ಬೃಹತ್‌ ಟ್ರಕ್‌ಗಳ ಮುಖಾಮುಖಿ ಡಿಕ್ಕಿ: ಲಾರಿಗಳ ಮುಂಭಾಗ ಛಿದ್ರ ಛಿದ್ರ

By Sathish Kumar KH  |  First Published Apr 23, 2023, 5:23 PM IST

ಎರಡು ಬೃಹತ್‌ ಲಾರಿಗಳು ಇಂದು ಬೆಳ್ಳಂಬೆಳಗ್ಗೆ  ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲಿಯೇ ಲಾರಿ ಚಾಲಕ ಸಾವನ್ನಪ್ಪಿದ ದುರ್ಘಟನೆ ಕಲಬುರಗಿ ಜಿಲ್ಲೆ ಕಮಲಾಪುರ ಪಟ್ಟಣ ಹೊರವಲಯದಲ್ಲಿ ನಡೆದಿದೆ.


ಕಲಬುರಗಿ (ಏ.23):  ಎರಡು ಬೃಹತ್‌ ಲಾರಿಗಳು ಇಂದು ಬೆಳ್ಳಂಬೆಳಗ್ಗೆ  ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲಿಯೇ ಲಾರಿ ಚಾಲಕ ಸಾವನ್ನಪ್ಪಿದ ದುರ್ಘಟನೆ ಕಲಬುರಗಿ ಜಿಲ್ಲೆ ಕಮಲಾಪುರ ಪಟ್ಟಣ ಹೊರವಲಯದಲ್ಲಿ ನಡೆದಿದೆ.

ರಾಜಸ್ಥಾನ ಮೂಲದ ಚಾಲಕ ಅಬ್ಬಾಸ್ (39) ಮೃತ ದುರ್ದೈವಿ ಆಗಿದ್ದಾನೆ. ಹುಮನಾಬಾದ್ ಕಡೆಯಿಂದ ಕಲಬುರಗಿಗೆ ಬರುತ್ತಿದ್ದ ಲಾರಿ ಹಾಗೂ ಜೇವರ್ಗಿಯಿಂದ ಹುಮನಾಬಾದ್ ಕಡೆ ತೆರಳುತ್ತಿದ್ದ ಮತ್ತೊಂದು ಲಾರಿ ಮುಖಾಮುಖಿಯಾಗಿ ಡಿಕ್ಕಿಯಾಗಿವೆ. ಹೀಗೆ ಡಿಕ್ಕಿಯಾದ ರಭಸಕ್ಕೆ ಎರಡೂ ಲಾರಿಗಳ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಒಬ್ಬ ಲಾರಿ ಚಾಲಕ ಸಾವನ್ನಪ್ಪಿದರೆ ಮತ್ತೊಂದು ಲಾರಿಯ ಚಾಲಕ ಗಂಭೀರ ಗಾಯಗೊಂಡಿದ್ದಾನೆ. ಒಟ್ಟಾರೆ, ಈ ಭೀಕರ ಅಪಘಾತದಲ್ಲಿ ಮೂವರಿಗೆ ಗಂಭೀರ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದೆ ಎಂದು ತಿಳಿದುಬಂದಿದೆ.

Tap to resize

Latest Videos

undefined

ಶಿವಮೊಗ್ಗದಲ್ಲಿ ಗ್ಯಾಸ್ ಸಿಲಿಂಡರ್ ಲಾರಿ ಪಲ್ಟಿ: ಟ್ರ್ಯಾಕ್ಟರ್‌ ಉರುಳಿ ಒಬ್ಬ ಸಾವು

ಎರಡೂ ಲಾರಿಗಳು ಮರಕ್ಕೆ ಡಿಕ್ಕಿ: ಇನ್ನು ಎರಡೂ ಲಾರಿಗಳು ಮುಖಾಮುಖಿ ಡಿಕ್ಕಿಯಾದ ನಂತರ, ರಸ್ತೆಯ ಬಳಿ ಇರುವ ಇಳಿಜಾರಿನಲ್ಲಿದ್ದ ಹುಣಸೆ ಮರಕ್ಕೆ ಹೋಗಿ ಡಿಕ್ಕಿಯಾಗಿ ನಿಂತಿವೆ. ರಸ್ತೆಯಲ್ಲಿ ಯಾವುದೇ ತಿರುವುಗಳು ಇಲ್ಲದಿದ್ದರೂ ನಿದ್ರೆಯ ಮಂಪರಿನಲ್ಲಿ ಬಲಭಾಗದಲ್ಲಿ ಬಂದ ವ್ಯಕ್ತಿ ಇನ್ನೊಂದು ಲಾರಿಗೆ ಡಿಕ್ಕಿ ಹೊಡೆದಿದ್ದಾನೆ ಎಂದು ತಿಳಿದುಬಂದಿದೆ.ಇನ್ನು ಈ ವಾಹನಗಳು ಬೃಹತ್‌ ಗಾತ್ರದಾಗಿದ್ದು ಟ್ರ್ಯಾಕ್ಟರ್‌ಗಳಿಂದ ವಾಹನ ತೆರವು ಮಾಡಲು ಸಾಧ್ಯವಾಗದೇ ಸ್ಥಳೀಯರು ಸುಮ್ಮನಾಗಿದ್ದಾರೆ. ಇದರಿಂದ ರಸ್ತೆಯಲ್ಲಿ ಭಾರಿ ಟ್ರಾಫಿಕ್ ಜಾಮ್‌ ಉಂಟಾಗಿತ್ತು. ಪೊಲೀಸರು ಬಂದು ಸ್ಥಳ ಪರಿಶೀಲನೆ ನಡೆಸಿ, ಕ್ರೇನ್‌ಗಳ ಮೂಲಕ ತೆರವುಗೊಳಿಸಿದ್ದಾರೆ. 

ಶಿವಮೊಗ್ಗದಲ್ಲಿ ಟ್ರ್ಯಾಕ್ಟರ್‌ ಪಲ್ಟಿ- ಓರ್ವ ಸಾವು: ಮತ್ತೊಂದೆಡೆ ಶಿವಮೊಗ್ಗ ಜಿಲ್ಲೆಯ ಆಯನೂರು ಗ್ರಾಮದಲ್ಲಿ ಕೆರೆ ದಂಡೆ ಮೇಲೆ ಚಲಿಸುತ್ತಿದ್ದ ಟ್ಯಾಕ್ಟರ್ ಪಲ್ಟಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊರ್ವನ ಸ್ಥಿತಿ ಗಂಭೀರವಾಗಿದೆ. ಇನ್ನು ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಶಿವಮೊಗ್ಗ ತಾಲೂಕಿನ ಆಯನೂರು ಗ್ರಾಮದಲ್ಲಿ ನಡೆದ ಘಟನೆ ನಡೆದಿದ್ದು, ಸಾವನ್ನಪ್ಪಿದ ವ್ಯಕ್ತಿಯನ್ನು ತಮಡಿಹಳ್ಳಿ ಗ್ರಾಮದ ಬೀರೇಶ (40 ) ಎಂದು ಗುರುತಿಸಲಾಗುದೆ. ಇನ್ನು ಮಧು ಎಂಬ ಯುವಕಜರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾನೆ. ಈ ಘಟನೆಯು ಕುಂಸಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.

ಕಾಂಗ್ರೆಸ್‌ನ್ನ ನಿರ್ಮಾ ಸರ್ಫ್ ಹಾಕಿ ತೊಳೆದ ಸಿದ್ದರಾಮಯ್ಯ: ಮನೆಗೆ ಹೋಗೋದಷ್ಟೇ ಬಾಕಿ

ಗ್ಯಾಸ್‌ ಸಿಲಿಂಡರ್‌ ಲಾರಿ ಪಲ್ಟಿ: ಮಂಗಳೂರಿನಿಂದ ಹಾವೇರಿ ಜಿಲ್ಲೆಯ ರಾಣೆಬೆನ್ನೂರಿಗೆ ಹೋಗುತ್ತಿದ್ದ ಗ್ಯಾಸ್ ಸಿಲಿಂಡರ್ ತುಂಬಿದ  ಲಾರಿ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಪಟ್ಟಣದ ಬಳಿ ಪಲ್ಟಿಯಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಜೊತೆಗೆ, ಯಾವುದೇ ಸಿಲಿಂಡರ್‌ಗಳು ಸ್ಪೋಟಗೊಳ್ಳದ ಕಾರಣ ಸ್ಥಳದಲ್ಲಿಯೂ ಯಾವುದೇ ಅಹಿತಕರ ಘಟನೆ ನಡೆದಿಲ್ಲ ಎಂದು ತಿಳಿದುಬಂದಿದೆ. ಇನ್ನು ಈ ಲಾರಿಯಲ್ಲಿ ಬರೋಬ್ಬರಿ 372 ಗ್ಯಾಸ್ ಸಿಲಿಂಡರ್‌ಗಳಿದ್ದು, ಯಾವುದೇ ಅಹಿತಕರ ಘಟನೆ ನಡೆಯದಿದ್ದರೂ, ವಾಹನ ಚಾಲಕ ಶಿಗ್ಗಾವಿಯ ಶಿವಲಿಂಗಯ್ಯ ಹಿರೇಮಠ್‌ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಬಂದು ಸ್ಥಳ ಪರಿಶೀಲನೆ ಮಾಡಿದ್ದಾರೆ.

click me!