ಕುಂದಾಪುರ ತಾಲೂಕು ವ್ಯಾಪ್ತಿಯಲ್ಲಿ ಅಕ್ರಮ ಗಣಿಗಾರಿಕೆ ಮತ್ತು ಸಾಗಾಟಕ್ಕೆ ಸಂಬಂಧಿಸಿದಂತೆ ಎರಡು ಕಡೆಗಳಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಭೂ ವಿಜ್ಞಾನಿ ಕು.ಸಂಧ್ಯಾ ಅವರು ದಾಳಿ ನಡೆಸಿ 4 ಲಾರಿ ಸಹಿತ, 8 ಮೆಟ್ರಿಕ್ ಟನ್ ಮರಳು, 14 ಮೆಟ್ರಿಕ್ ಟನ್ ಕೆಂಪುಕಲ್ಲು ವಶಕ್ಕೆ ಪಡೆದಿದ್ದಾರೆ.
ಉಡುಪಿ (ಸೆ.5): ಉಡುಪಿ ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆ, ಕೆಂಪು ಕಲ್ಲು ಗಣಿಗಾರಿಕೆ, ಶಿಲೆಕಲ್ಲು ಗಣಿಗಾರಿಕೆ ಎಗ್ಗಿಲ್ಲದೆ ನಡೆಯುತ್ತೆ ಅನ್ನೋ ಆರೋಪ ಪದೇ ಪದೇ ಕೇಳಿ ಬರುತ್ತಿದೆ. ಇದೀಗ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು ಅಲರ್ಟ್ ಆಗಿದ್ದಾರೆ. ಕುಂದಾಪುರ ತಾಲೂಕು ವ್ಯಾಪ್ತಿಯಲ್ಲಿ ಅಕ್ರಮ ಗಣಿಗಾರಿಕೆ ಮತ್ತು ಸಾಗಾಟಕ್ಕೆ ಸಂಬಂಧಿಸಿದಂತೆ ಎರಡು ಕಡೆಗಳಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಭೂ ವಿಜ್ಞಾನಿ ಕು.ಸಂಧ್ಯಾ ಅವರು ದಾಳಿ ನಡೆಸಿ 4 ಲಾರಿ ಸಹಿತ, 8 ಮೆಟ್ರಿಕ್ ಟನ್ ಮರಳು, 14 ಮೆಟ್ರಿಕ್ ಟನ್ ಕೆಂಪುಕಲ್ಲು ವಶಕ್ಕೆ ಪಡೆದಿದ್ದಾರೆ. ಉಡುಪಿ ಗಣಿ ಮತ್ತು ಭೂ ವಿಜ್ಞಾಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಸಂದೀಪ್ ಜಿ. ಯು ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆದಿದೆ. ಮುಂಜಾನೆ ಕುಂದಾಪುರ ತಾಲೂಕು ಹಕ್ಲಾಡಿ ಗ್ರಾಮದ ಬಟ್ಟೆಕುದ್ರು ಪರಿಸರದಲ್ಲಿ ಅಕ್ರಮ ಪತ್ತೆಯಾಗಿದೆ. ಚಕ್ರಾ ನದಿಯಲ್ಲಿ ಅನಧಿಕೃತವಾಗಿ ಮರಳುಗಾರಿಕೆ ನಡೆಸಲಾಗುತ್ತಿತ್ತು. ಈ ಬಗ್ಗೆ ಸಾರ್ವಜನಿಕರ ಮಾಹಿತಿ ಮೇರೆಗೆ ಇಲಾಖೆಯ ಭೂ ವಿಜ್ಞಾನಿ ಸಂಧ್ಯಾ ಅವರು ಮುಂಜಾನೆ 5.30ಕ್ಕೆೆ ದಾಳಿ ನಡೆಸಿದ್ದಾರೆ.
ಈ ವೇಳೆ 8 ಮೆಟ್ರಿಕ್ ಟನ್ ಮರಳು ಸಹಿತ ಒಂದು ಲಾರಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.ಇನ್ನೂಂದು ಪ್ರಕರಣದಲ್ಲಿ ಕುಂದಾಪುರ ತಾಲೂಕು ಆಲೂರು ಗ್ರಾಾಮದಲ್ಲಿನ ಅನಧಿಕೃತ ಕೆಂಪುಕಲ್ಲು ಕ್ವಾರಿಗಳಿಂದ ಕೆಂಪು ಕಲ್ಲು ಸಾಗಣೆ ಮಾಡುತ್ತಿದ್ದರು. ಮೂರು ಲಾರಿ ಮತ್ತು 14 ಮೆಟ್ರಿಕ್ ಟನ್ ಕೆಂಪುಕಲ್ಲುಗಳನ್ನು ಹೊಸಾಡು ಗ್ರಾಮದ ಬಂಟ್ವಾಡಿ ಪರಿಸರದಲ್ಲಿ ದಾಳಿ ನಡೆಸಿ ವಶಕ್ಕೆ ತೆಗೆದುಕೊಂಡಿದ್ದಾರೆ.
undefined
ಭೂವಿಜ್ಞಾನಿಯವರು ಪ್ರಕರಣ ದಾಖಲಿಸಿಕೊಂಡಿದ್ದು ಖನಿಜ ಸಹಿತ ವಶಪಡಿಸಿಕೊಂಡಿರುವ ನಾಲ್ಕು ವಾಹನಗಳನ್ನು ಗಂಗೊಳ್ಳಿ ಪೊಲೀಸ್ ಠಾಣೆ ಸುಪರ್ದಿಯಲ್ಲಿ ಇರಿಸಲಾಗಿದೆ.
ಗಣಿಗಾರಿಕೆಗೆ ಅನುಮತಿ ವಿರೋಧಿಸಿ ಧರಣಿ:
ಚಿಕ್ಕಬಳ್ಳಾಪುರ: ಗ್ರಾಮಸ್ಥರ ವಿರೋಧದ ನಡುವೆಯು ಕಲ್ಲು ಗಣಿಗಾರಿಕೆಗೆ ಅವಕಾಶ ನೀಡಿರುವ ಜಿಲ್ಲಾಡಳಿತದ ಕ್ರಮವನ್ನು ಖಂಡಿಸಿ ಸೋಮವಾರ ಜಿಲ್ಲೆಯ ಬಾಗೇಪಲ್ಲಿ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ನೇತೃತ್ವದಲ್ಲಿ ಗಣಿಗಾರಿಕೆ ಬಾಧಿತ ಗ್ರಾಮಸ್ಥರು ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ ಘಟನೆ ನಡೆಯಿತು.
ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಡಿ.ಸಜ್ಜುಪಲ್ಲಿ ಸ.ನಂ.116 ಹಾಗೂ 77 ನಂಬರ್ ನಲ್ಲಿ ಬರೋಬ್ಬರಿ 20 ಎಕÃಯಲ್ಲಿ ಗಣಿಗಾರಿಕೆಗೆ ನಡೆಸಲು ಜ್ಯೂವೆಲ್ ರಾಕ್ ಗ್ರ್ಯಾನೈಟ್ ಕಂಪನಿಗೆ ಜಿಲ್ಲೆಯ ಗಣಿ ಇಲಾಖೆ ಅನುಮತಿ ನೀಡಿರುವುದನ್ನು ಖಂಡಿಸಿ ದಿಡೀರ್‌ನೆ ಶಾಸಕ ಸುಬ್ಬಾರೆಡ್ಡಿ ನೇತೃತ್ವದಲ್ಲಿ ಡಿ.ಸಜ್ಜುಪಲ್ಲಿ ಗ್ರಾಮಸ್ಥರು ಡೀಸಿ ಕಚೇರಿಗೆ ಮುತ್ತಿಗೆ ಹಾಕಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಜಾರ್ಖಂಡ್ ಅಕ್ರಮ ಗಣಿಗಾರಿಕೆ ಪ್ರಕರಣ: ಸಿಎಂ ಸಹಾಯಕನ ನಿವಾಸದಲ್ಲಿ 2 ಎಕೆ-47, 60 ಬುಲೆಟ್ ವಶಕ್ಕೆ..!
ಈ ವೇಳೆ ಮಾತನಾಡಿದ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ, ಈ ಭಾಗದಲ್ಲಿ ವಾಸ ಮಾಡುತ್ತಿರುವವರು ಕಡುಬಡವರಾಗಿದ್ದು ಕೃಷಿ ಹಾಗೂ ಹೈನೋದ್ಯಮವನ್ನೆ ಅವಲಂಬಿಸಿದ್ದಾರೆ. ಈ ಭಾಗದಲ್ಲಿ ಗಣಿಗಾರಿಕೆಗೆ ಅವಕಾಶ ನೀಡುವುದರಿಂದ ಕೃಷಿ ಮೇಲೆ ಸಾಕಷ್ಟುದುಷ್ಪರಿಣಾಮ ಬೀರಲಿದೆಂದು ಗ್ರಾಮಸ್ಥರು ತಮಗೆ ಮನವಿ ಸಲ್ಲಿಸಿದ್ದಾರೆ. ಅಲ್ಲದೇ ಗಣಿಗಾರಿಕೆ ನಡೆಸುವುದರಿಂದ ಗ್ರಾಮದಲ್ಲಿನ ವಾಸದ ಮನೆಯ ಕಟ್ಟಡಗಳು ಕೂಡ ಬಿರುಕು ಬಿಡುವ ಬಗ್ಗೆ ಆತಂಕ ಇರುವ ಕಾರಣದಿಂದ ಡಿ.ಸಜ್ಜುಪಲ್ಲಿ ಗ್ರಾಮದಲ್ಲಿ ಯಾವುದೇ ಕಾರಣಕ್ಕೂ ಗಣಿಗಾರಿಕೆ ನಡೆಸಲು ಯಾರಿಗೂ ಕೂಡ ಅನುಮತಿ ನೀಡಬಾರದೆಂದು ಜಿಲ್ಲಾಧಿಕಾರಿಗಳನ್ನು ಆಗ್ರಹಿಸಿದರು.
ಬಳ್ಳಾರಿಯಲ್ಲಿ ಮತ್ತೆ ಗಣಿಗಾರಿಕೆಗೆ ಅವಕಾಶ ನೀಡಿದ ಸುಪ್ರೀಂ ಕೋರ್ಟ್; ಹಿರೇಮಠ್‌ಗೆ ಹಿನ್ನಡೆ
ಯಾವುದೇ ಕಾರಣಕ್ಕೂ ಡಿ.ಸಜ್ಜುಪಲ್ಲಿ ಗ್ರಾಮದ ಸುತ್ತಮುತ್ತ ಗಣಿಗಾರಿಕೆಗೆ ಅವಕಾಶ ನೀಡಬಾರದೆಂದ ಆಗ್ರಹಿಸಿ ಘೋಷಣೆಗಳನ್ನು ಕೂಗಿದ ಪ್ರತಿಭಟನಕಾರರು. ಗ್ರಾಮಸ್ಥರ ಅರಿವಿಗೆ ಬರದೇ ಗ್ರಾಮದ ಬಳಿ ಕದ್ದುಮುಚ್ಚಿ ಅಧಿಕಾರಿಗಳು ಬೇರೆ ಊರುಗಳಿಂದ ಸಾರ್ವಜನಿಕರನ್ನು ಕರೆಸಿ ಸಭೆ ನಡೆಸಿ ಗಣಿಗಾರಿಕೆಗೆ ನಡೆಸಲು ಅನುಮತಿ ನೀಡಿದ್ದಾರೆಂದು ಪ್ರತಿಭಟನಕಾರರು ದೂರಿದರು. ಅನುಮತಿ ರದ್ದುಗೊಳಿಸದೇ ಹೋದರೆ ಉಗ್ರ ಹೋರಾಟ ನಡೆಸುವುದಾಗಿ ಜಿಲ್ಲಾಡಳಿತಕ್ಕೆ ಎಚ್ಚರಿಕೆ ನೀಡಿದರು. ಮನವಿ ಸ್ಪೀಕರಿಸಿದ ಜಿಲ್ಲಾಧಿಕಾರಿ ನಾಗರಾಜ್, ಈ ಬಗ್ಗೆ ಪರಿಶೀಲಿಸುವ ಭರವಸೆ ನೀಡಿದರು.