ರಾಜ್ಯ ವಾಲ್ಮೀಕಿ ನಿಗಮದ ಮೂವರು ಅಧಿಕಾರಿಗಳು ಅಮಾನತು: ಡಿಸಿಎಂ ಸ್ಪಷ್ಟನೆ

Published : Aug 29, 2020, 08:57 PM IST
ರಾಜ್ಯ ವಾಲ್ಮೀಕಿ ನಿಗಮದ ಮೂವರು ಅಧಿಕಾರಿಗಳು ಅಮಾನತು: ಡಿಸಿಎಂ ಸ್ಪಷ್ಟನೆ

ಸಾರಾಂಶ

ಲಂಚ ಪಡೆದ ಆರೋಪ ಮೇಲೆ ರಾಜ್ಯ ವಾಲ್ಮೀಕಿ ನಿಗಮದ ಮೂವರು ಅಧಿಕಾರಿಗಳು ಅಮಾನತು ಮಾಡಿರುವುದನ್ನು ಸ್ವತಃ ಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು, (ಆ.29): ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಠ ಪಂಗಡಗಳ ಅಭಿವೃದ್ಧಿ ನಿಗಮದ ಮೂವರು ಅಧಿಕಾರಿಗಳನ್ನು ಅಮಾನತು ಗೊಳಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ತಿಳಿಸಿದ್ದಾರೆ.

ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಕಾರಜೋಳ, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಠ ಪಂಗಡಗಳ ಅಭಿವೃದ್ಧಿ ನಿಗಮದ ಮೂವರು ಅಧಿಕಾರಿಗಳನ್ನು ಭೂ ಒಡೆತನ ಯೋಜನೆಯಲ್ಲಿ ಲಂಚ ಪಡೆದ ಆರೋಪದಡಿ ಭ್ರಷ್ಟಾಚಾರ ನಿಗ್ರಹ ದಳವು (ಎಸಿಬಿ) ಬಂಧಿಸಿದ್ದು, ಈ ಮೂವರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ ಸ್ಪಷ್ಟಪಡಿಸಿದರು.

IPLನಿಂದ ಸುರೇಶ್ ರೈನಾ ಔಟ್, ರಾಜಕಾರಣಿ ಪುತ್ರನಿಗೂ ಡ್ರಗ್ಸ್ ಲಿಂಕ್; ಆ.29ರ ಟಾಪ್ 10 ಸುದ್ದಿ!

ನಿಗಮದ ಪ್ರಧಾನ ವ್ಯವಸ್ಥಾಪಕ ಎಸ್.ಎಸ್. ನಾಗೇಶ್, ಸಹಾಯಕ ಪ್ರಧಾನ ವ್ಯವಸ್ಥಾಪಕಾದ ಮಂಜುಳ ಮತ್ತು ಕಚೇರಿ ಅಧೀಕ್ಷಕ ಪಿ.ಡಿ. ಸುಬ್ಬಪ್ಪ ಅವರು ಕರ್ನಾಟಕ ನಾಗರಿಕ ಸೇವಾ ನಿಯಮದನ್ವಯ ಕರ್ತವ್ಯ ಲೋಪವೆಸಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಇವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದ್ದು, ಇಲಾಖೆ ವಿಚಾರಣೆಯನ್ನು ಕಾಯ್ದಿರಿಸಿ ಅಮಾನತು ಮಾಡಲಾಗಿದೆ ಎಂದು ಹೇಳಿದರು.

ಅಮಾನತಿನ ಅವಧಿಯಲ್ಲಿ ಸಕ್ಷಮ ಪ್ರಾಧಿಕಾರದ ಅನುಮತಿ ಇಲ್ಲದೇ ಕೇಂದ್ರಸ್ಥಾನ ಬಿಡಬಾರದು ಎಂದು ಆದೇಶಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ನಿಗಮದ ಕಚೇರಿ ಹಾಗೂ ಇಬ್ಬರು ವ್ಯಪಸ್ಥಾಪಕರ ಮನೆಯಲ್ಲಿ ಒಟ್ಟು 82 ಲಕ್ಷ ರೂ.ಗಳನ್ನು ಎಸಿಬಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಕಡಿಮೆ ಬೆಲೆಗೆ ಭೂಮಿ ಖರೀದಿಸಿ ಅದಕ್ಕೆ ಹೆಚ್ಚಿನ ಬೆಲೆಯನ್ನು ನಮೂದಿಸುತ್ತಿದ್ದರು. 

ಇದೇ ರೀತಿಯಲ್ಲಿ ರಾಯಚೂರು ಜಿಲ್ಲೆಗೆ 8 ಕೋಟಿ ರೂ.ಗಳನ್ನು ಮಂಜೂರು ಮಾಡಲು ಕಡತ ಸಿದ್ಧಪಡಿಸಲಾಗಿತ್ತು. ಇದರಲ್ಲಿ 56 ಲಕ್ಷ ರೂ. ಲಂಚದ ಹಣ ಕಚೇರಿ ಅಧೀಕ್ಷಕ ಸುಬ್ಬಪ್ಪ ಕೈ ಸೇರಲಿದೆ ಎಂಬ ಮಾಹಿತಿ ಮೇರೆಗೆ ಎಸಿಬಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರಾಮನಗರ: ರಸ್ತೆಗೆ ಕುರಿಗಳು ಅಡ್ಡಿ, ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಗ್ರಾಮಸ್ಥರಿಂದ ಹಲ್ಲೆ!
ಬೆಂಗಳೂರು ವಿಜಯ್ ಗುರೂಜಿ ಗ್ಯಾಂಗ್ ಸಮೇತ ಅರೆಸ್ಟ್; ಟೆಕ್ಕಿಗೆ ಲೈಂಗಿಕ ಶಕ್ತಿ ಹೆಚ್ಚಿಸೋದಾಗಿ ₹40 ಲಕ್ಷ ವಂಚನೆ!