ಅಂತಾರಾಷ್ಟ್ರೀಯ ಮಹಿಳಾ ಕಬಡ್ಡಿ ಕ್ರೀಡಾಪಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಅರಿಶಿನಕುಂಟೆ ಆದರ್ಶನಗರದ ನಿವಾಸದಲ್ಲಿ ಧನಲಕ್ಷ್ಮೀ (25) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಬೆಂಗಳೂರು (ಅ.26): ಅಂತಾರಾಷ್ಟ್ರೀಯ ಮಹಿಳಾ ಕಬಡ್ಡಿ ಕ್ರೀಡಾಪಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಅರಿಶಿನಕುಂಟೆ ಆದರ್ಶನಗರದ ನಿವಾಸದಲ್ಲಿ ಧನಲಕ್ಷ್ಮೀ (25) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಸ್ನೇಹಿತರೊಂದಿಗೆ ಮೈಸೂರು ದಸರಾ ನೋಡಿಕೊಂಡು ಬಂದಿದ್ದ ಧನಲಕ್ಷ್ಮೀಯವರು ಮನೆಯ ರೂಂನಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆಯಲ್ಲಿ ಧನಲಕ್ಷ್ಮೀಯವರ ತಂದೆ ಹಾಗೂ ಸಹೋದರ ಇದ್ದಾಗಲೇ ಈ ಘಟನೆ ನಡೆದಿದೆ. ಮೂಲತಃ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಕೆ.ತಿಮ್ಮಲಾಪುರ ನಿವಾಸಿಯಾಗಿರುವ ಧನಲಕ್ಷ್ಮೀ ಕಳೆದ 5 ವರ್ಷದಿಂದ ನೆಲಮಂಗಲದ ಅರಿಶಿನಕುಂಟೆಯ ಆದರ್ಶನಗರದಲ ಬಾಡಿಗೆ ಮನೆಯಲ್ಲಿ ವಾಸವಿದ್ದರು.
undefined
ನನಗೆ 61 ಮುಂದೆ 100 ಆದರು ನನ್ನ ಅಮ್ಮನೇ ನನ್ನ ದೇವರು: ಹುಲಿ ಉಗುರು ಸಂಕಟ ಬಿಚ್ಚಿಟ್ಟ ನಟ ಜಗ್ಗೇಶ್!
ಅಂತಾರಾಷ್ಟ್ರೀಯ ಮಟ್ಟದಲ್ಲಿ 3 ಬಾರಿ ಕಬ್ಬಡಿ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಧನಲಕ್ಷ್ಮೀಯವರು ಕಾಡುಗೋಡಿಯ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಸ್ನೇಹಿತರ ಜೊತೆಗೆ ಮೈಸೂರು ದಸರಾ ನೋಡಿಕೊಂಡು ಬಂದಿದ್ದ ಧನಲಕ್ಷ್ಮೀಯವರು ಏಕಾಏಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಪೋಷಕರು ನೀಡಿದ ದೂರಿನ ಮೇರೆಗೆ ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.