ನವ ವಿವಾಹಿತ ಎನ್‌ಎಸ್‌ಜಿ ಕಮಾಂಡೋ ಸಾವು: ರಜೆ ಮುಗಿಸಿ ಕೆಲಸಕ್ಕೆ ಹೋಗುತ್ತಿದ್ದಾಗ ದುರ್ಘಟನೆ

By Sathish Kumar KH  |  First Published May 24, 2023, 2:05 PM IST

ರಾಷ್ಟ್ರೀಯ ಭದ್ರತಾ ಪಡೆ ಬ್ಲ್ಯಾಕ್‌ ಕ್ಯಾಟ್‌ ವಿಭಾಗಕ್ಕೆ (ಎನ್‌ಎಸ್‌ಜಿ) ಕಮಾಂಡೋ ಆಗಿ ನೇಮಕವಾಗಿದ್ದ ಚಿಕ್ಕಮಗಳೂರಿನ ನವ ವಿವಾಹಿತ ರಜೆ ಮುಗಿಸಿ ಕೆಲಸಕ್ಕೆ ಹೋಗುವಾಗ ದುರಂತವಾಗಿ ಸಾವನ್ನಪ್ಪಿದ್ದಾರೆ.


ಚಿಕ್ಕಮಗಳೂರು (ಮೇ 24): ಇತ್ತೀಚೆಗೆ ರಾಷ್ಟ್ರೀಯ ಭದ್ರತಾ ಪಡೆ ಬ್ಲ್ಯಾಕ್‌ ಕ್ಯಾಟ್‌ ವಿಭಾಗಕ್ಕೆ (ಎನ್‌ಎಸ್‌ಜಿ) ಕಮಾಂಡೋ ಆಗಿ ನೇಮಕವಾಗಿದ್ದ ಚಿಕ್ಕಮಗಳೂರಿನ ನವ ವಿವಾಹಿತ ರಜೆ ಮುಗಿಸಿ ಕೆಲಸಕ್ಕೆ ಹೋಗುವಾಗ ದುರಂತವಾಗಿ ಸಾವನ್ನಪ್ಪಿದ್ದಾರೆ.

ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಆರಂಭವಾದಾಗಿಂದ ರಸ್ತೆ ಅಪಘಾತಗಳ ಸಂಖ್ಯೆಯನ್ನು ತೀವ್ರ ಹೆಚ್ಚಳವಾಗುತ್ತಿದೆ. ಇದಕ್ಕೆ ರಸ್ತೆಯಲ್ಲಿ ಮೊದಲ ಮಳೆ ಬಿದ್ದ ನಂತರ ರಸ್ತೆಯಲ್ಲಿ ವಾಹನಗಳು ಜಾರುವ ಹಾಗೂ ನಿಯಂತ್ರಣ ಕಳೆದುಕೊಳ್ಳುವ ಸಾಧ್ಯತೆ ಹೆಚ್ಚಾಗುತ್ತದೆ. ಈಗ ಚಿಕ್ಕಮಗಳೂರಿನ ಮೂಲದ  ರಾಷ್ಟ್ರೀಯ ಭದ್ರತಾ ಪಡೆಯ ಬ್ಲ್ಯಾಕ್‌ ಕ್ಯಾಟ್‌ ವಿಭಾಗದಲ್ಲಿ (National Security Guard-NSG) ಸೇವೆ ಸಲ್ಲಿಸುತ್ತಿದ್ದ ದೀಪಕ್‌ (22) ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.

Latest Videos

undefined

ಮಲಗಿದ್ದಾಗ ಹಾವು ಕಚ್ಚಿದೆ ಅಂದ್ರೂ ಆಸ್ಪತ್ರೆಗೆ ಸೇರಿಸಲಿಲ್ಲ: ಎದ್ದೇಳುವಷ್ಟರಲ್ಲಿ ಹೆಣವಾಗಿದ್ದ ಮಗಳು

2020ರಲ್ಲಿ ಮದುವೆಯಾಗಿದ್ದ ಕಮ್ಯಾಂಡೋ ದೀಪಕ್‌: ಮೃತ ಎನ್‌ಎಸ್‌ಜಿ ಕಮ್ಯಾಂಡೋ ದೀಪಕ್ ತರೀಕೆರೆ ತಾಲೂಕಿನ ತಣಿಗೇಬೈಲು ನಿವಾಸಿ ಆಗಿದ್ದರು. ಇತ್ತೀಚೆಗೆ ಎನ್.ಎಸ್.ಜಿ. ಬ್ಲ್ಯಾಕ್ ಕ್ಯಾಟ್ ಕಮಾಂಡೋವಾಗಿ ನೇಮಕವಾಗಿದ್ದರು. ಕಳೆದ 2020ರಲ್ಲಿ ಮದುವೆಯಾಗಿದ್ದ ದೀಪಕ್‌ ಮನೆಯಲ್ಲಿ ಕಾರ್ಯಕ್ರಮವಿದ್ದ ಹಿನ್ನೆಲೆಯಲ್ಲಿ ಒಮದು ತಿಂಗಳ ರಜೆಯನ್ನು ತೆಗೆದುಕೊಂಡು ತವರೂರಿಗೆ ವಾಪಸ್‌ ಬಂದಿದ್ದರು. ಊಡಿಗೆ ಬಂದು ಹೊಸ ಬೈಕ್‌ ಅನ್ನು ಖರೀದಿ ಮಾಡಿದ್ದರು. ಈಗ ರಜೆ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಕೆಲಸಕ್ಕೆ ಮರಳಿ ಹೋಗಬೇಕಿತ್ತು. ಆದ್ದರಿಂದ ಹೊಸ ಬೈಕ್‌ನಲ್ಲಿ ಚಿಕ್ಕಮಗಳೂರಿನಿಂದ ಬೆಂಗಳೂರಿಗೆ ಹೊಸ ಬೈಕ್‌ನಲ್ಲಿ ಹೋಗುವಾಗ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಈ ಘಟನೆ ತಿಳಿದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. 

ಜಮೀನು ವಿವಾದಕ್ಕೆ ಕೊಲೆ ಮಾಡಿದ್ದ ಆರೋಪಿಗೆ ಜೀವಾವಧಿ ಶಿಕ್ಷೆ: ಶಿವಮೊಗ್ಗ ಜಿಲ್ಲೆಯಲ್ಲಿ 2016ರ ಡಿಸೆಂಬರ್ 26ರಂದು ಹೊಳಲೂರಿನಲ್ಲಿ ಜಮೀನು ವಿವಾದದ ಹಿನ್ನೆಲೆಯಲ್ಲಿ ಕೊಲೆ ನಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ಕಳೆದ 7 ವರ್ಷಗಳ ಬಳಿಕ ಜೀವಾವಧಿ ಶಿಕ್ಷೆ ಮತ್ತು ದಂಡವನ್ನು ವಿಧಿಸಿ ನ್ಯಾಯಾಲಯ ಆದೇಶವನ್ನು ಹೊರಡಿಸಿದೆ. ಜಮೀನು ವಿವಾದದ ಹಿನ್ನೆಲೆಯಲ್ಲಿ ಕೊಲೆ ಮಾಡಲಾಗಿತ್ತು. ಶಿವಮೊಗ್ಗದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಆದೇಶ ಹೊರಡಿಸಲಾಗಿದೆ. ಕೊಲೆ ಆರೋಪಿಗೆ ಜೀವಾವಧಿ ಶಿಕ್ಷೆ ಮತ್ತು 1,00,000 (ಒಂದು ಲಕ್ಷ) ರೂಪಾಯಿ ದಂಡವನ್ನು ವಿಧಿಸಲಾಗಿದೆ.

ಅಯ್ಯೋ.. ನನ್ನ ಮದುವೆಯಾಗಲಿಲ್ಲ ಅಂತ ವಿಷ ಕುಡಿದು ಸತ್ತೇ ಹೋದ ಯುವಕ!

ದಂಡ ಕಟ್ಟದಿದ್ದರೆ 2 ವರ್ಷ ಹೆಚ್ಚುವರಿ ಜೈಲು: ಆರೋಪಿಯು ದಂಡವನ್ನು ಕಟ್ಟಲು ವಿಫಲನಾದರೆ ಹೆಚ್ಚುವರಿ 2 ವರ್ಷ ಸಾದಾ ಕಾರಾವಾಸ ಶಿಕ್ಷೆ ವಿಧಿಸಬೇಕು ಎಂದು ನ್ಯಾಯಾಲಯ ಆದೇಶಸಿದೆ. ಘಟನೆಗೆ ಬರುವುದಾದರೆ ಶಿವಮೊಗ್ಗ ತಾಲೂಕಿನ ಹೊಳಲೂರು ಗ್ರಾಮದ ಪ್ರಕಾಶ್ ಎನ್ನುವವರು ಶಿವಮೊಗ್ಗದ ಶರಾವತಿ ನಗರದ ರೇವಣಪ್ಪ (51) ಎಂಬುವವರನ್ನು ಜಮೀನು ವಿವಾದದ ಕಾರಣಕ್ಕಾಗಿ ಕೊಲೆ ಮಾಡಿದ್ದರು. ಈ ಕುರಿತು ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಂದಿನ ಸಿಪಿಐ ಲೋಕೇಶ್ ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಮೃತನ ಪತ್ನಿ ಕಮಲಮ್ಮ ನೀಡಿದ ದೂರಿನ ಮೇರೆಗೆ ಕಲಂ 143, 147, 148, 302, 114 ಸಹಿತ 149 ಐಪಿಸಿ ರೀತ್ಯಾ ಪ್ರಕರಣ ದಾಖಲಾಗಿತ್ತು. ಈಗ ಪ್ರಕಾಶ್‌ಗೆ  (45)  ಶಿಕ್ಷೆ ಪ್ರಕಟವಾಗಿದೆ. 

click me!