
ಬೆಂಗಳೂರು(ಜ.13): ಅಕ್ರಮ ಹಣ ವರ್ಗಾವಣೆ ಮತ್ತು 500 ಕೋಟಿಗಿಂತ ಹೆಚ್ಚು ಮೊತ್ತದ ವಂಚನೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕರಣ್ ಗ್ರೂಪ್ ಬಿಲ್ಡರ್ಸ್ ಡೆವಲಪರ್ಸ್ ಮುಖ್ಯಸ್ಥ ಮಹೇಶ್ ಬಿ.ಓಜಾ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಬಂಧಿಸಿದ್ದಾರೆ.
ಆರೋಪಿಯನ್ನು ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿ, ಹೆಚ್ಚಿನ ವಿಚಾರಣೆಗೆ 10 ದಿನ ಇ.ಡಿ. ವಶಕ್ಕೆ ಪಡೆದುಕೊಂಡಿದ್ದಾರೆ. ರಿಯಲ್ ಎಸ್ಟೇಟ್ ಯೋಜನೆಗಳಲ್ಲಿ ಹೂಡಿಕೆ ಹೆಸರಲ್ಲಿ ಹಣ ಪಡೆದು ವಂಚಿಸಿದ ಆರೋಪದ ಮೇಲೆ ಓಜಾ ವಿರುದ್ಧ ರಾಜ್ಯದ ಪೊಲೀಸರು ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ. ವಿವಿಧ ರಿಯಲ್ ಎಸ್ಟೇಟ್ ಯೋಜನೆಗಳಲ್ಲಿ ದೂರುದಾರರು ಒಟ್ಟು .526 ಕೋಟಿ ಹೂಡಿಕೆ ಮಾಡಿರುವುದು ತನಿಖೆಯಿಂದ ತಿಳಿದುಬಂದಿದೆ. ಈ ಹಿಂದೆ ಓಜಾರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದರು ಎಂದು ಇಡಿ ಅಧಿಕಾರಿಗಳು ತಿಳಿಸಿದ್ದಾರೆ.
Mangaluru: ‘ಗಾಂಜಾ ಡಾಕ್ಟರ್’ಗಳ ಕರ್ಮಕಾಂಡ ಬಯಲು: ಮತ್ತೆ 3 ಮಂದಿ ಬಂಧನ
526 ಕೋಟಿ ಹೂಡಿಕೆಯಲ್ಲಿ 121.5 ಕೋಟಿಯನ್ನು ಕರಣ್ ಗ್ರೂಪ್ ಬಿಲ್ಡರ್ಸ್ ಕೈಗೊಂಡಿದ್ದ ರಿಯಲ್ ಎಸ್ಟೇಟ್ ಯೋಜನೆಯಲ್ಲಿ ಹೂಡಿಕೆ ಮಾಡಲಾಗಿದೆ. ಜನರಿಂದ ಪಡೆಯಲಾದ ಹಣವನ್ನು ನಿಗದಿತ ಯೋಜನೆಗೆ ಬಳಕೆ ಮಾಡದೆ ಬೇರೆ ಉದ್ದೇಶಕ್ಕೆ ಬಳಕೆಯಾಗಿರುವುದು ತನಿಖೆ ವೇಳೆ ಗೊತ್ತಾಗಿದೆ. ಕೋಟ್ಯಂತರ ರು. ಅಕ್ರಮವಾಗಿ ವರ್ಗಾವಣೆ ಮಾಡಿರುವುದೂ ಗೊತ್ತಾಗಿದೆ. ಈ ಹಿನ್ನೆಲೆಯಲ್ಲಿ ಹೆಚ್ಚಿನ ವಿಚಾರಣೆ ನಡೆಸಲು ಆರೋಪಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಇಡಿ ಮೂಲಗಳು ಹೇಳಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ