ಕಲಬುರಗಿ: ನಡುರಸ್ತೆಯಲ್ಲೇ ಸರ್ಕಾರಿ ಶಾಲಾ ಶಿಕ್ಷಕಿಯ ಬರ್ಬರ ಹತ್ಯೆ

Published : Apr 06, 2026, 09:48 AM IST
government school teacher murder

ಸಾರಾಂಶ

Kalaburagi teacher murder case: ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಕಲ್ಮೂಡ ಗ್ರಾಮದ ಬಳಿ ಸರ್ಕಾರಿ ಶಾಲಾ ಶಿಕ್ಷಕಿ ಜ್ಯೋತಿ ಕಪಾಳೆ (57) ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ನಂತರ ಪೆಟ್ರೋಲ್ ಸುರಿದು ಶವವನ್ನು ಸುಟ್ಟು ಹಾಕಿದ್ದಾರೆ.

ಸರ್ಕಾರಿ ಶಾಲಾ ಶಿಕ್ಷಕಿಯ ಬರ್ಬರ ಹತ್ಯೆ

ಕಲಬುರಗಿ: ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯೊಬ್ಬರನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಮಾರಕಾಸ್ತ್ರಗಳಿಂದ ಶಿಕ್ಷಕಿಯನ್ನು ಕೊಚ್ಚಿ ಕೊಲೆ ಮಾಡಿದ ದುಷ್ಕರ್ಮಿಗಳು ಶವವನ್ನು ರಸ್ತೆಬದಿಯಲ್ಲೇ ಸುಟ್ಟು ಹಾಕಿದ್ದಾರೆ. ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಕಲ್ಮೂಡ ಗ್ರಾಮದಲ್ಲಿ ಈ ಭಯಾನಕ ಘಟನೆ ನಡೆದಿದೆ. ಕಲ್ಮೂಡ ಗ್ರಾಮದ ರಸ್ತೆಯ ಪಕ್ಕದಲ್ಲಿ ಕೊಲೆ ಮಾಡಿದ ದುಷ್ಕರ್ಮಿಗಳು ಶವವನ್ನು ಅಲ್ಲೇ ರಸ್ತೆ ಬದಿ ಸುಟ್ಟು ಹಾಕಿದ್ದಾರೆ.

ಕೊಲೆಯಾದ ಶಿಕ್ಷಕಿಯನ್ನು 57 ವರ್ಷದ ಜ್ಯೋತಿ ಕಪಾಳೆ (57) ಎಂದು ಗುರುತಿಸಲಾಗಿದೆ. ಮೃತ ಜ್ಯೋತಿ ಕಪಾಳೆ ಕಲಬುರಗಿ ನಗರದ ಆನಂದ್ ಕಾಲೋನಿ ನಿವಾಸಿಯಾಗಿದ್ದು, ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ವಂಜರಖೇಡ ಗ್ರಾಮದಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡ್ತಿದ್ದರು. ಹೀಗಾಗಿ ಬೀದರ್‌ನಲ್ಲೇ ಮನೆ ಮಾಡಿದ್ದ ಜ್ಯೋತಿ ಅಲ್ಲಿಂದಲೇ ಶಾಲೆಗೆ ಹೋಗಿ ಬರ್ತಿದ್ದರು. ವಾರಕ್ಕೊಮ್ಮೆ ಕಲಬುರಗಿಯಲ್ಲಿರುವ ಮನೆಗೆ ಬರುತ್ತಿದ್ದರು.

ಇದನ್ನೂ ಓದಿ: ಪತ್ನಿಯ ಕೊಲ್ಲಲು ಶೂಟಿಂಗ್ ಅಕಾಡೆಮಿಯಲ್ಲಿ ತರಬೇತಿ ಪಡೆದಿದ್ದ ಟೆಕ್ಕಿ ಪತಿ ಮುರುಗನ್

ಆದರೆ ಈಗ ಕಲಬುರಗಿಯಿಂದ ಬೀದರ್‌ಗೆ ತೇರಳುವಾಗ ಮಾರ್ಗ ಮಧ್ಯದ ಕಮಲಾಪುರದ‌ ಕಲ್ಮೂಡ ಎಂಬಲ್ಲಿ ಜ್ಯೋತಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಶಿಕ್ಷಕಿ ಜ್ಯೋತಿಯನ್ನು ಕೊಲೆ ಮಾಡಿದ ದುಷ್ಕರ್ಮಿಗಳು ಬಳಿಕ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಘಟನೆ ಸಂಬಂಧ ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಕೊಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ, ಪೊಲೀಸರ ತನಿಖೆಯ ನಂತರವೇ ಶಿಕ್ಷಕಿಯ ಕೊಲೆಗೆ ಕಾರಣ ತಿಳಿಯಲಿದೆ.

ಇದನ್ನೂ ಓದಿ: ಎಲ್‌&ಟಿಯ ₹57 ಕೋಟಿ ಹಣ ಕೆ-ರೈಡ್‌ನಿಂದ ಮುಟ್ಟುಗೋಲು

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಪತ್ನಿಯ ಕೊಲ್ಲಲು ಶೂಟಿಂಗ್ ಅಕಾಡೆಮಿಯಲ್ಲಿ ತರಬೇತಿ ಪಡೆದಿದ್ದ ಟೆಕ್ಕಿ ಪತಿ ಮುರುಗನ್
ಮಹಿಳಾ ಕಸ್ಟಮ್ಸ್ ಅಧಿಕಾರಿ ಮೇಲೆ ಅತ್ಯಾ*ಚಾರ: ಖಾಸಗಿ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್‌ಮೇಲ್ : ಉದ್ಯಮಿ ಅಂದರ್