
ಬಸವಕಲ್ಯಾಣ (ಜು.15) : ಪೊಲೀಸರ ತಂಡ ದಾಳಿ ನಡೆಸಿ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಕಂಟೇನರ್ ಲಾರಿಯಲ್ಲಿ ಸಾಗಿಸುತ್ತಿದ್ದ 15.55ಲಕ್ಷ ರು. ಮೌಲ್ಯದ ಗುಟ್ಕಾ ಜಪ್ತಿ ಮಾಡಿ ಇಬ್ಬರನ್ನು ಬಂಧಿಸಿದೆ.
ಖಚಿತ ಮಾಹಿತಿ ಮೇರೆಗೆ ಇಲ್ಲಿಯ ಬಸವಕಲ್ಯಾಣ ಗ್ರಾಮೀಣ ಠಾಣೆ ಪಿಎಸ್‌ಐ ಅಂಬ್ರೀಷ ವಾಗಮೋಡೆ ಅವರ ನೇತೃತ್ವದ ಪೊಲೀಸ್ ತಂಡ ತಾಲೂಕಿನ ಉಮಾಪೂರ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 65ರ ಮೇಲೆ ದಾಳಿ ನಡೆಸಿ ಬೆಂಗಳೂರು ಮೂಲದ ಶಾರುಖ್ ಹಾಗೂ ಹುಮನಾಬಾದ್ ತಾಲೂಕಿನ ಮರಕುಂದಾ ಗ್ರಾಮದ ನಿವಾಸಿ ಅಬ್ದುಲ್ ಫಯಾಜ್ ಅವರನ್ನು ಶುಕ್ರವಾರ ಬಂಧಿಸಿದೆ.
ಕಂಟೇನರ್ ಲಾರಿಯನ್ನೂ ವಶಕ್ಕೆ ಪಡೆಯಲಾಗಿದೆ. ಈ ಕುರಿತು ಇಲ್ಲಿಯ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
'ಕೆಎಎಸ್ ನೇಮಕ ನೀತಿ ಪಿಎಸ್‌ಐಗೂ ಬರಲಿ' ಹೈಕೋರ್ಟ್‌ನಲ್ಲಿ ಪ್ರಬಲ ವಾದ
ಅಕ್ರಮ ಹಣ ವರ್ಗಾವಣೆ: 4 ಕೋಟಿ ರೂ. ನಗದು ಜಪ್ತಿ
ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪ ಸಂಬಂಧ ಪಿಜನ್ ಎಜುಕೇಶನ್ ಟೆಕ್ನಾಲಜಿ ಇಂಡಿಯಾ ಪ್ರೈ. ಲಿ.ಗೆ ಸೇರಿದ 4 ಕೋಟಿ ರು.ನಗದನ್ನು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ಒಡಾ ಕ್ಲಾಸ್ ಆ್ಯಪ್ ಮೂಲಕ ಆನ್‌ಲೈನ್ ಶಿಕ್ಷಣ ಒದಗಿಸುತ್ತಿದ್ದ ಪಿಜನ್ ಎಜುಕೇಶನ್ ಟೆಕ್ನಾಲಜಿ ಇಂಡಿಯಾ ಪ್ರೈ. ಲಿ. ಚೀನಾ ಮೂಲದ ಲಿಯು ಕ್ಯಾನ್ ಮತ್ತು ಭಾರತದ ವೇದಾಂತ್ ಹಮಿರ್ವಾಸಿಯನ್ನು ತನ್ನ ನಿರ್ದೇಶಕರನ್ನಾಗಿ ಹೊಂದಿ, ಬೆಂಗಳೂರಿನಿಂದ ಕಾರ್ಯ ನಿರ್ವಹಿಸುತ್ತಿತ್ತು. ಜಾಹೀರಾತು ವೆಚ್ಚದ ಹೆಸರಲ್ಲಿ ಕಂಪನಿಯ ಖಾತೆಯಿಂದ 82.72 ಕೋಟಿ ರು. ಚೀನಾ ಮತ್ತು ಹಾಂಕಾಂಗ್ ಮೂಲದ ಖಾತೆಗಳಿಗೆ ವರ್ಗಾವಣೆಯಾಗಿರುವುದು ಇಡಿ ತನಿಖೆ ವೇಳೆ ಗೊತ್ತಾಗಿದೆ.
ವಂಶಿಕಾ ಹೆಸರಲ್ಲಿ ವಂಚಿಸಿದವಳು ಅರೆಸ್ಟ್, 14 ದಿನಗಳು ನ್ಯಾಯಾಂಗ ಬಂಧನ
ಕಳೆದ ಏಪ್ರಿಲ್ ತಿಂಗಳಲ್ಲಿ ಸಂಸ್ಥೆಯ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ ಶೋಧ ಕಾರ್ಯ ನಡೆಸಿದ್ದರು. ಈ ವೇಳೆ ಸಂಸ್ಥೆಯ ಎಲ್ಲಾ ವ್ಯವಹಾರಗಳು, ಹಣಕಾಸು ತೀರ್ಮಾನಗಳು ಸೇರಿ ಎಲ್ಲ ನಿರ್ಧಾರಗಳನ್ನು ಚೀನಾದ ವ್ಯಕ್ತಿಗಳು ತೆಗೆದುಕೊಳ್ಳುತ್ತಿದ್ದಾರೆ. ಜಾಹೀರಾತು ಮತ್ತು ಮಾರುಕಟ್ಟೆವೆಚ್ಚದ ಹೆಸರಲ್ಲಿ 82.72 ಕೋಟಿ ರು. ನಷ್ಟುಎರಡು ರಾಷ್ಟ್ರಗಳಿಗೆ ವರ್ಗಾವಣೆಯಾಗಿರುವುದು ಸಾಬೀತಾಗಿದೆ ಎಂದು ಇಡಿ ಹೇಳಿದೆ. ಮೇ ತಿಂಗಳಲ್ಲಿಯೂ ಇಡಿ ಅಧಿಕಾರಿಗಳು 8.26 ಕೋಟಿ ರು. ಅನ್ನು ಜಪ್ತಿ ಮಾಡಿದ್ದಾರೆ ಎಂದು ತಿಳಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ