
ಕೆ.ಆರ್.ಪೇಟೆ : ಎರಡು ಬೈಕ್‌ಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಜೆಡಿಎಸ್ ಮುಖಂಡ ಸಾವನ್ನಪ್ಪಿರುವ ಘಟನೆ ತಾಲೂಕಿನ ಹೊಸಹೊಳಲು- ಕತ್ತರಘಟ್ಟ ಗೇಟ್ ಬಳಿಯ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ತಾಲೂಕಿನ ಹೊಸಹೊಳಲು ಗ್ರಾಮದ ಜೆಡಿಎಸ್ ಮುಖಂಡ ಬಾಲಕೃಷ್ಣ (55) ಮೃತಪಟ್ಟವರು.
ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಮತ್ತೋರ್ವ ಬೈಕ್ ಸವಾರನನ್ನು ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಬೆಂಗಳೂರು-ಜಲಸೂರು ಮಾರ್ಗದ ರಾಜ್ಯ ಹೆದ್ದಾರಿ ಬಳಿ ಘಟನೆ ನಡೆದಿದ್ದು, ಕೆ.ಆರ್.ಪೇಟೆ ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತ ಬಾಲಕೃಷ್ಣರಿಗೆ ಪತ್ನಿ, ಇಬ್ಬರು ಮಕ್ಕಳು, ಸಹೋದರ, ಸಹೋದರಿಯನ್ನು ಅಗಲಿದ್ದಾರೆ.
ಪತ್ನಿ ಕಿರುಕುಳ ಪತಿ ನಾಪತ್ತೆ, ದೂರು ದಾಖಲು
ಮದ್ದೂರು: ಪತ್ನಿ ಕಿರುಕುಳದಿಂದ ಬೇಸತ್ತ ತಮ್ಮ ಪುತ್ರ ನಾಪತ್ತೆಯಾಗಿರುವುದಾಗಿ ತಾಯಿ ಪಾರ್ವತಮ್ಮ ಪೊಲೀಸರಿಗೆ ದೂರು ನೀಡಿದ್ದಾರೆ. ಪಟ್ಟಣದ ವೈದ್ಯನಾಥಪುರ ರಸ್ತೆ ನಿವಾಸಿ ಮನು (38) ಅವರಿಗೆ ಸೊಸೆ ಜಯಶ್ರೀ ದಿನನಿತ್ಯ ನೀಡುತ್ತಿದ್ದ ಕಿರುಕುಳದಿಂದ ಬೇಸತ್ತ ಮನು ಕಳೆದ ಮೇ 5ರಿಂದ ನಾಪತ್ತೆಯಾಗಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಮನು 5.9 ಅಡಿ ಎತ್ತರ, ಕೋಲು ಮುಖ, ಎಣ್ಣೆಗೆಂಪು ಮೈಬಣ್ಣ, ಸಾಧಾರಣ ಮೈಕಟ್ಟು, ಮನೆಯಿಂದ ಹೊಗುವಾಗ ಈತ ನೀಲಿ ಬಣ್ಣದ ಟಿ-ಶರ್ಟು ಹಾಗೂ ಜೀನ್ಸ್ ಪ್ಯಾಂಟ್ ಧರಿಸಿದ್ದಾನೆ. ಇತರ ಬಗ್ಗೆ ಮಾಹಿತಿ ಉಳ್ಳವರು ಮದ್ದೂರು ಪೊಲೀಸರನ್ನು ಸಂಪರ್ಕಿಸುವಂತೆ ಕೋರಲಾಗಿದೆ.
ಇದನ್ನೂ ಓದಿ: Hassan: ಮದುವೆಗೆ ಹೊರಟಿದ್ದ ಬಸ್ ಅಪಘಾತ
ವ್ಯಕ್ತಿ ನಾಪತ್ತೆ ದೂರು ದಾಖಲು
ಮದ್ದೂರು: ತಾಲೂಕಿನ ಭೀಮನಕೆರೆ ಗ್ರಾಮದ ಕೆಂಪಣ್ಣ ನಾಪತ್ತೆಯಾಗಿರುವುದಾಗಿ ತಾಯಿ ಪೊಲೀಸರಿಗೆ ದೂರು ನೀಡಿದ್ದಾರೆ.
ಬೆಂಗಳೂರಿನ ಮಿಂಟೋ ಆಸ್ಪತ್ರೆಗೆ ಹೋಗಿ ಬರುವುದಾಗಿ ಹೇಳಿ ಕಳೆದ ಫೆಬ್ರವರಿ 2ರಂದು ಹೋಗಿದ್ದ ಕೆಂಪಣ್ಣ ಅಂದಿನಿಂದ ನಾಪತ್ತೆಯಾಗಿದ್ದಾರೆ ದೂರು ನೀಡಲಾಗಿದೆ. 47 ವರ್ಷದ ಕೆಂಪಣ್ಣ 5.4 ಅಡಿ ಎತ್ತರ, ಕೋಲು ಮುಖ, ಕಪ್ಪು ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದಾನೆ. ಮನೆಯಿಂದ ಹೊರಡುವಾಗ ನೀಲಿ ಮಿಶ್ರಿತ ಬಣ್ಣದ ಲುಂಗಿ ಮತ್ತು ಶರ್ಟು ಧರಿಸಿದ್ದಾನೆ. ಈತನ ಬಗ್ಗೆ ಮಾಹಿತಿ ಉಳ್ಳವರು ಮದ್ದೂರು ಪೊಲೀಸರು ಸಂಪರ್ಕಿಸುವಂತೆ ಕೋರಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ