
ಬೆಂಗಳೂರು, (ಮೇ.29): ಬೆಂಗಳೂರಿನ ಪಾದರಾಯನಪುರದಲ್ಲಿ ಕೊರೋನಾ ವಾರಿಯರ್ಸ್ ಮೇಲೆ ಹಲ್ಲೆಗೆ ಯತ್ನಿಸಿದ್ದ 126 ಆರೋಪಿಗಳಿಗೂ ಜಾಮೀನು ಸಿಕ್ಕಿದೆ.
ಪಾದರಾಯನಪುರ ಪುಂಡರಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ನೀಡಿ ಇಂದು (ಶುಕ್ರವಾರ) ಆದೇಶ ಹೊರಡಿಸಿದೆ. ಆರೋಪಿಗಳು 1 ಲಕ್ಷ ರೂ. ಬಾಂಡ್, ಶ್ಯೂರಿಟಿ ನೀಡೇಕೆಂದು ನ್ಯಾಯಾಮೂರ್ತಿ ಮೈಕೆಲ್ ಕುನ್ಹಾ ಪೀಠ ಆದೇಶಿಸಿದೆ.
ಪಾದರಾಯನಪುರ ಪುಂಡಾಟಕ್ಕೆ ಬಿಗ್ ಟ್ವಿಸ್ಟ್; ಸಿಕ್ಕಿದೆ ಎಕ್ಸ್‌ಕ್ಲೂಸಿವ್ ಆಡಿಯೋ..!
ಜೈಲಿನಿಂದ ಬಿಡುಗಡೆಗೈ ಮುನ್ನ ಎಲ್ಲಾ ಆರೋಪಿಗಳಿಗೂ ಕೋವಿಡ್19 ಪರೀಕ್ಷೆ ನಡೆಸಬೇಕು. ಪಾಸಿಟಿವ್ ಬಂದ್ರೆ ಅವರಿಗೆ ಸರ್ಕಾರದ ನಿಯಮದಂತೆ ಕ್ರಮಕೈಗೊಳ್ಳಿ. ಎಲ್ಲಾ ಆರೋಪಿಗಳು ಕೋವಿಡ್19 ಮಾರಗಸೂಚಿ ಪಾಲಿಸಬೇಕು. ಇಲ್ಲವಾದರೆ ಮುಂದಿನ ದಿನ ಜಾಮೀನು ರದ್ದುಗೊಳಿಸುವುದಾಗಿ ನ್ಯಾಯಮೂರ್ತಿ ಎಚ್ಚರಿಕೆ ನೀಡಿದ್ದಾರೆ.
ಏಪ್ರಿಲ್ 20ರಂದು ಬೆಂಗಳೂರಿನ ಪಾದರಾಯನಪುರದಲ್ಲಿ ಸೋಂಕಿತನ ಸಂಪರ್ಕದಲ್ಲಿದ್ದ 58 ಜನರನ್ನು ಕ್ವಾರಂಟೈನ್‌ಗೆ ಅಂತ ಕರೆದುಕೊಂದು ಹೋಗಲು ಬಂದಿದ್ದ ವೇಳೆ ಈ ಆರೋಪಿಗಳು ಗಲಾಟೆ ಮಾಡಿದ್ದು. ಬ್ಯಾರಿಕೇಡ್ ಕಿತ್ತು ಬಿಬಿಎಂಪಿ ಸಿಬ್ಬಂದಿ, ಪೊಲೀಸ್ ಹಾಗೂ ವೈದ್ಯಕೀಯ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದರು.
ಆರೋಪಿಗಳ ಪರ ಇಸ್ಮಾಯಿಲ್ ಜಬೀವುಲ್ಲಾ ವಾದ ಮಂಡಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ