ಅರೇಬಿಕ್‌ ಕಾಲೇಜಲ್ಲಿ ಉಗ್ರ ತರಬೇತಿ: ದೇಶದ 30 ಸ್ಥಳಗಳಲ್ಲಿ ಎನ್‌ಐಎ ರೇಡ್‌; ಡಿಎಂಕೆ ಕೌನ್ಸಿಲರ್‌ ಮನೆ ಮೇಲೂ ಶೋಧ

By BK Ashwin  |  First Published Sep 16, 2023, 9:50 AM IST

ಎನ್‌ಐಎ ತಮಿಳುನಾಡಿನ ಹಲವೆಡೆ ಮತ್ತು ತೆಲಮಗಾಣ ಸೇರಿ ಸುಮಾರು 30 ಸ್ಥಳಗಳಲ್ಲಿ ಶೋಧ ಕಾರ್ಯ ನಡೆಸುತ್ತಿದೆ. 


ನವದೆಹಲಿ (ಸೆಪ್ಟೆಂಬರ್ 16, 2023): ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಶನಿವಾರ ಬೆಳಗ್ಗೆ ತಮಿಳುನಾಡಿನ ಕೊಯಮತ್ತೂರಿನ 22 ಸ್ಥಳಗಳು, ಚೆನ್ನೈನ ಮೂರು ಸ್ಥಳಗಳು ಮತ್ತು ಹೈದರಾಬಾದ್‌ನ ನಾಲ್ಕು ಸ್ಥಳಗಳಲ್ಲಿ ಶೋಧ ಕಾರ್ಯ ಆರಂಭಿಸಿದೆ. ಐಸಿಸ್ ಮಾಡ್ಯೂಲ್‌ಗೆ ಸಂಬಂಧಿಸಿದ ಪ್ರಕರಣದಲ್ಲಿ ಶೋಧ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.

ಪ್ರಕರಣದ ಹಿನ್ನೆಲೆ:
2022 ರ ಅಕ್ಟೋಬರ್ 23 ರಂದು ಕೊಯಮತ್ತೂರಿನ ಉಕ್ಕಡಮ್‌ನಲ್ಲಿರುವ ಈಶ್ವರನ್ ಕೋವಿಲ್ ಸ್ಟ್ರೀಟ್‌ನಲ್ಲಿರುವ ಕೊಟ್ಟೈ ಸಂಗಮೇಶ್ವರರ್ ದೇವಸ್ಥಾನದ ಮುಂಭಾಗದಲ್ಲಿ ಸ್ಫೋಟ ನಡೆದಿತ್ತು. ಈ ವೇಳೆ ಸುಧಾರಿತ ಸ್ಫೋಟಕ ಸಾಧನದೊಂದಿಗೆ ಕಾರನ್ನು ಓಡಿಸಿದ ಐಸಿಸ್ ಅನುಯಾಯಿ ಜಮೇಶಾ ಮುಬೀನ್ ಮೃತಪಟ್ಟಿದ್ದ. ತನಿಖೆಯಿಂದ ಅವನು  ಕೊಯಮತ್ತೂರಿನ ಕುನಿಯಮುತ್ತೂರಿನಲ್ಲಿ ಕೋವೈ ಅರೇಬಿಕ್‌ ಕಾಲೇಜಿನಲ್ಲಿ ಓದುತ್ತಿದ್ದರು ಎಂದು ತಿಳಿದುಬಂದಿದೆ. 

Tap to resize

Latest Videos

ಇದನ್ನು ಓದಿ: ಗೋಲ್ಡ್‌ ಮೆಡಲಿಸ್ಟ್‌ ಡಾಕ್ಟರ್‌ಗೆ ಐಸಿಸ್‌ ನಂಟು! ಭಾಷಾ ನಿಪುಣ, 18 ಪುಸ್ತಕಗಳ ಲೇಖಕ ಅರೆಸ್ಟ್

ಕೆಲ ವರ್ಷಗಳ ಹಿಂದೆ ಕಾಲೇಜಿನಲ್ಲಿ ಮುಬೀನ್ ಜೊತೆ 25ಕ್ಕೂ ಹೆಚ್ಚು ಮಂದಿ ಓದುತ್ತಿದ್ದರು. ಇನ್ನೊಂದೆಡೆ, ಚೆನ್ನೈನ ಎನ್‌ಐಎ ಅಧಿಕಾರಿಗಳು ಕೊಯಮತ್ತೂರಿನ ಅರೇಬಿಕ್ ಕಾಲೇಜಿನಲ್ಲಿ ಕಳೆದ ತಿಂಗಳು ಶೋಧ ನಡೆಸಿದ್ದರು ಎಂದು ಮೂಲಗಳು ತಿಳಿಸಿವೆ. ಬಳಿಕ ತಮಿಳುನಾಡು ಐಸಿಸ್ ಮಾಡ್ಯೂಲ್ ಮತ್ತು ಅದರ ನೇಮಕಾತಿ ಮತ್ತು ಆಮೂಲಾಗ್ರೀಕರಣಕ್ಕೆ ಸಂಬಂಧಿಸಿದಂತೆ ಸಂಸ್ಥೆಯು ದಾಖಲೆಗಳನ್ನು ಸಂಗ್ರಹಿಸಿದೆ ಮತ್ತು ಹೊಸ ಎಫ್‌ಐಆರ್ ಅನ್ನು ದಾಖಲಿಸಿದೆ.

ಎಫ್‌ಐಆರ್ ನಂತರ, ಎನ್‌ಐಎ ಶನಿವಾರ ಬೆಳಗ್ಗೆ 6 ಗಂಟೆ ಸುಮಾರಿಗೆ ಕೊಯಮತ್ತೂರು ನಗರದ ಕರುಂಬುಕ್ಕಡೈ, ಜಿಎಂ ನಗರ, ಕಿನಾತುಕಡವು, ಕವುಂಡಂಪಾಳ್ಯಂ, ಉಕ್ಕಡಂ ಮತ್ತು ಇನ್ನೂ ಕೆಲವು ಪ್ರದೇಶಗಳು ಸೇರಿ 22 ಸ್ಥಳಗಳಲ್ಲಿ ಶೋಧ ಆರಂಭಿಸಿದೆ. ತಮಿಳುನಾಡು ರಾಜಧಾನಿ ಚೆನ್ನೈನ ನೀಲಂಕಾರೈ, ಅಯನವರಂ ಮತ್ತು ತಿರುವಿ ಕಾ ನಗರ್‌ನಲ್ಲಿಯೂ ಹುಡುಕಾಟ ಆರಂಭಿಸಿದ್ದಾರೆ.

ಇದನ್ನೂ ಓದಿ:  ಕಾಶ್ಮೀರಲ್ಲಿ ಉಗ್ರ ಚಟುವಟಿಕೆ ಆರಂಭಕ್ಕೆ ಅಲ್‌ ಖೈದಾ ಸಿದ್ಧತೆ; AL QAEDA ಜತೆ ವಿಲೀನಕ್ಕೆ ಪಾಕ್‌ ತಾಲಿಬಾನ್‌ ಸಜ್ಜು!

ಅಲ್ಲದೆ, ಕೊಯಮತ್ತೂರು ನಗರದ ಪೆರುಮಾಳ್ ಕೋವಿಲ್ ಸ್ಟ್ರೀಟ್‌ನಲ್ಲಿರುವ ಕೊಯಮತ್ತೂರು ಕಾರ್ಪೊರೇಷನ್ 82ನೇ ವಾರ್ಡ್ನ ಡಿಎಂಕೆ ಕೌನ್ಸಿಲರ್ ಎಂ. ಮುಬಸೀರಾ ನಿವಾಸದಲ್ಲಿ ಎನ್‌ಐಎ ಅಧಿಕಾರಿಗಳ ತಂಡ ಶೋಧ ನಡೆಸುತ್ತಿದೆ. ಈ ಕೌನ್ಸಿಲರ್‌ನ ಪತಿ ಅರೇಬಿಕ್ ಕಾಲೇಜಿನಲ್ಲಿ ಓದುತ್ತಿದ್ದರು ಎಂದೂ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಕಾಶ್ಮೀರದಲ್ಲಿ ನಾಪತ್ತೆಯಾದ 25 ವರ್ಷದ ಯೋಧ: ಕಾರಿನಲ್ಲಿ ರಕ್ತದ ಕಲೆ ಪತ್ತೆ; ಉಗ್ರರಿಂದ ಕಿಡ್ನ್ಯಾಪ್‌?

click me!