ಐಐಎಸ್ಸಿ ವಿದ್ಯಾರ್ಥಿ ಆತ್ಮಹತ್ಯೆ: ಕೊರೋನಾ ಭೀತಿ ಕಾರಣ?

Published : Aug 19, 2020, 07:36 AM IST
ಐಐಎಸ್ಸಿ ವಿದ್ಯಾರ್ಥಿ ಆತ್ಮಹತ್ಯೆ: ಕೊರೋನಾ ಭೀತಿ ಕಾರಣ?

ಸಾರಾಂಶ

ಹಾಸ್ಟೆಲ್‌ನ ಕೊಠಡಿಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ| ಆತ್ಮಹತ್ಯೆಗೂ ಮುನ್ನ ತನ್ನ ತಂದೆಗೆ ಇ-ಮೇಲ್‌ ಕಳುಹಿಸಿದ್ದ ಸಂದೀಪ್‌| ನನಗೆ ಕೊರೋನಾ ಪಾಸಿಟಿವ್‌ ಇರುವಂತೆ ಕಾಣುತ್ತಿದೆ. ಇದರಿಂದ ಭಯವಾಗುತ್ತಿದೆ ಎಂದು ತಿಳಿಸಿದ್ದ ಮೃತ ಸಂದೀಪ್‌| 

ಬೆಂಗಳೂರು(ಆ.19): ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ (ಐಐಎಸ್ಸಿ) ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ನಡೆದಿದೆ. ಛತ್ತೀಸಗಢ ರಾಯ್‌ಪುರ ಮೂಲದ ಸಂದೀಪ್‌ಕುಮಾರ್‌ (24) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.

ಸಂದೀಪ್‌ಕುಮಾರ್‌ ಐಐಎಸ್ಸಿಯಲ್ಲಿ ಎಂ.ಟೆಕ್‌ ವಿದ್ಯಾರ್ಥಿಯಾಗಿದ್ದ. ಸೋಮವಾರ ತಡರಾತ್ರಿ ತಾನು ನೆಲೆಸಿದ್ದ ಹಾಸ್ಟೆಲ್‌ನ ಕೊಠಡಿಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬೆಳಗ್ಗೆ ಪ್ರಕರಣ ಬೆಳಕಿಗೆ ಬಂದಿದೆ ಎಂದು ಪೊಲೀಸರು ಹೇಳಿದ್ದಾರೆ.

ಆನ್ಲೈನ್ ಕ್ಲಾಸ್ : ಮೊಬೈಲ್‌ ಕೊಳ್ಳಲಾಗದ್ದಕ್ಕೆ ಬಾಲಕಿ ಆತ್ಮಹತ್ಯೆ

ಆತ್ಮಹತ್ಯೆಗೂ ಮುನ್ನ ಸಂದೀಪ್‌, ತನ್ನ ತಂದೆಗೆ ಇ-ಮೇಲ್‌ ಕಳುಹಿಸಿದ್ದು, ನನಗೆ ಕೊರೋನಾ ಪಾಸಿಟಿವ್‌ ಇರುವಂತೆ ಕಾಣುತ್ತಿದೆ. ಇದರಿಂದ ಭಯವಾಗುತ್ತಿದೆ ಎಂದಿದ್ದಾನೆ. ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ. ಈ ಸಂಬಂಧ ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿದ್ದು, ಪೋಷಕರಿಗೆ ಮಾಹಿತಿ ನೀಡಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

Shivamogga: 14 ವರ್ಷ ಜೈಲು ಶಿಕ್ಷೆ ಅನುಭವಿಸಿದ್ರು ಬದಲಾಗಲಿಲ್ಲ; ತಂದೆಯನ್ನು ಕೊಲೆಗೈದು ಬಾವಿಗೆ ಎಸೆದ ಮಗ!
ಆಷಾಢ ಮುಗಿದ್ರೂ ತವರಿನಿಂದ ಬರಲಿಲ್ಲ ಪತ್ನಿ; ಪ್ರಾಣ ಕಳೆದುಕೊಂಡ ನವವಿವಾಹಿತ ಅವಿನಾಶ್