ಜನಾರ್ದನ ರೆಡ್ಡಿ ಸಾಮಾಜಿಕ ಜಾಲತಾಣಗಳ ಖಾತೆ ಹ್ಯಾಕ್: ದೂರು ದಾಖಲು

By Govindaraj S  |  First Published Jan 7, 2023, 8:58 AM IST

ಗಣಿಧಣಿ ಜನಾರ್ಧನ್ ರೆಡ್ಡಿ ಸಾಮಾಜಿಕ ಜಾಲತಾಣಗಳ ಖಾತೆ ಹ್ಯಾಕ್ ಆಗಿದ್ದು, ರೆಡ್ಡಿ ಆಪ್ತ ದಾಮೋದರ ರೆಡ್ಡಿ ಅವರು ಸೈಬರ್ ಠಾಣೆಗೆ ದೂರು ದಾಖಲು ಮಾಡಿದ್ದಾರೆ. 


ಬಳ್ಳಾರಿ (ಜ.07): ಗಣಿಧಣಿ.. ಜನಾರ್ದನ ರೆಡ್ಡಿ ಬರೋಬ್ಬರಿ 12 ವರ್ಷಗಳ ಬಳಿಕ ಕರ್ನಾಟಕ ರಾಜಕೀಯದಲ್ಲಿ ಮತ್ತೆ ಸುದ್ದಿಯಲ್ಲಿದ್ದಾರೆ.. ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೂ 100 ದಿನ ಮಾತ್ರ ಬಾಕಿ ಇದ್ದಾಗ ಹೊಸ ಪಕ್ಷ ಸ್ಥಾಪಿಸಿದ್ದು, ಇದರ ಮೂಲಕ ಗೆಲುವಿನ ವಿಶ್ವಾಸದಲ್ಲಿದ್ದ ಮೂರು ಪಕ್ಷಗಳಿಗೆ ತಲೆನೋವು ತಂದಿದ್ದಾರೆ. ಆದರೆ ಇದೀಗ ಜನಾರ್ಧನ್ ರೆಡ್ಡಿ ಸಾಮಾಜಿಕ ಜಾಲತಾಣಗಳ ಖಾತೆ ಹ್ಯಾಕ್ ಆಗಿದ್ದು, ರೆಡ್ಡಿ ಆಪ್ತ ದಾಮೋದರ ರೆಡ್ಡಿ ದೂರು ದಾಖಲು ಮಾಡಿದ್ದಾರೆ. 

ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಕಟ್ಟಿ ರಾಜ್ಯ ರಾಜಕೀಯದಲ್ಲಿ ಎರಡನೇ ಇನ್ನಿಂಗ್ಸ್ ಆರಂಭ ಮಾಡಿರುವ ಜನಾರ್ದನ ರೆಡ್ಡಿ ಹೊಸ ಪಕ್ಷ ಕಟ್ಟಿಕೊಂಡು 2023ರ ಚುನಾವಣೆಗೆ ತಯಾರಿಯಲ್ಲಿರುವ ಆರಂಭದಲ್ಲೆ ಹ್ಯಾಕರ್ಸ್ ಹಾವಳಿ ಆಗಿದೆ. ಹೀಗಾಗಿ ಹ್ಯಾಕರ್ಸ್ ಹಾವಳಿಯಿಂದಾಗಿ ಗಾಲಿ ಜನಾರ್ದನ ರೆಡ್ಡಿ ಟೀಮ್ ಪೊಲೀಸ್ ಠಾಣೆ ಮೆಟ್ಟಿಲು ಏರಿದ್ದಾರೆ. ಹ್ಯಾಕರ್ಸ್‌ಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ದೂರು ನೀಡಲಾಗಿದೆ. ಜನಾರ್ಧನ್ ರೆಡ್ಡಿಯ ಆಪ್ತ ಸಹಾಯಕ ದಾಮೋದರ ರೆಡ್ಡಿ  ಸೈಬರ್ ಠಾಣೆಗೆ ದೂರು ಸಲ್ಲಿಸಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Tap to resize

Latest Videos

undefined

ಜನಾರ್ದನ ರೆಡ್ಡಿ ಆಸ್ತಿ ಜಪ್ತಿಗೆ ಅನುಮತಿ ನೀಡದ ಸರ್ಕಾರ: ಹೈಕೋರ್ಟ್‌ಗೆ ಸಿಬಿಐ ಮೊರೆ

ನನ್ನ ಮೇಲೆ ಸಿಬಿಐ ಛೂ ಬಿಟ್ಟ ಬಿಜೆಪಿ: ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಹುಟ್ಟು ಹಾಕುತ್ತಿದ್ದಂತೆ ಬಿಜೆಪಿಯ ಮುಖಂಡರು ಸರ್ಕಾರಿ ಸಂಸ್ಥೆ ಸಿಬಿಐಯನ್ನು ದುರ್ಬಳಕೆ ಮಾಡಿಕೊಂಡು ತಮ್ಮ ಮೇಲೆ ಛೂ ಬಿಟ್ಟಿದ್ದಾರೆ. ನೂರು ಜನ್ಮ ಎತ್ತಿ ಬಂದರೂ ತಮ್ಮ ಆಸ್ತಿಯನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಲು ಸಾಧ್ಯವಿಲ್ಲ ಎಂದು ಕಲ್ಯಾಣ ರಾಜ್ಯ ಕ್ರಾಂತಿ ಪಕ್ಷ ಸಂಸ್ಥಾಪಕ ಜನಾರ್ದನರೆಡ್ಡಿ ಸವಾಲು ಹಾಕಿದ್ದಾರೆ. ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ವತಿಯಿಂದ ಶುಕ್ರವಾರ ನಡೆದ ಕಾರ್ಯಕರ್ತರ ಬೃಹತ್‌ ಸಭೆ ಹಾಗೂ ಸೇರ್ಪಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, 2018ರಲ್ಲೇ ಪಕ್ಷ ಸ್ಥಾಪಿಸಲು ಯೋಜನೆ ಹಾಕಿಕೊಂಡಿದ್ದೆ. 

ಜನಾರ್ದನ ರೆಡ್ಡಿಯನ್ನು ಪಕ್ಷದಲ್ಲೇ ಉಳಿಸಿಕೊಳ್ಳಲು ಯತ್ನ: ಸಚಿವ ಶ್ರೀರಾಮುಲು

ಆಗ ಯಡಿಯೂರಪ್ಪರಿಗೆ ಮುಖ್ಯಮಂತ್ರಿ ಸ್ಥಾನಕ್ಕೆ ಅಡ್ಡಿಯಾಗುತ್ತೇನೆ ಎಂದು ಹಿಂದೆ ಸರಿದೆ. ಈಗ ಹೊಸ ಪಕ್ಷ ಸ್ಥಾಪಿಸುತ್ತಿದ್ದಂತೆ ಬಿಜೆಪಿ ಸರ್ಕಾರ ಮತ್ತೆ ದಾಳಿ ನಡೆಸುವ ಭಯ ತೋರಿಸುತ್ತಿದೆ. ಕಷ್ಟಪಟ್ಟು ದುಡಿದು ಹಣ ಸಂಪಾದಿಸಿ ಆಸ್ತಿ ಮಾಡಿದ್ದೇನೆ. ರಾಜಕೀಯವಾಗಿ ತಮ್ಮನ್ನು ಮುಗಿಸಲು ಬಿಜೆಪಿಯವರು ಹುನ್ನಾರ ನಡೆಸಿದ್ದಾರೆ ಎಂದು ಆರೋಪಿಸಿದರು. ರಾಜ್ಯದ ಕಲ್ಯಾಣಕ್ಕಾಗಿ ಹೊಸ ಪಕ್ಷ ಕಟ್ಟಿದ್ದೇನೆ. ಪಕ್ಷ ಕಲ್ಯಾಣ ಕರ್ನಾಟಕ ಭಾಗಕ್ಕೆ ಮಾತ್ರ ಸೀಮಿತವಾಗಿಲ್ಲ. 2028ಕ್ಕೆ ರಾಜ್ಯದಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದೇ ಬರುತ್ತದೆ ಎಂದರು.

click me!