
ತುಮಕೂರು[ಫೆ. 22] ರಜೆ ಕಳೆಯಲು ಊರಿಗೆ ಬಂದಿದ್ದ ಪತ್ರಕರ್ತ ರೋಹಿತ್ (39) ಆಕಸ್ಮಿಕವಾಗಿ ಬಾವಿಗೆ ಬಿದ್ದು ಸಾವನ್ನಪ್ಪಿದ್ದಾರೆ. ತುಮಕೂರಿನ ಕ್ಯಾತ್ಸಂದ್ರದಲ್ಲಿ ದುರ್ಘಟನೆ ಸಂಭವಿಸಿದೆ.
ತುಮಕೂರು ಜಿಲ್ಲೆಯ ಕ್ಯಾತ್ಸಂದ್ರ ಸಮೀಪದ ಸದರನಹಳ್ಳಿಯಲ್ಲಿ ತೋಟವೊಂದರ ಬಾವಿಯಲ್ಲಿ ರೋಹಿತ್ ಈಜಲು ತೆರಳಿದ್ದಾಗ ಈ ಘಟನೆ ಸಂಭವಿಸಿದೆ. ರೋಹಿತ್ ‘ಟೈಮ್ಸ್ ಆಫ್ ಇಂಡಿಯಾ’ ವರದಿಗಾರರಾಗಿ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದರು. ಶನಿವಾರ ರಜೆ ಇದ್ದ ಕಾರಣಕ್ಕೆ ತಮ್ಮ ತಂದೆಯ ಊರಾದ ಸದರನಹಳ್ಳಿಗೆ ಆಗಮಿಸಿದ್ದರು.
ಶನಿವಾರ ಸ್ನೇಹಿತರೊಂದಿಗೆ ತಮ್ಮ ತೋಟದ ಬಾವಿಗೆ ಈಜಲು ತೆರಳಿದ್ದಾಗ, ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದಿದ್ದಾರೆ. ಈ ವೇಳೆ ಬಾವಿಯ ಕಲ್ಲು ತಲೆಗೆ ಬಡಿದು ಸ್ಥಳದಲ್ಲೇ ಸಾವಿಗೆ ಈಡಾಗಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ, ಕ್ಯಾತ್ಸಂದ್ರ ಪೊಲೀಸರು ಸ್ಥಳಕ್ಕಾಗಮಿಸಿದ್ದು, ಶವವನ್ನು ಮೇಲಕ್ಕೆತ್ತಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ