖ ಆರೋಪಿ ಬಾಯ್ಬಿಟ್ಟ ಸತ್ಯ


ಹೈದರಾಬಾದ್[ಡಿ.05]: ತೆಲಂಗಾಣದ ರಾಜಧಾನಿ ಹೈದರಾಬಾದ್ ನಲ್ಲಿ ಪಶು ವೈದ್ಯೆ ಮೇಲೆ ನಡೆದ ಅತ್ಯಾಚಾರ ಪ್ರಕರಣದ ಬಳಿಕ, ಕೊಲೆ ಮಾಡಿ ಶವ ಸುಟ್ಟು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಎಲ್ಲಾ ರೋಪಿಗಳನ್ನು ಏಳು ದಿನಗಳವರೆಗೆ ಪೊಲೀಸ್ ಕಸ್ಟಡಿಗೆ ನೀಡಿದೆ. ಪೊಲೀಸ್ ಕಸ್ಟಡಿಯಲ್ಲಿರುವ ಆರೋಪಿಗಳು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ವಿಚಾರಗಳನ್ನು ಬಾಯ್ಬಿಟ್ಟಿದ್ದಾರೆ. ರೇಪ್ ಹಾಗೂ ಕೊಲೆ ಪ್ರಕರಣದ ಪ್ರಮುಖ ಆರೋಪಿ ತಾವು ವೈದ್ಯೆಯನ್ನು ಸುಡಲು ಬೆಂಕಿ ಹಚ್ಚಿದ ವೇಳೆ ಆಕೆ ಜೀವಂತವಿದ್ದಳೆಂದು ತಿಳಿಸಿದ್ದಾನೆ.

ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಪಾಶಾ 'ಸಾಮೂಹಿಕ ಅತ್ಯಾಚಾರ ನಡೆಸಿದ ಬಳಿಕ ಆಕೆ ಓಡಿ ಹೋಗಬಾರದೆಂದು, ನಾವೆಲ್ಲಾ ಆಕೆಯ ಕೈ ಕಾಲುಗಳನ್ನು ಹಗ್ಗದಿಂದ ಕಟ್ಟಿ ಹಾಕಿದ್ದೆವು. ರೇಪ್ ನಡೆಸಿದ ಬಳಿಕವೂ ಆಕೆಗೆ ಮದ್ಯ ಕುಡಿಸಿದ್ದೆವು. ಆಕೆ ಮತ್ತೆ ಪ್ರಜ್ಞಾಹೀನಳಾಗುತ್ತಿದ್ದಂತೆಯೇ ಲಾರಿಯಲ್ಲಿ ಹಾಕಿ ಬ್ರಿಜ್ ಕೆಳಗೆ ಒಯ್ದೆವು. ಬಳಿಕ ಅಲ್ಲೇ ಆಕೆಯ ಮೇಲೆ ಪೆಟ್ರೋಲ್ ಸುರಿದು ಸುಟ್ಟು ಹಾಕಿದೆವು ' ಎಂದಿದ್ದಾರೆ.

Tap to resize

Latest Videos

7 ಆದ್ಮೇಲೆ ಗಂಡ್ಮಕ್ಳ ಮೇಲೆ ನಿಗಾ ಇರಲಿ: ಈಕೆ ಹೇಳಿದ್ದು ನಿಮ್ಮ ಗಮನಕ್ಕಿರಲಿ!

ಅಲ್ಲದೇ 'ಆಕೆ ಮೃತಪಟ್ಟಿರಬಹುದೆಂದು ನಾವು ಭಾವಿಸಿದ್ದೆವು. ಆದರೆ ಬೆಂಕಿ ಹಚ್ಚುತ್ತಿದ್ದಂತೆಯೇ ಆಕೆ ಚೀರಾಡಲಾರಂಭಿಸಿದಳು. ಬಹಳಷ್ಟು ಸಮಯ ನಾವು ಆಕೆ ಚೀರಾಡುವುದನ್ನು ನೋಡಿ ಅಲ್ಲೇ ನಿಂತಿದ್ದೆವು. ಪೊಲೀಸರು ಅರೆಸ್ಟ್ ಮಾಡಬಹುದೆಂಬ ಭಯದಲ್ಲಿ ನಾವಾಕೆಯನ್ನು ಸಾಯಿಸಿದೆವು' ಎಂದಿದ್ದಾರೆ.

ಆಗಿದ್ದೇನು?:

ಸಂತ್ರಸ್ತ 27 ವರ್ಷದ ಪಶುವೈದ್ಯೆ ಶಂಶಾಬಾದ್‌ನಲ್ಲಿರುವ ತನ್ನ ಮನೆಯಿಂದ ಕೊಲ್ಲೂರು ಗ್ರಾಮದ ಪಶುವೈದ್ಯಕೀಯ ಆಸ್ಪತ್ರೆಗೆ ಬುಧವಾರ ಕರ್ತವ್ಯಕ್ಕೆ ದ್ವಿಚಕ್ರ ವಾಹನದ ಮೂಲಕ ತೆರಳಿದ್ದಳು. ಸಂಜೆ ಕರ್ತವ್ಯದಿಂದ ವಾಪಸು ಬರುವಾಗ ಗಚ್ಚಿಬೌಲಿಯಲ್ಲಿ ಚರ್ಮರೋಗ ತಜ್ಞರ ಭೇಟಿ ಮಾಡಬೇಕಿತ್ತು. ಹೀಗಾಗಿ ಸಂಜೆ 6ಕ್ಕೆ ತೊಂಡುಪಲ್ಲಿ ಎಂಬಲ್ಲಿನ ಟೋಲ್‌ ಪ್ಲಾಜಾದಲ್ಲಿ ತನ್ನ ದ್ವಿಚಕ್ರ ವಾಹನ ನಿಲ್ಲಿಸಿದ ಈಕೆ, ಅಲ್ಲಿಂದ ಬಾಡಿಗೆ ಕಾರಿನಲ್ಲಿ ಗಚ್ಚಿಬೌಲಿಗೆ ತೆರಳಿದಳು. ಆದರೆ ರಾತ್ರಿ 9ರ ಸುಮಾರಿಗೆ ಟೋಲ್‌ ಪ್ಲಾಜಾಗೆ ಮರಳುವ ವೇಳೆ ಆಕೆಯ ಸ್ಕೂಟರ್‌ ಪಂಕ್ಚರ್‌ ಆಗಿತ್ತು.

ಮನುಷ್ಯ ರೂಪದ ರಾಕ್ಷಸರಿದ್ದಾರೆ: ಪೋರ್ನ್‌ ಸೈಟ್‌ನಲ್ಲಿ ಪ್ರಿಯಾಂಕಾ ರೇಪ್ ವಿಡಿಯೋ ಹುಡುತ್ತಿದ್ದಾರೆ!

ಈ ವೇಳೆ ಸ್ಥಳದಲ್ಲಿಯೇ ಇದ್ದ ಕೆಲ ಟ್ರಕ್‌ ಚಾಲಕರು ಹಾಗೂ ಕ್ಲೀನರ್‌ಗಳು, ‘ನಿಮ್ಮ ವಾಹನದ ಪಂಕ್ಚರ್‌ ಹಾಕಿಸಿಕೊಡುತ್ತೇವೆ’ ಎಂದು ಸಹಾಯಕ್ಕೆ ಧಾವಿಸಿದ್ದರು. ಈ ಪೈಕಿ ಒಬ್ಬ ಸ್ಕೂಟರ್‌ ಅನ್ನು ಸಮೀಪದ ಪಂಕ್ಚರ್‌ ಶಾಪ್‌ಗೆ ತೆಗೆದುಕೊಂಡು ಹೋಗಿದ್ದ. ಈ ವೇಳೆ, ತನ್ನ ಸೋದರಿಗೆ ಕರೆ ಮಾಡಿದ ಪಶುವೈದ್ಯೆ, ‘ನನ್ನ ಗಾಡಿ ಪಂಕ್ಚರ್‌ ಆಗಿದೆ. ಇಲ್ಲೊಬ್ಬರು ಬಂದು ವಾಹನವನ್ನು ಪಂಕ್ಚರ್‌ ಶಾಪ್‌ಗೆ ತೆಗೆದುಕೊಂಡು ಹೋಗಿದ್ದಾರೆ. ನನ್ನ ಸುತ್ತ ಕೆಲವು ಟ್ರಕ್‌ ಡ್ರೈವರ್‌ಗಳಿದ್ದು, ಅವರನ್ನು ನೋಡಿ ನನಗೆ ಭಯವಾಗುತ್ತಿದೆ’ ಎಂದು ಆತಂಕ ವ್ಯಕ್ತಪಡಿಸಿದ್ದಳು. ಈ ವೇಳೆ ‘ಗಾಡಿಯನ್ನು ಟೋಲ್‌ ಪ್ಲಾಜಾದಲ್ಲೇ ಬಿಡು. ಬಾಡಿಗೆ ಕಾರಿನಲ್ಲಿ ಮನೆಗೆ ಮರಳು’ ಎಂದು ಸೂಚಿಸಿ ಸೋದರಿ ಫೋನ್‌ ಇಟ್ಟಳು. ಇದಾದ ಕೆಲವು ಹೊತ್ತಿನ ಬಳಿಕ ಮತ್ತೆ ಸೋದರಿ ಪಶುವೈದ್ಯೆಗೆ ಕರೆ ಮಾಡಿದಾಗ, ಆಕೆಯ ಮೊಬೈಲ್‌ ಸ್ವಿಚ್‌ಆಫ್‌ ಆಗಿತ್ತು.

ಶವದ ಜೊತೆ ಸೆಕ್ಸ್‌ಗಿಳಿಯುವಷ್ಟು ಸ್ಯಾಡಿಸ್ಟ್ ಆಗೋದಾದ್ರೂ ಯಾಕೆ?

ಇದೇ ಸಂದರ್ಭ ಬಳಸಿಕೊಂಡ ಟ್ರಕ್‌ ಚಾಲಕರು ಹಾಗೂ ಕ್ಲೀನರ್‌ಗಳು, ಪಶುವೈದ್ಯೆಯನ್ನು ಟೋಲ್‌ ಪ್ಲಾಜಾ ಸಮೀಪದ ನಿರ್ಜನ ಕೋಣೆಗೆ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿ, ಕೊಲೆ ಮಾಡಿದ್ದಾರೆ. ಬಳಿಕ ದೇಹವನ್ನು 25 ಕಿ.ಮೀ. ದೂರದ ಚಾತನಪಲ್ಲಿ ಎಂಬಲ್ಲಿಗೆ ಸಾಗಿಸಿ, ಅದನ್ನು ಶಾದ್‌ನಗರ ಪ್ರದೇಶದ ಹೈದರಾಬಾದ್‌-ಬೆಂಗಳೂರು ಹೈವೇ ಬ್ರಿಜ್‌ ಕೆಳಗೆ ಎಸೆದು ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ಈ ನಡುವೆ ಪಶುವೈದ್ಯೆ ನಾಪತ್ತೆಯಾಗಿದ್ದರಿಂದ ಆತಂಕಿತರಾದ ಆಕೆಯ ಕುಟುಂಬದವರು 11 ಗಂಟೆ ಸುಮಾರಿಗೆ ಪೊಲೀಸರಿಗೆ ದೂರು ನೀಡಿದ್ದಾರೆ. ಆಗ ಪೊಲೀಸರು ಹುಡುಕಾಟ ನಡೆಸಿದಾಗ ಶಾದ್‌ನಗರ ಬ್ರಿಜ್‌ ಕೆಳಗೆ ಗುರುವಾರ ಸುಟ್ಟಮೃತದೇಹ ಪತ್ತೆಯಾಗಿದೆ.

ಉದ್ದೇಶಪೂರ್ವಕ ಪಂಕ್ಚರ್‌:

‘ಬಂಧಿತ ನಾಲ್ವರೂ ದುರುಳರು ಉದ್ದೇಶಪೂರ್ವಕವಾಗಿ ಪಶುವೈದ್ಯೆಯ ದ್ವಿಚಕ್ರವಾಹನವನ್ನು ಪಂಕ್ಚರ್‌ ಮಾಡಿದ್ದರು ಎಂದು ದೃಢಪಟ್ಟಿದೆ. ಬಳಿಕ ಸಹಾಯ ಮಾಡುವ ನೆಪದಲ್ಲಿ ಆಕೆಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರಬಹುದು’ ಎಂದು ಪೊಲೀಸರು ಹೇಳಿದ್ದಾರೆ.

ವೈದ್ಯೆ ಕಿರುಚದಂತೆ ವಿಸ್ಕಿ ಸುರಿದಿದ್ದ ರೇಪಿಸ್ಟ್‌ಗಳು: ಪ್ರಜ್ಞೆ ತಪ್ಪಿದಾಗ ಅತ್ಯಾಚಾರ!

ಸಿಸಿಟೀವಿಯಲ್ಲಿ ಸುಳಿವು:

‘ಟೋಲ್‌ನಾಕಾದ ಸಿಸಿಟೀವಿಯನ್ನು ಪೊಲೀಸರು ಪರಿಶೀಲಿಸಿದಾಗ, ಗಾಡಿ ರಿಪೇರಿ ಮಾಡಿಸಿಕೊಡುವ ನೆಪದಲ್ಲಿ ನಾಲ್ವರು ಬಂದಿದ್ದು ಕಂಡುಬಂದಿದೆ. ಇದರ ಜಾಡನ್ನು ಹಿಡಿದು ಪೊಲೀಸರು ಶೋಧಿಸಿದಾಗ ಇಬ್ಬರು ಟ್ರಕ್‌ ಚಾಲಕರು ಹಾಗೂ ಇಬ್ಬರು ಕ್ಲೀನರ್‌ಗಳನ್ನು ಬಂಧಿಸಿದ್ದಾರೆ. ಇವರೆಲ್ಲರೂ ಕೃತ್ಯ ಎಸಗಿದಾಗ ಪಾನಮತ್ತರಾಗಿದ್ದು ಹಾಗೂ ಸಾಮೂಹಿಕ ಅತ್ಯಾಚಾರ ನಡೆಸಿದ್ದು ದೃಢಪಟ್ಟಿದೆ’ ಎಂದು ಸೈಬರಾಬಾದ್‌ ಪೊಲೀಸ್‌ ಆಯುಕ್ತ ವಿ.ಸಿ. ಸಜ್ಜನರ ಹೇಳಿದರು.

ಡಿಸೆಂಬರ್ 5ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ:

click me!