
ಕೊಪ್ಪಳ (ಫೆ.6): ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ಇಸ್ರೇಲ್ ಮಹಿಳೆ ಮೇಲಿನ ಅತ್ಯಾ೧ಚಾರ ಮತ್ತು ಯುವಕನ ಕೊಲೆ ಪ್ರಕರಣದ ತನಿಖೆ ಈಗ ಮಹತ್ವದ ಹಂತಕ್ಕೆ ಬಂದು ತಲುಪಿದೆ. ಗಂಗಾವತಿ ಜಿಲ್ಲಾ ಹೆಚ್ಚುವರಿ ನ್ಯಾಯಾಲಯವು ಪ್ರಕರಣದ ಮೂವರು ಆರೋಪಿಗಳನ್ನು ದೋಷಿಗಳೆಂದು ತೀರ್ಮಾನಿಸಿದ್ದು, ಘಟನೆ ನಡೆದ ಕೇವಲ 9 ತಿಂಗಳಲ್ಲಿ ಕಾನೂನು ಹೋರಾಟ ತಾರ್ಕಿಕ ಅಂತ್ಯದತ್ತ ಸಾಗಿದೆ.
ಕಳೆದ ಮಾರ್ಚ್ ತಿಂಗಳಲ್ಲಿ ಗಂಗಾವತಿ ತಾಲೂಕಿನ ಸಾಣಾಪೂರ ಬಳಿ ಈ ಪೈಶಾಚಿಕ ಕೃತ್ಯ ನಡೆದಿತ್ತು. ಇಸ್ರೇಲ್ ಮೂಲದ ಮಹಿಳೆಯ ಮೇಲೆ ಅಮಾನವೀಯವಾಗಿ ಅತ್ಯಾ೧ಚಾರವೆಸಗಿದ್ದರು. ಈ ಘಟನೆಯಲ್ಲಿ ಯುವಕನೋರ್ವನ ಕೊಲೆಯಾಗಿತ್ತು.ಈ ಘಟನೆ ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿ ಪ್ರವಾಸೋದ್ಯಮದ ಮೇಲೆ ಕರಿನೆರಳು ಬಿದ್ದಿತ್ತು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಅತ್ಯಂತ ಚುರುಕಾಗಿ ತನಿಖೆ ನಡೆಸಿ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.
ಇದನ್ನೂ ಓದಿ: ಕೊಪ್ಪಳದಲ್ಲಿ ವಿದೇಶಿ ಮಹಿಳೆಯ ಅತ್ಯಾ*ಚಾರ ಮತ್ತು ಕೊಲೆ 'ಸಣ್ಣ ಘಟನೆ' ಎಂದ ಸಂಸದ ಹಿಟ್ನಾಳ, ಭುಗಿಲೆದ್ದ ವಿವಾದ!
ಈ ಪ್ರಕರಣದಲ್ಲಿ ಮಲ್ಲೇಶ್ ಅಲಿಯಾಸ್ ಹಂದಿಮಲ್ಲ, ಸಾಯಿ ಮತ್ತು ಶರಣಪ್ಪ ಎಂಬ ಮೂವರನ್ನು ಆರೋಪಿಗಳೆಂದು ಹೆಸರಿಸಲಾಗಿತ್ತು. ಸುದೀರ್ಘ ವಿಚಾರಣೆ ನಡೆಸಿದ ಗಂಗಾವತಿಯ ಹೆಚ್ಚುವರಿ ಸತ್ರ ನ್ಯಾಯಾಲಯವು, ಸಾಕ್ಷ್ಯಾಧಾರಗಳನ್ನು ಪರಿಗಣಿಸಿ ಈ ಮೂವರೂ ದೋಷಿಗಳು ಎಂದು ಆದೇಶಿಸಿದೆ.
ದೋಷಿಗಳೆಂದು ಘೋಷಿಸಲ್ಪಟ್ಟಿರುವ ಈ ಮೂವರಿಗೂ ಅತಿ ಕಠಿಣ ಶಿಕ್ಷೆಯಾಗುವ ಸಾಧ್ಯತೆಯಿದೆ. ಮೂಲಗಳ ಪ್ರಕಾರ, ಮೂವರಿಗೂ ಜೀವಾವಧಿ ಶಿಕ್ಷೆಯಾಗುವ ಸಂಭವ ಹೆಚ್ಚಿದೆ. ಇದೇ ಫೆಬ್ರವರಿ 16 ರಂದು ನ್ಯಾಯಾಲಯವು ತನ್ನ ಅಂತಿಮ ತೀರ್ಪನ್ನು ಪ್ರಕಟಿಸಲಿದ್ದು, ನೊಂದ ಕುಟುಂಬಕ್ಕೆ ಅಂದು ಸಂಪೂರ್ಣ ನ್ಯಾಯ ಸಿಗಲಿದೆ ಎಂಬ ನಿರೀಕ್ಷೆಯಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ