
ಬೆಂಗಳೂರು (ಮೇ 06): ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾನಕ್ಕೆ ಇನ್ನು ಮೂರು ದಿನಗಳು ಬಾಕಿ ಇರುವಾಗ ಮತದಾರರಿಗೆ ಹಣವನ್ನು ಹಂಚಲು ಹಣ ಸಂಗ್ರಹಣೆ ಮಾಡಿರುವ ಆರೋಪಗಳು ಕೇಳಿಬಂದಿರುವ ಕಡೆಗಳಲ್ಲಿ ಆದಾಯ ತೆರಿಗೆ (ಐಟಿ) ಇಲಾಖೆ ಅಧಿಕಾರಿಗಳ ದಾಳಿ ನಡೆಯುತ್ತಿದೆ. ಇನ್ನು ಇಂದು ಬೆಳಗ್ಗೆ 6 ಗಂಟೆಗೆ ಕಮ್ಮವಾರಿ ಸಂಘದ ಅಧ್ಯಕ್ಷ ರಾಜಗೋಪಾಲ್ ನಾಯ್ಡು ಅವರ ಮನೆಯ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದು, ಇನ್ನೂ ಪರಿಶೀಲನೆ ಕಾರ್ಯ ಮುಂದುವರೆದಿದೆ.
ಚುನಾವಣಾ ಸಂದರ್ಭದಲ್ಲಿ ಹಣದ ಆಮಿಷವೊಡ್ಡಿ ಮತದಾರರನ್ನು ಸೆಳೆಯಲು ಎಲ್ಲ ಪಕ್ಷಗಳ ಅಭ್ಯರ್ಥಿಗಳು ಭಾರಿ ಕಸರತ್ತು ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಈಗಾಗಲೇ ರಾಜ್ಯಾದ್ಯಂತ ಭಾರಿ ದಾಳಿಯನ್ನು ಮಾಡಿದ್ದಾರೆ. ಇಂದುಮ ಬೆಳಗ್ಗೆ ಕಮ್ಮವಾರಿ ಸಂಘದ ಅಧ್ಯಕ್ಷ ರಾಜಗೋಪಾಲ್ ನಾಯ್ಡು ಅವರ ಮನೆಯ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಎರಡು ಇನ್ನೋವಾ ಕಾರಿನಲ್ಲಿ ಆಗಮಿಸಿದ 9 ಆದಾಯ ತೆರಿಗೆ ಅಧಿಕಾರಿಗಳು ದಾಳಿ ಮಾಡಿದ್ದು, ಸತತ 9 ಗಂಟೆಗಳಿಂದಲೂ ಪರಿಶೀಲನೆ ಕಾರ್ಯ ಮಾಡುತ್ತಿದ್ದಾರೆ.
ಪೈನಾನ್ಷಿಯರ್‌ಗಳ ಮೇಲೆ ಐಟಿ ದಾಳಿ, ಕಂತೆ ಕಂತೆ ನೋಟು ಪತ್ತೆ! ಇವ್ರೆಲ್ಲಾ ಡಿಕೆಶಿ ಆಪ್ತರಾ?
ಬಿಜೆಪಿ ನಾಯಕರ ಆಪ್ತ ರಾಜಗೋಪಾಲ್ ನಾಯ್ಡು: ಕಮ್ಮವಾರಿ ಸಂಘದ ಅಧ್ಯಕ್ಷ ರಾಜಗೋಪಾಲ್ ನಾಯ್ಡು ಬಸವನಗುಡಿ ಬಿಜೆಪಿ ನಾಯಕರ ಆಪ್ತರಾಗಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಚುನಾವಣೆಯ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ಕೆಲವು ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರಿಗೆ ಹಂಚುವುದಕ್ಕಾಗಿ ಹಣವನ್ನು ಸಂಗ್ರಹಣೆ ಮಾಡಿ ಮನೆಯಲ್ಲಿ ಇಟ್ಟುಕೊಳ್ಳಲಾಗಿದೆ ಎಂದು ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಬೆಳ್ಳಂಬೆಳಗ್ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಸತತ ಒಂಭತ್ತು ಗಂಟೆಗಳು ದಾಳಿ ಮಾಡಿದ್ದು, ಎಷ್ಟು ಹಣ ಲಭ್ಯವಾಗಿದೆ, ಏನೇನು ಸಿಕ್ಕಿದೆ ಎಂಬ ಮಾಹಿತಿ ಇನ್ನೂ ಬಹಿರಂಗವಾಗಿಲ್ಲ.
ಡಿಕೆಶಿವಕುಮಾರ್ ಆಪ್ತರ ಮನೆ ಮೇಲೆ ಐಟಿ ದಾಳಿ: ಬೆಂಗಳೂರು ಹಾಗೂ ಮೈಸೂರಿನಲ್ಲಿ ನನ್ನ ಆಪ್ತರ ಮೇಲಿನ ಐಟಿ ದಾಳಿ ಮಾಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ. ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದರು. ಚುನಾವಣೆ ಹೊಸ್ತಿಲಲ್ಲಿ ಡಿಕೆಶಿ ಆಪ್ತ ಫೈನಾನ್ಶಿರ್ಗಳಿಗೆ ಸಂಕಷ್ಟ ಎದುರಾಗಿದೆ. ಬೆಂಗಳೂರು, ಮಂಗಳೂರಿನಲ್ಲಿ ಡಿಕೆಶಿ ಆಪ್ತರ ಮೇಲೆ ಐಟಿ ರೇಡ್ ನಡೆದಿದೆ. ನನ್ನನ್ನು ಭೇಟಿ ಮಾಡಿದವರ ಮೇಲೆ ಐಟಿ ದಾಳಿ ನಡೆದಿದೆ. ನಾನು ಫೋನ್ ಮಾಡಿದರ ಮೇಲೆಲ್ಲಾ ಐಟಿ ರೇಡ್ ನಡೆಯುತ್ತಿದೆ. ಐಟಿ ಬಳಸಿಕೊಂಡು ಚುನಾವಣೆ ಗೆಲ್ಲಲು ಬಿಜೆಪಿ ಪ್ರಯತ್ನ ನಡೆಸುತ್ತಿದೆ ಎಂದು ಅರಸೀಕೆರೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಏನು ಮಾಡಿದ್ರು ಮತದಾರ ತೀರ್ಮಾನ ಮಾಡ್ತಾರೆ. ಕಾಂಗ್ರೆಸ್ಗೆ 141 ಸ್ಥಾನ, ಬಿಜೆಪಿಗೆ 60 ಸ್ಥಾನ ಬರುತ್ತೆ ಎಂದು ಡಿಕೆಶಿ ಹೇಳಿದ್ದಾರೆ.
ಡಿಕೆಶಿಗೆ ಮತ್ತೊಂದು ಸಂಕಷ್ಟ: ಬಿಜೆಪಿ ಭ್ರಷ್ಟಾಚಾರ ರೇಟ್ ಕಾರ್ಡ್‌ಗೆ ಸಾಕ್ಷಿ ಕೇಳಿದ ಆಯೋಗ
ಫೈನಾನ್ಷಿಯರ್ಗಳ ಮೇಲೆ ಐಟಿ ದಾಳಿ 15 ಕೋಟಿ ನಗದು ಲಭ್ಯ: ಬೆಂಗಳೂರು , ಮೈಸೂರಿನಲ್ಲಿ ಏಕಕಾಲಕ್ಕೆ ಐಟಿ ರೇಡ್ ನಡೆದಿದ್ದು, ಡಿಕೆಶಿ ಬೆಂಬಲಿಗ ಫೈನಾನ್ಷಿಯರ್ಗಳು ಎನ್ನಲಾಗಿದೆ. ಈ ದಾಳಿಯಲ್ಲಿ 15 ಕೋಟಿ ನಗದು, 5 ಕೋಟಿ ಮೌಲ್ಯದ ಚಿನ್ನ ವಶಕ್ಕೆ ಪಡೆಯಲಾಗಿದೆ. ಚುನಾವಣಾ ಅಭ್ಯರ್ಥಿಗಳಿಗೆ ನೀಡಲು ಹಣ ಸಂಗ್ರಹಿಸಿದ್ದ ಶಂಕೆ ಮೇಲೆ ಈ ದಾಳಿ ನಡೆದಿದೆ. ಬೆಂಗಳೂರಿನ ಶಾಂತಿನಗರ, ಆರ್.ಎಂ.ವಿ ಲೇಔಟ್, ಕನ್ನಿಂಗ್ ಹ್ಯಾಮ್ ರಸ್ತೆ, ಸದಾಶಿವನಗರ ಸೇರಿ ಹಲವೆಡೆ ದಾಳಿ ನಡೆದ ಬಗ್ಗೆ ಸುವರ್ಣ ನ್ಯೂಸ್ ಗೆ ಆದಾಯ ತೆರಿಗೆ ಇಲಾಖೆ ಮೂಲಗಳಿಂದ ಮಾಹಿತಿ ಸಿಕ್ಕಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ