
ಹೈದರಾಬಾದ್ (ಜೂನ್.21): ಒಂದೇ ರಾತ್ರಿಯಲ್ಲಿ ಹೈದರಾಬಾದ್‌ನಲ್ಲಿ ನಾಲ್ಕು ಕೊಲೆಯಾಗಿದೆ. ಇದರಲ್ಲಿ ಇಬ್ಬರು ನಿರಾಶ್ರಿತರಾಗಿದ್ದರೆ, ಇಬ್ಬರು ತೃತೀಯಲಿಂಗಿಗಳಾಗಿದ್ದಾರೆ. ಅಪರಿಚಿತ ವ್ಯಕ್ತಿಗಳಿಂದ ವಿವಿಧ ಪ್ರದೇಶಗಳಲ್ಲಿ ಇವರ ಹತ್ಯೆಯಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಟಪ್ಪಚಬುತ್ರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬುಧವಾರ ಬೆಳಗಿನ ಜಾವ 1 ಗಂಟೆ ಸುಮಾರಿಗೆ ತೃತೀಯಲಿಂಗಿಗಳ ಮೇಲೆ ದಾಳಿ ನಡೆಸಲಾಗಿದೆ. ಕಲ್ಲುಗಳಿಂದ ಹೊಡೆದಿದ್ದಲ್ಲದೆ, ಬಳಿಕ ಚೂರಿ ಇರಿದ ಪರಿಣಾಮದಿಂದ ಅವರು ಸ್ಥಳದಲ್ಲಿಯೇ ಸಾವು ಕಂಡಿದ್ದಾರೆ. ಮೃತರಿಬ್ಬರೂ 25ರಿಂದ 30 ವರ್ಷದೊಳಗಿನ ತೃತೀಯಲಿಂಗಿಗಳಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪ್ರಾಥಮಿಕ ತನಿಖೆಯ ಆಧಾರದ ಮೇಲೆ, ತೃತೀಯಲಿಂಗಿ ವ್ಯಕ್ತಿಗಳನ್ನು ಕೊಲೆ ಮಾಡಿದವರು, ಅವರೊಂದಿಗೆ ಸೆಕ್ಸ್‌ನಲ್ಲಿ ಭಾಗಿಯಾಗಿದ್ದವರು ಆಗಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರು ಶಂಕಿತರನ್ನು ಗುರುತಿಸುವ ಪ್ರಕ್ರಿಯೆಯಲ್ಲಿದ್ದಾರೆ, ಕೊಲೆಯಾದವರಿಗೆ ಇರಿದ ಚಾಕು ಕೂಡ ಪತ್ತೆಯಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಮೃತ ತೃತೀಯಲಿಂಗಿಗಳನ್ನು ಯೂಸುಫ್ ಅಲಿಯಾಸ್ ಡಾಲಿ ಮತ್ತು ರಿಯಾಜ್ ಅಲಿಯಾಸ್ ಸೋಫಿಯಾ ಎಂದು ಗುರುತಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಜೋಡಿ ಕೊಲೆ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
63 ವರ್ಷದ ಸ್ವಾಮೀಜಿಯಿಂದ 15 ವರ್ಷದ ಬಾಲಕಿಯ ಅತ್ಯಾಚಾರ, ಚೈನ್‌ನಿಂದ ಕಟ್ಟಿ ರೂಮ್‌ನಲ್ಲಿ ಇರಿಸಿದ್ದ!
ಬುಧವಾರ ಬೆಳಗ್ಗೆ ಮೈಲಾರ್‌ದೇವಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಸ್ಥಳಗಳಲ್ಲಿ ರಸ್ತೆ ಬದಿಯಲ್ಲಿ ಮಲಗಿದ್ದ ಇಬ್ಬರು ನಿರಾಶ್ರಿತ ವ್ಯಕ್ತಿಗಳನ್ನು ಕಲ್ಲಿನಿಂದ ಹೊಡೆದು ಸಾಯಿಸಲಾಗಿದೆ ಎಂದು ಇನ್ನೊಬ್ಬ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಇಬ್ಬರು ಮೃತ ವ್ಯಕ್ತಿಗಳ ಗುರುತು ಪತ್ತೆ ಮಾಡಲಾಗುತ್ತಿದೆ, ಅವರ ಹತ್ಯೆಯ ಹಿಂದಿನ ಕಾರಣಗಳನ್ನು ಅವರು ಪರಿಶೀಲಿಸುತ್ತಿದ್ದಾರೆ ಮತ್ತು ಇಬ್ಬರು ತೃತೀಯ ಲಿಂಗಿ ವ್ಯಕ್ತಿಗಳ ಹತ್ಯೆಯೊಂದಿಗೆ ಯಾವುದೇ ಸಂಬಂಧವಿದೆಯೇ ಎಂದು ಪರಿಶೀಲಿಸುತ್ತಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ.
ತೃತೀಯಲಿಂಗಿಗಳ ಬರ್ಬರ ಹತ್ಯೆ: ಡಬ್ಬಲ್ ಮರ್ಡರ್‌ಗೆ ಕಾರಣ ಹೀಗಿದೆ..
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ