ನನ್ನ ಗಂಡನನ್ನು ಕೊಲೆ ಮಾಡಿದ ಆರೋಪಿಗಳು ಮೂರು ಅಥವಾ ಆರು ತಿಂಗಳಿಗೆ ಜೈಲಿನಿಂದ ಹೊರಬಂದಲ್ಲಿ ನಾನು ಮತ್ತು ನನ್ನ ಮಗಳು ಕತ್ತು ಕೊಯ್ದುಕೊಂಡು ಸತ್ತು ಹೋಗುತ್ತೇವೆ.
ಮೈಸೂರು (ಜು.11): ಕ್ಷುಲ್ಲಕ ಕಾರಣಕ್ಕಾಗಿ ಹಿಂದೂಗಳನ್ನು ಕೊಲೆ ಮಾಡುತ್ತಿರುವ ಆರೋಪಿಗಳನ್ನು ಗಲ್ಲು ಶಿಕ್ಷೆಗೆ ಗುರಿಪಡಿಸಬೇಕು. ನನ್ನ ಗಂಡನನ್ನು ಕೊಲೆ ಮಾಡಿದ ಆರೋಪಿಗಳು ಮೂರು ಅಥವಾ ಆರು ತಿಂಗಳಿಗೆ ಜೈಲಿನಿಂದ ಹೊರಬಂದಲ್ಲಿ ನಾನು ಮತ್ತು ನನ್ನ ಮಗಳು ಕತ್ತು ಕೊಯ್ದುಕೊಂಡು ಸತ್ತು ಹೋಗುತ್ತೇವೆ ಎಂದು ಯುವ ಬ್ರಗೇಡ್ ಕಾರ್ಯಕರ್ತ ವೇಣುಗೋಪಾಲ್ ಪತ್ನಿ ಅಳಲು ತೋಡಿಕೊಂಡಿದ್ದಾಳೆ.
ಮೃತ ಯುವ ಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್ ನಿವಾಸಕ್ಕೆ ಭೇಟಿ ಮಾಡಿದ ಸಚಿವ ಮಹದೇವಪ್ಪ ಪುತ್ರ ಸುನೀಲ್ ಬೋಸ್ ಅವರ ಮುಂದೆ ಅಳಲು ತೋಡಿಕೊಂಡ ಮೃತ ವೇಣುಗೋಪಾಲ್ ಪತ್ನಿ, ಆರೋಪಿಗಳಿಗೆ ಗಲ್ಲು ಶಿಕ್ಷೆ ಆಗಬೇಕು. ಮೂರೇ ತಿಂಗಳಿಗೆ ಆರೋಪಿಗಳು ಹೊರಗೆ ಬಂದ್ರೆ ನಾನು ಮತ್ತು ಮಗಳು ಕತ್ತು ಕೊಯ್ದುಕೊಂಡು ಸಾಯುತ್ತೇವೆ. ನಾನು ಕುರುಬ ಸಮುದಾಯಕ್ಕೆ ಸೇರಿದವಳು. ನನ್ನ ಗಂಡ ನಾಯಕ ಸಮುದಾಯಕ್ಕೆ ಸೇರಿದವನು. ಇಬ್ಬರು ಪ್ರೀತಿಸಿ ಮದುವೆ ಆಗಿದ್ದೆವು. ಕಳೆದ 7 ವರ್ಷ ಜೀವನ ಸಾಗಿಸಿದ್ದೇನೆ. ಈಗ ನನಗೆ ಯಾರು ಗತಿ ಎಂದು ಅಳಲು ತೋಡಿಕೊಂಡಿದ್ದಾಳೆ.
undefined
ಯುವಬ್ರಿಗೇಡ್ ಕಾರ್ಯಕರ್ತನ ಹತ್ಯೆ; ಹಿಂದೂ ಪರ ಸಂಘಟನೆಗಳಿಂದ ಬಂದ್
ಗರಿಷ್ಠ ಪರಿಹಾರ ಕೊಡಿಸಲು ಯತ್ನ: ಮೃತನ ತಾಯಿ, ಪತ್ನಿಗೆ ಮೃತ ಯುವ ಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್ ನಿವಾಸಕ್ಕೆ ಭೇಟಿ ಮಾಡಿದ ಸಚಿವ ಮಹದೇವಪ್ಪ ಪುತ್ರ ಸುನೀಲ್ ಬೋಸ್ ಸಾಂತ್ವನ ಹೇಳಿದ್ದಾರೆ. ವಯಕ್ತಿಕವಾಗಿ ಧನ ಸಹಾಯ ಮಾಡಿದ ಸುನೀಲ್ ಬೋಸ್ ಮಾತನಾಡಿ, ಜಿಲ್ಲಾಧಿಕಾರಿಗಳು ನನಗೆ ಎಲ್ಲಾ ಹೇಳಿದ್ದಾರೆ. ನನ್ನ ತಂದೆಯವರುಗೆ ಹೇಳಿ ಗರಿಷ್ಠ ಪರಿಹಾರ ಸಿಗುವಂತೆ ಮಾಡುತ್ತೇನೆ ಎಂದು ವೇಣುಗೋಪಾಲ್ ಪತ್ನಿಗೆ ಸುನೀಲ್ ಬೋಸ್ ಭರವಸೆ ನೀಡಿದರು.
ಚಕ್ರವರ್ತಿ ಸೂಲಿಬೆಲೆಗೆ ತಲೆ ಸರಿಯಿಲ್ಲ: ಚಕ್ರವರ್ತಿ ಸೂಲಿಬೆಲೆಗೆ ತಲೆ ಸರಿ ಇಲ್ಲ. ಅವರಿಗೆ ಮೊದಲು ಉತ್ತಮ ಆಸ್ಪತ್ರೆಯಲ್ಲಿ ಚಿಕಿತ್ಸೆಯ ಅಗತ್ಯ ಇದೆ. ಸುಳ್ಳಿನಿಂದಲೆ ಜೀವನ ಕಟ್ಟಿಕೊಂಡಿರುವ ವ್ಯಕ್ತಿ ಅವರು. ಈ ಕೊಲೆ ಪ್ರಕರಣದಲ್ಲು ಸುಳ್ಳು ಸುಳ್ಳು ಹೇಳಿಕೆ ನೀಡುತ್ತಿದ್ದಾರೆ. ಕೊಲೆ ವಿಚಾರದಲ್ಲಿ ಸುಲಿಬೆಲೆಗೆ ಪ್ರಾಥಮಿಕ ಮಾಹಿತಿ ಇಲ್ಲ. ಸತ್ತಿರುವ ಯುವಕ ನಾಯಕ ಸಮುದಾಯದ ವ್ಯಕ್ತಿ ಆಗಿದ್ದಾನೆ. ಆದರೆ ಸುಲಿಬೆಲೆ ಅವರನ್ನು ದಲಿತ ಸಮುದಾಯ ಎಂದು ಸುಳ್ಳು ಹೇಳುತ್ತಾರೆ. ಸುಲಿಬೆಲೆಗೆ ಮೊದಲು ಚಿಕಿತ್ಸೆ ಕೊಡಿಸಿ ಎಂದು ಸಚಿವ ಮಹದೇವಪ್ಪ ಪುತ್ರ ಸುನೀಲ್ ಬೋಸ್ ಚಕ್ರವರ್ತಿ ಸೂಲಿಬೆಲೆಗೆ ತೀಕ್ಷ್ಣ ತಿರುಗೇಟು ನೀಡಿದ್ದಾರೆ.
ಟಿ.ನರಸೀಪುರದಲ್ಲಿ ಹತ್ಯೆಯಾದ ವಿವರ: ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದು ಯುವಾ ಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್ ನಾಯಕ್ ಎಂಬವರನ್ನು ಮೈಸೂರು ಜಿಲ್ಲೆಯ ಟಿ.ನರಸೀಪುರ ಪಟ್ಟಣದ ಹೊರವಲಯದಲ್ಲಿ ಕೊಲೆ ಮಾಡಲಾಗಿತ್ತು. ವೇಣುಗೋಪಾಲ್ ಟಿ.ನರಸೀಪುರದ ಶ್ರೀರಾಂಪುರ ಕಾಲೋನಿ ನಿವಾಸಿಯಾಗುದ್ದು, ನಿನ್ನೆ (ಜು. 09) ಹನುಮ ಜಯಂತಿ ವೇಳೆ ಗುಂಪುಗಳ ನಡುವೆ ವಾಗ್ವಾದ ನಡೆದಿತ್ತು. ಇದು ತಾರಕಕ್ಕೆ ಏರಿ ಗಲಾಟೆ ನಡೆದು ಕೊಲೆಯಲ್ಲಿ ಅಂತ್ಯವಾಗಿತ್ತು.
ಪುನೀತ್ ರಾಜ್ ಕುಮಾರ್ ಪೋಟೊ ತೆಗೆಸಿದ್ದೆ ಯುವ ಬ್ರಿಗೇಡ್ ಕಾರ್ಯಕರ್ತನ ಕೊಲೆಗೆ ಕಾರಣವಾಯಿತಾ?
ಚಕ್ರವರ್ತಿ ಸೂಲಿಬೆಲೆ ಹೇಳಿದ್ದೇನು?: ವೇಣುಗೋಪಾಲ್ ಹತ್ಯೆ ಬಗ್ಗೆ ಸಾಮಾಜಿಕ ಜಾಲತಾಣ ಟ್ವಿಟರ್‌ನಲ್ಲಿ ಟ್ವೀಟ್ ಮಾಡಿದ ಚಕ್ರವರ್ತಿ ಸೂಲಿಬೆಲೆ, 'ಸಿದ್ದರಾಮಯ್ಯ 2.0 ತನ್ನ ಕಬಂಧಬಾಹುಗಳನ್ನು ವಿಸ್ತರಿಸುತ್ತಿದೆ. ಹನುಮ ಜಯಂತಿಯ ಸಕ್ರಿಯ ಸಂಘಟಕರಾಗಿದ್ದ ಕಾರಣ ನಾವು ನಿನ್ನೆ ನಮ್ಮ ಸ್ವಯಂಸೇವಕರಲ್ಲಿ ಒಬ್ಬರನ್ನು ಕಳೆದುಕೊಂಡಿದ್ದೇವೆ. ಅವರನ್ನು ಕಾಂಗ್ರೆಸ್ ಬೆಂಬಲಿಗರು ಬರ್ಬರವಾಗಿ ಹತ್ಯೆ ಮಾಡಿದ್ದರು. ಕರ್ನಾಟಕ ಉರಿಯುತ್ತಿದೆ. ಶೀಘ್ರದಲ್ಲೇ ಮತ್ತೊಂದು ಪಶ್ಚಿಮ ಬಂಗಾಳ ಸಾಕ್ಷಿಯಾಗಲಿದೆ' ಎಂದು ಬರೆದುಕೊಂಡಿದ್ದಾರೆ.