ಯುವ ಪ್ರೇಮಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ.
ಕೊಪ್ಪಳ, (ಜುಲೈ.04): ಜಿಲ್ಲೆಯ ಕುಷ್ಟಗಿ ತಾಲೂಕಿನ ತಾವರಗೇರಾ ವ್ಯಾಪ್ತಿಯ ಮಾದಾಪೂರ ಗ್ರಾಮದಲ್ಲಿ ಅಂತರಜಾತಿ ವಿವಾಹಕ್ಕೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡು ಸಾವಿಗೆ ಶರಣಾಗಿದ್ದಾರೆ.
ಆತ್ಮಹತ್ಯೆ ಗೆ ಶರಣಾದವರನ್ನು ಹುಲಿಗೆಮ್ಮ(18) ಹಾಗೂ ವಿರುಪಾಕ್ಷಗೌಡ (20) ಎಂದು ಗುರುತಿಸಲಾಗಿದೆ.
ಗಂಗಾವತಿ: ಅಪ್ರಾಪ್ತೆ ಮೇಲೆ ಕಾಮುಕರಿಂದ ಅತ್ಯಾಚಾರ
ಇವರಿಬ್ಬರು ಕಳೆದ ಎರಡು ವರ್ಷದಿಂದ ಪ್ರೀತಿಸುತ್ತಿದ್ದರು.ಮನೆಯಲ್ಲಿ ಮದುವೆ ವಿಚಾರವನ್ನು ತಿಳಿಸಿದ್ದಾರೆ. ಆದ್ರೆ, ಇಬ್ಬರು ಅನ್ಯ ಜಾತಿಗೆ ಸೇರಿದವರಾಗಿದ್ದರಿಂದ.ಮನೆಯವರು ಮದುವೆಗೆ ವಿರೋಧ ವ್ಯಕ್ತಪಡಿಸಿದ್ದಾರೆ.
ಇದರಿಂದ ಮನೊಂದ ಪ್ರೇಮಿಗಳು ಜೆ. ರಾಂಪೂರ ಗ್ರಾಮದ ಜಮೀನೊಂದರ ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಸದ್ಯ ಘಟನಾ ಸ್ಥಳಕ್ಕೆ ತಾವರಗೇರಾ ಪಿಎಸ್‍ಐ ಗೀತಾಂಜಲಿ ಶಿಂಧೆ ಹಾಗೂ ಸಿಪಿಐ ಚಂದ್ರಶೇಖರ ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.