
ಬೆಂಗಳೂರು(ಡಿ.12): ಮನೆ ಕೆಲಸಕ್ಕೆ ಬಂದು ಮನೆಗುಡಿಸಿ ಗುಂಡಾಂತರ ಮಾಡುತ್ತಿದ್ದ ಖತರ್ನಾಕ್ ಕಳ್ಳರನ್ನು ಬಂಧಿಸುವಲ್ಲಿ ನಗರದ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳನ್ನು ಅನಂತ್ ಕುಮಾರ್, ರಮೇಶ್ ಚಂದ್ರ ಶಾಹೋ, ಬಿಶ್ವಜಿತ್ ಮಲ್ಲಿಕ್ ಹಾಗೂ ದುಲಾಲ್ ಸಿಂಗ್ ಎಂದು ಗುರುತಿಸಲಾಗಿದೆ.
ಈ ಖದೀಮರು ನಗರದಲ್ಲಿ ಮನೆ ಕೆಲಸಕ್ಕೆಂದು ಬಂದು ಮಾಲೀಕರ ಮನೆ ಹಾಗೂ ಮತ್ತಿತರ ಮನೆಗಳಿಗೆ ಕನ್ನ ಹಾಕಿ ಚಿನ್ನಾಭರಣ ಹಾಗೂ ನಗದನ್ನು ದೋಚುತ್ತಿದ್ದರು ಎಂದು ತಿಳಿದು ಬಂದಿದೆ.
ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ಬಂಧಿತ ಆರೋಪಿಗಳಿಂದ 64 ಲಕ್ಷ ಮೌಲ್ಯದ 1 ಕೆಜಿ 600 ಗ್ರಾಂ ಚಿನ್ನಾಭರಣವನ್ನು ವಶಕ್ಕೆ ಪಡೆಯಲಾಗಿದೆ. ಈ ಖದೀಮರು ಬೆಂಗಳೂರಿನಲ್ಲಿ ಚಿನ್ನಾಭರಣ ಕದ್ದು ಒಡಿಶಾ ಹಾಗೂ ಪಶ್ಚಿಮ ಬಂಗಾಳದಲ್ಲಿ ಅಡಗಿಸಿಟ್ಟಿದ್ದರು ಎಂದು ತಿಳಿದು ಬಂದಿದೆ. ಇಲ್ಲಿ ಅಡಗಿಸಿಟ್ಟ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳ ಬಂಧನದಿಂದ ನಗರದಲ್ಲಿ ನಡೆದಿದ್ದ 15 ಪ್ರಕರಣಗಳು ಬೆಳಕಿಗೆ ಬಂದಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ