ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವಿವಾಹಿತ ಮಹಿಳೆಯೊಬ್ಬರೊಂದಿಗೆ ಸಹ ಪ್ರಯಾಣಿಕನೊಬ್ಬ ಅಶ್ಲೀಲವಾಗಿ ವರ್ತಿಸಿದ ಘಟನೆಗೆ ಸಂಬಂಧಿಸಿ ಪುತ್ತೂರಿನ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಕೆಮ್ಮಿಂಜೆ ಗ್ರಾಮದ ಸುಬ್ರಹ್ಮಣ್ಯ ಭಟ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಪುತ್ತೂರು (ಜೂ.24) : ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವಿವಾಹಿತ ಮಹಿಳೆಯೊಬ್ಬರೊಂದಿಗೆ ಸಹ ಪ್ರಯಾಣಿಕನೊಬ್ಬ ಅಶ್ಲೀಲವಾಗಿ ವರ್ತಿಸಿದ ಘಟನೆಗೆ ಸಂಬಂಧಿಸಿ ಪುತ್ತೂರಿನ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಕೆಮ್ಮಿಂಜೆ ಗ್ರಾಮದ ಸುಬ್ರಹ್ಮಣ್ಯ ಭಟ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ಕನ್ಯಾನ ಕುಕ್ಕಾಜೆ ನಿವಾಸಿ ಮಹಮ್ಮದ್ ಅಶ್ರಫ್ ಅವರ ಪತ್ನಿ ಶಹನಾಜ್ (20) ದೂರು ನೀಡಿರುವ ಮಹಿಳೆ. ಉಪ್ಪಳದಿಂದ ಪುತ್ತೂರು ಕಡೆಗೆ ಬರುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಪುತ್ತೂರು ನಗರದ ಹೊರವಲಯದ ಕಬಕ ಗ್ರಾಮದ ಮುರ ಎಂಬಲ್ಲಿ ಈ ಅಶ್ಲೀಲ ವರ್ತನೆಯ ಕಿರುಕುಳ ಪ್ರಕರಣ ನಡೆದಿದೆ.
ಮಹಿಳೆ ಮುಂದೆ ಅಸಭ್ಯ ವರ್ತನೆ ತೋರಿದ ಮಾನಸಿಕ ರೋಗಿ ಹಿಡಿದು ಖಾಸಗಿ ಅಂಗಕ್ಕೆ ಬೆಂಕಿ ಹಚ್ಚಿದ ಜನ!
ತಾನು ಗುರುವಾರ ತನ್ನ ತಾಯಿಯೊಂದಿಗೆ ಉಪ್ಪಳದಿಂದ ಪುತ್ತೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಪುತ್ತೂರಿಗೆ ಪ್ರಯಾಣಿಸುತ್ತಿದ್ದ ವೇಳೆ ಹಿಂದಿನ ಸೀಟಿನಲ್ಲಿ ಕುಳಿತಿದ್ದ ಅಪರಿಚಿತ ವ್ಯಕ್ತಿಯೊಬ್ಬ ಸೀಟಿನ ಮಧ್ಯದಲ್ಲಿ ಕೈಹಾಕಿ ಹಿಂಬದಿ ಸೊಂಟದ ಕೆಳ ಭಾಗವನ್ನು ಹಿಡಿದು ಅಶ್ಲೀಲವಾಗಿ ವರ್ತಿಸಿದ್ದಾನೆ. ಯಾಕೆ ಈ ರೀತಿಯಾಗಿ ವರ್ತಿಸುತ್ತೀರಿ ಎಂದು ಪ್ರಶ್ನಿಸುತ್ತಿದ್ದಂತೆಯೇ ಆತ ಬೊಳುವಾರಿನಲ್ಲಿ ಬಸ್ಸಿನಿಂದ ಇಳಿದು ಹೋಗಿದ್ದಾನೆ ಎಂದು ಶಹನಾಜ್ ಅವರು ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ.
ಮಾನ, ಮರ್ಯಾದೆ ಮರೆತ ಬಿಜೆಪಿ ನಾಯಕ: ವೇದಿಕೆಯಲ್ಲಿ ಮಹಿಳೆ ಜೊತೆ ಅಶ್ಲೀಲ ವರ್ತನೆ!
ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸಹಾಯಕ ಅರ್ಚಕನಾಗಿ ಕೆಲಸ ಮಾಡುತ್ತಿರುವ ಆರೋಪಿ ಸುಬ್ರಹ್ಮಣ್ಯ ಭಟ್ ಎಂಬಾತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಆರೋಪಿಯನ್ನು ಜಾಮೀನಿನ ಮೇಲೆ ಬಿಡುಗಡೆಗೊಳಿಸಿದೆ.