ಬಸ್ ಹತ್ತುವ ವೇಳೆ ಮಹಿಳೆಯ ಚಿನ್ನಾಭರಣ ಕಳ್ಳತನ; ಇಬ್ಬರು ಸರಗಳ್ಳಿಯರ ಬಂಧನ

Published : Jul 25, 2023, 10:36 PM IST
ಬಸ್ ಹತ್ತುವ ವೇಳೆ ಮಹಿಳೆಯ  ಚಿನ್ನಾಭರಣ ಕಳ್ಳತನ; ಇಬ್ಬರು ಸರಗಳ್ಳಿಯರ ಬಂಧನ

ಸಾರಾಂಶ

ಬಸ್‌ ನಿಲ್ದಾಣದ ಬಳಿ ಬಸ್‌ ಹತ್ತುವ ವೇಳೆ ಮಹಿಳೆಯೊಬ್ಬರ 20 ಗ್ರಾಮ ತೂಕದ ಚಿನ್ನದ ಸರವನ್ನು ಎಗರಿಸಿದ್ದ ಮಹಿಳಾ ಕಳ್ಳಿಯರಿಬ್ಬರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ತಮಿಳುನಾಡು ರಾಜ್ಯದ ಕೃಷ್ಣಗಿರಿ ಜಿಲ್ಲೆಯ ಹೊಸೂರು ಗ್ರಾಮದ ಹಾದಿಯಮ್ಮ ಮತ್ತು ಮೈಸೂರು ಜಿಲ್ಲೆಯ ಹುಣಸೂರಿನ ಮಹದೇವಪುರ ಗ್ರಾಮದ ಹೇಮಾವತಿ ಈ ಇಬ್ಬರು ಕಳ್ಳಿಯರಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಯಳಂದೂರು (ಜು.25): ಬಸ್‌ ನಿಲ್ದಾಣದ ಬಳಿ ಬಸ್‌ ಹತ್ತುವ ವೇಳೆ ಮಹಿಳೆಯೊಬ್ಬರ 20 ಗ್ರಾಮ ತೂಕದ ಚಿನ್ನದ ಸರವನ್ನು ಎಗರಿಸಿದ್ದ ಮಹಿಳಾ ಕಳ್ಳಿಯರಿಬ್ಬರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ತಮಿಳುನಾಡು ರಾಜ್ಯದ ಕೃಷ್ಣಗಿರಿ ಜಿಲ್ಲೆಯ ಹೊಸೂರು ಗ್ರಾಮದ ಹಾದಿಯಮ್ಮ ಮತ್ತು ಮೈಸೂರು ಜಿಲ್ಲೆಯ ಹುಣಸೂರಿನ ಮಹದೇವಪುರ ಗ್ರಾಮದ ಹೇಮಾವತಿ ಈ ಇಬ್ಬರು ಕಳ್ಳಿಯರಿಬ್ಬರನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಕುಣಗಳ್ಳಿ ಗ್ರಾಮದ ನಂಜಮಣಿ ಭೀಮನ ಅಮಾವಾಸ್ಯೆಯಂದು ಕಂದಹಳ್ಳಿ ಮಹದೇಶ್ವರ ದೇವಾಲಯದಿಂದ ಗ್ರಾಮಕ್ಕೆ ಹಿಂದಿರುಗಲು ಯಳಂದೂರು ಬಸ್‌ ನಿಲ್ದಾಣಕ್ಕೆ ಬಂದಿದ್ದರು.

ಬಸ್ಸಿನ ಹಿಂಬದಿ ಸೀಟಿನಲ್ಲಿ ಕುಳಿತಾಗ ಕೊರಳಲ್ಲಿ ಇದ್ದ ಸರ ಕಳ್ಳತನವಾಗಿತ್ತು. ಈ ಹಿನ್ನೆಲೆ ನಂಜಮಣಿ ಪುತ್ರ ಕುಮಾರ್‌ ಪಟ್ಟಣ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಬೆಂಗಳೂರು: ಸರ ಕದಿಯುತ್ತಿದ್ದ ಚಾಲಾಕಿ ಭಾವ-ಮೈದುನ ಬಂಧನ, ಗಂಡನ ಕೃತ್ಯಕ್ಕೆ ಪತ್ನಿಯರ ನೆರವು..!

ಘಟನೆಗೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪದ್ಮಿನಿ ಸಾಹು, ಡಿವೈಎಸ್‌ಪಿ ಸೋಮೇಗೌಡ ಮಾರ್ಗದರ್ಶನದಲ್ಲಿ ಸಿಪಿಐ ಶಿವರಾಜ್‌ ಮುಧೋಳ್‌, ಪಿಎಸ್‌ಐ ಚಂದ್ರ ನಾಯಕ್‌ ಅವರು, ಚಿನ್ನದ ಸರವನ್ನು ಕಳ್ಳತನ ಮಾಡಿದ್ದ ಇಬ್ಬರು ಮಹಿಳೆಯರನ್ನು ದಸ್ತಗಿರಿ ಮಾಡಿ 18 ಗ್ರಾಮ್‌ ಚಿನ್ನದ ಸರವನ್ನು ವಶಕ್ಕೆ ಪಡೆದು ಮಹಿಳೆಯರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಕಾರ್ಯಚರಣೆಯಲ್ಲಿ ಎಎಸ್‌ಐ ಎಪಿ ಶಂಕರ್‌, ಮುಖ್ಯಪೇದೆ ನಾಗೇಂದ್ರ, ವಾಸುದೇವ್‌, ಕಾನ್ಸ್‌ಟೇಬಲ್‌ ರಾಮಶೆಟ್ಟಿ, ಜಡೆಸ್ವಾಮಿ, ಪ್ರಮೋದ್‌, ಮಹಿಳಾ ಸಿಬ್ಬಂದಿ ರೇಖಾ, ಕವಿತಾ ಪಾಲ್ಗೊಂಡಿದ್ದರು.

 

ಸಿನಿಮಾ ಶೂಟಿಂಗ್‌ ಪೂರ್ಣ ಮಾಡೋ ಸಲುವಾಗಿ ಸರಗಳ್ಳತನಕ್ಕೆ ಇಳಿದಿದ್ದ ಗ್ಯಾಂಗ್‌ ಅರೆಸ್ಟ್‌!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಎರಡು ಮಕ್ಕಳ ತಾಯಿ ಸಹವಾಸ ಮಾಡಿ ಮಸಣ ಸೇರಿದ ಯುವಕ: ತಾಯಿಯ ಲೀವಿಂಗ್ ಪಾರ್ಟನರ್ ಕತೆ ಮುಗಿಸಿದ ಅಮ್ಮ ಮಕ್ಕಳು
ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ: ಮಗ ಓದುತ್ತಿದ್ದ ಶಾಲೆಯ ಮುಂದೆಯೇ ಕೃತ್ಯ