
ವಿಜಯಪುರ(ಡಿ.02): ಅಲಂಕಾರಿಕ ವಸ್ತುಗಳ ಖರೀದಿಗಾಗಿ ತಮ್ಮ ಸ್ನೇಹಿತೆ ಜೊತೆ ನಗರದ ಸೊಲ್ಲಾಪುರ ರಸ್ತೆಯಲ್ಲಿರುವ ಉಮದಿ ಸೂಪರ್ ಮಾರುಕಟ್ಟೆಗೆ ಬುಧವಾರ ಸಂಜೆ ಆಗಮಿಸಿದ್ದ ಅಂತಾರಾಷ್ಟ್ರೀಯ ಕ್ರಿಕೆಟ್ ಆಟಗಾರ್ತಿ ರಾಜೇಶ್ವರಿ ಗಾಯಕವಾಡ ಅವರು, ಅಂಗಡಿ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಅಲಂಕಾರಿಕ ವಸ್ತುಗಳ ಪರಿಶೀಲನೆ ವೇಳೆ ಸೂಪರ್ ಮಾರುಕಟ್ಟೆಯ ಸಿಬ್ಬಂದಿ ಹಾಗೂ ರಾಜೇಶ್ವರಿ ಗಾಯಕವಾಡ ನಡುವೆ ವಾಗ್ವಾದ ನಡೆಯಿತು. ಈ ವೇಳೆ, ರಾಜೇಶ್ವರಿ ಗಾಯಕವಾಡ ಅವರು 8ರಿಂದ 10 ಮಂದಿ ಗೂಂಡಾಗಳನ್ನು ಕರೆಸಿ ಸೂಪರ್ ಮಾರುಕಟ್ಟೆಯ ಮಾಲಿಕ ಮಲ್ಲಿಕಾರ್ಜುನ ಉಮದಿ ಹಾಗೂ ಅವರ ಪುತ್ರ ಪ್ರಶಾಂತ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಗಲಾಟೆ ನಡೆದಿರುವ ದೃಶ್ಯ ಸೂಪರ್ ಮಾರುಕಟ್ಟೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆದರ್ಶನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಯಾವುದೇ ಪ್ರಕರಣ ದಾಖಲಾಗಿಲ್ಲ.
VIJAYAPURA ಬೆತ್ತಲೆ ವಿಡಿಯೋ ಮಾಡಿ ಹಾಸನ 'ಪ್ರಿಯತಮೆ'ಯಿಂದ ದೋಖಾ: ₹ 40 ಲಕ್ಷ ಕಳೆದುಕೊಂಡ 'ಹೀರೋ'
ಆದರೆ, ಹಲ್ಲೆ ಆರೋಪವನ್ನು ಗಾಯಕವಾಡ ನಿರಾಕರಿಸಿದ್ದಾರೆ. ಉಮದಿ ಸೂಪರ್ ಮಾರುಕಟ್ಟೆಗೆ ವಸ್ತುಗಳ ಖರೀದಿಗೆ ಹೋಗಿದ್ದು ನಿಜ. ಆದರೆ, ಅಲ್ಲಿ ಸೂಪರ್ ಮಾರುಕಟ್ಟೆಯ ಮಾಲೀಕರ ಜೊತೆಗಾಗಲಿ, ಸಿಬ್ಬಂದಿ ಜೊತೆಗಾಗಲಿ ಯಾವುದೇ ರೀತಿ ಗಲಾಟೆ ನಡೆದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ