15 ಮಾರ್ಚ್ 2022 ರಿಂದ ಬಿಕಾಂ ಪರೀಕ್ಷೆ ಆರಂಭವಾಗಲಿದ್ದು ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆಸಿದ ಆರೋಪಿಗೆ ಬಿಕಾಂ ಪರೀಕ್ಷೆ ಬರೆಯಲು ರಾಜ್ಯ ಹೈಕೋರ್ಟ್ ಅನುಮತಿ ನೀಡಿದೆ.
ಬೆಂಗಳೂರು(ಮಾ.11): ಅಪ್ರಾಪ್ತೆ ಮೇಲೆ ಅತ್ಯಾಚಾರ (Pocso Case) ನಡೆಸಿದ ಆರೋಪಿಗೆ (Accuse) ಬಿಕಾಂ ಪರೀಕ್ಷೆ (Bcom Exam) ಬರೆಯಲು ಹೈಕೋರ್ಟ್ ಅನುಮತಿ ನೀಡಿದೆ.15 ಮಾರ್ಚ್ 2022 ರಿಂದ ಬಿಕಾಂ ಪರೀಕ್ಷೆ ಆರಂಭವಾಗಲಿದ್ದು 19 ವರ್ಷದ ವಿದ್ಯಾರ್ಥಿಗೆ ಪರೀಕ್ಷೆ ಬರೆಯಲು ರಾಜ್ಯ ಉಚ್ಛ ನ್ಯಾಯಾಲಯ ಸಮ್ಮತಿ (Karnataka High Cout) ಸೂಚಿಸಿದೆ. ಪರೀಕ್ಷೆ ಬರೆಯಲು ಜಾಮೀನು ನೀಡುವಂತೆ ಕೋರಿ ಆರೋಪಿ ಸಲ್ಲಿಸಿದ್ದ ಅರ್ಜಿ ಮನವಿ ಆಲಿಸಿದ ನ್ಯಾಯಮೂರ್ತಿ ವಿ.ಶ್ರೀಷಾನಂದ ಅವರಿದ್ದ ಏಕಸದಸ್ಯ ಪೀಠ, ಈ ಆದೇಶ ಮಾಡಿದೆ.
ಅರ್ಜಿದಾರರ ವಾದ ಆಲಿಸಿದ ಬಳಿಕ ನ್ಯಾಯಪೀಠ, ''ಆರೋಪಿ ವಿದ್ಯಾರ್ಥಿಗೆ ಮಾ.15ರಿಂದ ಮಾ.31ರವರೆಗೆ ಬಿ.ಕಾಂ ಪದವಿಯ ಮೂರನೇ ಸೆಮಿಸ್ಟರ್ ಪರೀಕ್ಷೆ ನಿಗದಿಯಾಗಿದ್ದು, ಜಾಮೀನು ನೀಡುವಂತೆ ಕೋರಿದ್ದಾನೆ. ಆದರೆ, ಪ್ರಕರಣ ತನಿಖಾ ಹಂತದಲ್ಲಿರುವುದರಿಂದ ಜಾಮೀನು ನೀಡಿದರೆ ತನಿಖೆಗೆ ಅಡ್ಡಿಯಾಗುತ್ತದೆಂದು ಅಭಿಯೋಜಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಆರೋಪಿಯ ಭವಿಷ್ಯ ಕತ್ತಲೆಗೆ ದೂಡಲು ಸಾಧ್ಯವಿಲ್ಲ. ಆದ್ದರಿಂದ ಪರೀಕ್ಷೆ ಬರೆಯಲು ಆರೋಪಿಗೆ ಸೂಕ್ತ ವ್ಯವಸ್ಥೆ ಮಾಡಬೇಕು'' ಎಂದು ನ್ಯಾಯಪೀಠ ಹೇಳಿದೆ.
undefined
ಷರತ್ತುಗಳನ್ನು ವಿಧಿಸಿ ಪರೀಕ್ಷೆ ಬರೆಯಲು ಆರೋಪಿಗೆ ಅವಕಾಶ ಕಲ್ಪಿಸಿ ಅರ್ಜಿ ಇತ್ಯರ್ಥಪಡಿಸಿರುವ ಹೈಕೋರ್ಟ್, ಈ ಆದೇಶವು ಆರೋಪಿ ಮುಂದೆ ಪ್ರಕರಣ ಸಂಬಂಧ ಜಾಮೀನು ಕೋರಿ ಅರ್ಜಿ ಸಲ್ಲಿಸುವುದಕ್ಕೆ ಅಡ್ಡಿಯಾಗುವುದಿಲ್ಲಎಂದು ಸ್ಪಷ್ಟಪಡಿಸಿದೆ.
CBSE TERM-II BOARD EXAMS: ಏ.26 ರಿಂದ ಸಿಬಿಎಸ್ಇ 10, 12ನೇ ತರಗತಿಯ ಎರಡನೆ ಅವಧಿಯ ಬೋರ್ಡ್ ಪರೀಕ್ಷೆ
ಆರೋಪಿಯನ್ನು ಭದ್ರತಾ ಸಿಬ್ಬಂದಿಯ ಬೆಂಗಾವಲಿನೊಂದಿಗೆ ಪರೀಕ್ಷಾ ಕೇಂದ್ರಕ್ಕೆ ಕರೆತರಬೇಕು. ಪರೀಕ್ಷೆ ಮುಗಿದ ನಂತರ ಜೈಲಿಗೆ ವಾಪಸ್ ಕರೆದೊಯ್ಯಬೇಕು. ಜೈಲು ಅಧಿಕಾರಿಗಳು ಆರೋಪಿ ಖರ್ಚಿನಲ್ಲಿಯೇ ಪರೀಕ್ಷಾ ಕೊಠಡಿಯಲ್ಲಿಭದ್ರತಾ ಸಿಬ್ಬಂದಿ ನಿಯೋಜಿಸಬೇಕು ಎಂದು ಹೈಕೋರ್ಟ್ ಷರತ್ತು ವಿಧಿಸಿದೆ. ಆರೋಪಿಯ ಪೋಷಕರು ಆತನಿಗೆ ಅಗತ್ಯ ಪುಸ್ತಕಗಳನ್ನು ತಂದು ಕೊಡಲು ಅಧಿಕಾರಿಗಳು ಅನುಮತಿ ನೀಡಬೇಕು ಎಂದು ಕೋರ್ಟ್ ತಿಳಿಸಿದೆ.
ಅಲ್ಲದೆ, ಪರೀಕ್ಷಾ ಕೇಂದ್ರಕ್ಕೆ ತೆರಳುವಾಗ ಮತ್ತು ಜೈಲಿಗೆ ಹಿಂದಿರುವಾಗ ಆರೋಪಿ ಕೈಗೆ ಬೇಡಿ ಹಾಕಬಾರದು. ಆರೋಪಿಯ ಘನತೆ ಮತ್ತು ಗೌಪ್ಯತೆ ಕಾಪಾಡುವ ದೃಷ್ಟಿಯಿಂದ ಬೆಂಗಾವಲು ಪಡೆಯ ಭದ್ರತಾ ಸಿಬ್ಬಂದಿ ಸಮವಸ್ತ್ರ ಧರಿಸಬಾರದು. ಭದ್ರತಾ ಸಿಬ್ಬಂದಿ ನಿಯೋಜನೆಗೆ ಆಗುವ ಖರ್ಚನ್ನು ಅರ್ಜಿದಾರ ಮುಂಚಿತವಾಗಿಯೇ ಜೈಲು ಪ್ರಾಧಿಕಾರಕ್ಕೆ ಪಾವತಿಸಬೇಕು.
ಪರೀಕ್ಷೆ ಮುಗಿದ ನಂತರ ಮುಂದಿನ ಪರೀಕ್ಷಾ ದಿನಾಂಕದವರೆಗೆ ಅರ್ಜಿದಾರ ಕೇಂದ್ರ ಕಾರಾಗೃಹದಲ್ಲಿಯೇ ಇರಬೇಕು ಎಂದು ನಿರ್ದೇಶನ ನೀಡಿದೆ. ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸರು ವಿದ್ಯಾರ್ಥಿಯನ್ನು ಬಂಧಿಸಿ 2022 ರ ಜನವರಿ 20 ರಂದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು.
CBSE TERM-II BOARD EXAMS: ಏ.26 ರಿಂದ ಸಿಬಿಎಸ್ಇ 10, 12ನೇ ತರಗತಿಯ ಎರಡನೆ ಅವಧಿಯ ಬೋರ್ಡ್ ಪರೀಕ್ಷೆ
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಪರೀಕ್ಷೆ ಏಪ್ರಿಲ್ 22ರಿಂದ ಮೇ 18ರವರೆಗೆ ನಡೆಯಲಿದೆ.
ವೇಳಾಪಟ್ಟಿ ಪ್ರಕಾರ ಪರೀಕ್ಷೆ ಇಂತಿದೆ:
ಏಪ್ರಿಲ್ 22: ತರ್ಕಶಾಸ್ತ್ರ, ಬಿಸಿನೆಸ್ ಸ್ಟಡೀಸ್
ಏಪ್ರಿಲ್ 23: ಗಣಿತ, ಶಿಕ್ಷಣ
ಏಪ್ರಿಲ್ 25: ಅರ್ಥಶಾಸ್ತ್ರ
ಏಪ್ರಿಲ್ 26: ಹಿಂದೂಸ್ತಾನಿ ಸಂಗೀತ, ಮನೋವಿಜ್ಞಾನ, ರಸಾಯನಶಾಸ್ತ್ರ, ಮೂಲ ಗಣಿತ
ಏಪ್ರಿಲ್ 27: ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
ಏಪ್ರಿಲ್ 28: ಕನ್ನಡ, ಅರೇಬಿಕ್
ಮೇ 2: ಭೂಗೋಳ, ಜೀವಶಾಸ್ತ್ರ
ಮೇ 4: ಮಾಹಿತಿ ತಂತ್ರಜ್ಞಾನ, ಚಿಲ್ಲರೆ ವ್ಯಾಪಾರ, ಆಟೋಮೊಬೈಲ್, ಆರೋಗ್ಯ ರಕ್ಷಣೆ, ಸೌಂದರ್ಯ ಮತ್ತು ಸ್ವಾಸ್ಥ್ಯ
ಮೇ 5: ಇಂಗ್ಲಿಷ್
ಮೇ 10: ಇತಿಹಾಸ, ಭೌತಶಾಸ್ತ್ರ
ಮೇ 12: ರಾಜ್ಯಶಾಸ್ತ್ರ, ಸ್ಟಾಟಸ್ಟಿಕ್ಸ್
ಮೇ 14: ಸಮಾಜಶಾಸ್ತ್ರ, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್
ಮೇ 17: ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂವಿಜ್ಞಾನ, ಗೃಹ ವಿಜ್ಞಾನ
ಮೇ 18: ಹಿಂದಿ