
ಕಲಬುರಗಿ(ಜೂ.16): ಪ್ರಕರಣದ ತನಿಖೆ ಸಂದರ್ಭದಲ್ಲಿ ಪೊಲೀಸರ ಮೇಲೆ ಹಲ್ಲೆ, ಕೊಲೆ ಯತ್ನ ಹಾಗೂ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ ಸಾಬೀತಾದ್ದರಿಂದ ನಗರದ ಮೊಮಿನಪುರದ ಗೋಳಾಚೌಕ್ ನಿವಾಸಿ ಮಹ್ಮದ್ ಜಹಿರೋದ್ದೀನ್ ಮಹ್ಮದ್ ಇಲಿಯಾಸ್ ಅಲಿಯಾಸ್ ಇಮಾಮ್ ಪಟೇಲ್‌ಗೆ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಕೃಷ್ಣಾಜಿ ಬಾಬುರಾವ ಪಾಟೀಲ ಅವರು 12 ವರ್ಷ ಜೈಲು ಶಿಕ್ಷೆ ಮತ್ತು 15 ಸಾವಿರ ರು. ದಂಡ ವಿಧಿಸಿ ಆದೇಶಿಸಿದ್ದಾರೆ.
ವಿಶ್ವವಿದ್ಯಾಲಯ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿ ಮಹ್ಮದ್ ಜಹಿರೋದ್ದೀನ್ ಸುಲಿಗೆ ಮಾಡಿದ್ದ ಮೊಬೈಲ್ ಮತ್ತು ಲ್ಯಾಪ್ಟಾಪ್ ತೋರಿಸಿ ಹಾಜರು ಪಡಿಸುವ ವೇಳೆ ಆತ ತನ್ನ ಚೀಲದಲ್ಲಿದ್ದ ಚಾಕುವಿನಿಂದ ಕರ್ತವ್ಯನಿರತ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ತೀವ್ರವಾಗಿ ಇರಿದು ಗಾಯಗೊಳಿಸಿದ್ದ. ಪೊಲೀಸ್ ಅಧಿಕಾರಿಗಳು ಶರಣಾಗಲು ನೀಡಿದ ಎಚ್ಚರಿಕೆ ಕಡೆಗಣಿಸಿ ಪರಾರಿಯಾಗಲು ಯತ್ನಿಸಿದಾಗ ಆತನ ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿತ್ತು.
ಸುಳ್ಳು ಕೇಸು ಹಾಕಿ ಜೈಲಿಗಟ್ಟಿದ ಪೊಲೀಸರು : 8 ತಿಂಗಳು ಜೈಲಲ್ಲಿ ಕಳೆದ ಯುವಕ
ಆತನ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು. ಸರಕಾರದ ಪರವಾಗಿ ಸರಕಾರಿ ಅಭಿಯೋಜಕ ಎಸ್.ಆರ್. ನರಸಿಂಹಲು ಅವರು ವಾದ ಮಂಡಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ