Doctor's Negligence: ಕಲಬುರಗಿ ಜಿಮ್ಸ್ ಆಸ್ಪತ್ರೆಯಲ್ಲಿ ವೈದ್ಯರ ಎಡವಟ್ಟು; ತೀವ್ರ ರಕ್ತಸ್ರಾವದಿಂದ ರೋಗಿ ಸಾವು!

Published : Jul 05, 2025, 04:24 PM IST
Kalaburagi GIMS Hospital Patient dies due Doctor s negligence rav

ಸಾರಾಂಶ

ಕಲಬುರಗಿಯ ಜಿಮ್ಸ್ ಆಸ್ಪತ್ರೆಯಲ್ಲಿ ಗ್ಲೂಕೋಸ್ ಪೈಪ್ ಕಳಚಿ ಬಿದ್ದ ಪರಿಣಾಮ ರೋಗಿಯೊಬ್ಬರು ಸಾವನ್ನಪ್ಪಿದ್ದಾರೆ. ಈ ಘಟನೆ ವೈದ್ಯಕೀಯ ನಿರ್ಲಕ್ಷ್ಯದ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಮತ್ತು ಸ್ಥಳೀಯರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.

ಕಲಬುರಗಿ (ಜು.5): ಕಲಬುರಗಿಯ ಜಿಲ್ಲಾ ಆಸ್ಪತ್ರೆಯಾದ ಜಿಮ್ಸ್‌ನಲ್ಲಿ ವೈದ್ಯಕೀಯ ಯಡವಟ್ಟಿನಿಂದ ರೋಗಿಯೊಬ್ಬರು ಪ್ರಾಣ ಕಳೆದುಕೊಂಡ ಆಘಾತಕಾರಿ ಘಟನೆ ನಡೆದಿದೆ.

ಕಲಬುರಗಿ ತಾಲೂಕಿನ ಮೇಳಕುಂದಾ ಗ್ರಾಮದ ನಿವಾಸಿಯಾದ ಸಿದ್ದಣ್ಣ ಎಂಬಾತ ಕಳೆದ ನಾಲ್ಕು ದಿನಗಳ ಹಿಂದೆ ವಿಷ ಕುಡಿದು ಜಿಮ್ಸ್ ಆಸ್ಪತ್ರೆಯ ಐಸಿಯು ವಿಭಾಗಕ್ಕೆ ದಾಖಲಾಗಿದ್ದ. ಆದರೆ ಚಿಕಿತ್ಸೆಯ ವೇಳೆ ಗ್ಲೂಕೋಸ್‌ ಪೈಪ್ ಕಳಚಿ ಬಿದ್ದು ತೀವ್ರ ರಕ್ತಸ್ರಾವವಾಗಿದ್ದು, ತಕ್ಷಣದ ಚಿಕಿತ್ಸೆಯ ಕೊರತೆಯಿಂದ ಸಿದ್ದಣ್ಣ ಚೇತರಿಸಿಕೊಳ್ಳದೇ ಮೃತಪಟ್ಟಿದ್ದಾನೆ.

ಇದನ್ನೂ ಓದಿ: ಕಲಬುರಗಿಯನ್ನು ಸ್ಮಾರ್ಟ್ ಸಿಟಿ ಮಾಡಲು ಶತಸಿದ್ಧ: ಸಚಿವ ಪ್ರಿಯಾಂಕ್ ಖರ್ಗೆ

ಈ ಘಟನೆ ಜಿಮ್ಸ್ ಆಸ್ಪತ್ರೆಯಲ್ಲಿ ಮುಂದುವರಿಯುತ್ತಿರುವ ವೈದ್ಯಕೀಯ ನಿರ್ಲಕ್ಷ್ಯದ ಸರಣಿಯ ಭಾಗವಾಗಿದ್ದು, ಈ ಹಿಂದೆಯೂ ಇದೇ ಆಸ್ಪತ್ರೆಯಲ್ಲಿ ರೋಗಿಗಳು ವೈದ್ಯರ ಯಡವಟ್ಟಿನಿಂದ ಪ್ರಾಣ ಕಳೆದುಕೊಂಡಿರುವ ಘಟನೆಗಳು ವರದಿಯಾಗಿವೆ. ಸಿದ್ದಣ್ಣನ ಸಾವಿನಿಂದ ಕುಟುಂಬದವರು ಮತ್ತು ಸ್ಥಳೀಯರು ಆಕ್ರೋಶಗೊಂಡಿದ್ದು, ಆಸ್ಪತ್ರೆ, ವೈದ್ಯರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಈ ಘಟನೆಯಿಂದ ವೈದ್ಯಕೀಯ ಸೇವೆಗಳ ಗುಣಮಟ್ಟದ ಬಗ್ಗೆ ಗಂಭೀರ ಪ್ರಶ್ನೆಗಳು ಎದ್ದಿವೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಂಗಳೂರು ಅಪಾರ್ಟ್‌ಮೆಂಟ್‌ನ 16 ಕುಟುಂಬಗಳಿಗೆ ರೌಡಿಸಂ ದರ್ಶನ; ಮಾಟ-ಮಂತ್ರ ಮಾಡಿಸಿ ಕಿರುಕುಳ!
ಕೆಲಸ ಇಲ್ಲದ ಗಂಡನಿಗೆ ಪತ್ನಿ ಶೀಲದ ಮೇಲೆ ಶಂಕೆ: ನಿದ್ರೆಯಲ್ಲಿದ್ದ ಮಗಳ ಕತ್ತು ಸೀಳಿದ ಪತಿ