
ಹೈದರಾಬಾದ್‌ನಲ್ಲಿ ಮಹಿಳೆಯೊಬ್ಬರು ಬುಧವಾರ ತನ್ನ 19 ವರ್ಷದ ಮಗಳು ತನ್ನ ಗೆಳೆಯನೊಂದಿಗೆ ತಮ್ಮ ಮನೆಯಲ್ಲಿರುವುದನ್ನು ಕಂಡು, ಪುತ್ರಿಯನ್ನು ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ತನ್ನ ಮಗಳು ಭಾರ್ಗವಿ ತನ್ನ ಪ್ರಿಯಕರನೊಂದಿಗೆ ಇದ್ದುದನ್ನು ಜಂಗಮ್ಮ ನೋಡಿದ್ದಾರೆ. ಇದರಿಂದ ಕೋಪಗೊಂಡ ಆಕೆ ಇಬ್ರಾಹಿಂಪಟ್ಟಣದ ತಮ್ಮ ಮನೆಯಲ್ಲಿ ಮಗಳ ಕತ್ತು ಹಿಸುಕಿ ಕೊಲೆ ಮಾಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಬುಧವಾರ ಜಂಗಮ್ಮ ಕೆಲಸ ಮುಗಿಸಿ ಮನೆಗೆ ಊಟಕ್ಕೆ ಬಂದಿದ್ದು, ಭಾರ್ಗವಿ ತನ್ನ ಪ್ರಿಯಕರನ ಜೊತೆಯಲ್ಲಿ ಪತ್ತೆಯಾಗಿದ್ದಾಳೆ. ಇದನ್ನು ನೋಡಿದ ಆಕೆ ಮಗಳ ಪ್ರಿಯಕರನನ್ನು ಮನೆಯಿಂದ ಹೊರಗೆ ಕಳುಹಿಸಿದ್ದಾರೆ. ಬಳಿಕ ಮಗಳ ಮೇಲೆ ಹಲ್ಲೆ ನಡೆಸಿದ್ದು, ಸೀರೆಯಿಂದ ಕತ್ತು ಹಿಸುಕಿ ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಬ್ರಾಹಿಂಪಟ್ಟಣಂ ಪೊಲೀಸ್ ಅಧಿಕಾರಿ ಸತ್ಯನಾರಾಯಣ ಮಾತನಾಡಿ, ಸಂತ್ರಸ್ತೆಯ ಅಪ್ರಾಪ್ತ ಸಹೋದರ ತಾನು ಕೊಲೆಯನ್ನು ನೋಡಿದ್ದೇನೆ ಎಂದು ಹೇಳಿಕೊಂಡಿದ್ದಾನೆ ಮತ್ತು ತನ್ನ ತಾಯಿಯ ವಿರುದ್ಧ ದೂರು ದಾಖಲಿಸಿದ್ದಾನೆ. ತನ್ನ ತಾಯಿ ತನ್ನ ಸಹೋದರಿಯ ಮೇಲೆ ಹಲ್ಲೆ ಮಾಡುವುದನ್ನು ಕಿಟಕಿಯಿಂದ ನೋಡಿದ್ದಾಗಿ ಆತ ಪೋಲೀಸರಿಗೆ ಹೇಳಿದ್ದಾನೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ